Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಜ್ಯದ ಎಲ್ಲ ಸೌರ ವಿದ್ಯುತ್ ಘಟಕಗಳಲ್ಲಿ...

ರಾಜ್ಯದ ಎಲ್ಲ ಸೌರ ವಿದ್ಯುತ್ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್ ವ್ಯವಸ್ಥೆ: ಸಚಿವ ಕೆ.ಜೆ.ಜಾರ್ಜ್

ವಾರ್ತಾಭಾರತಿವಾರ್ತಾಭಾರತಿ27 Jun 2025 6:17 PM IST
share
ರಾಜ್ಯದ ಎಲ್ಲ ಸೌರ ವಿದ್ಯುತ್ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್ ವ್ಯವಸ್ಥೆ: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ರಾಜ್ಯದ ಎಲ್ಲ ಸೌರ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್ ವ್ಯವಸ್ಥೆ ಸ್ಥಾಪಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಶುಕ್ರವಾರ ಬಿಡದಿಯಲ್ಲಿ ಪೇಸ್ ಡಿಜಿಟೆಕ್-ಲಿನೇಜ್ ಪವರ್ ಸಂಸ್ಥೆ ಸ್ಥಾಪಿಸಿರುವ ಸ್ವಯಂ ಚಾಲಿತ 5 ಗಿಗಾವ್ಯಾಟ್ ಅವರ್ ಬ್ಯಾಟರಿ ಎನರ್ಜಿ ಸ್ಟೋರೇಜ್ ಸಿಸ್ಟಂ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹಗಲಿನ ವೇಳೆ ಲಭ್ಯವಿರುವ ಸೌರ ವಿದ್ಯುತ್ತನ್ನು ಸಂಗ್ರಹಿಸಿ ರಾತ್ರಿ ವೇಳೆಯೂ ಬಳಸುವಂತಾಗಬೇಕು. ಈ ನಿಟ್ಟಿನಲ್ಲಿ, ಕನಿಷ್ಠ 2 ತಾಸು ಬಳಸುವಷ್ಟು ಸೌರ ವಿದ್ಯುತ್ತಿನ ಸಂಗ್ರಹಣೆಗಾಗಿ ಎಲ್ಲ ಸೌರ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ರಾಜ್ಯದಲ್ಲಿ ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಹೆಚ್ಚು ಒತ್ತು ನೀಡಲಾಗಿದ್ದು, ಒಟ್ಟಾರೆ ವಿದ್ಯುತ್ ಉತ್ಪಾದನೆಯಲ್ಲಿ ಈ ವಲಯದ ಪಾಲು ಶೇ.65ರಷ್ಟಿದೆ. ಸೌರ ಹಾಗೂ ಪವನ ವಿದ್ಯುತ್ ಉತ್ಪಾದನೆಯ ಪ್ರಮಾಣ ಗಣನೀಯವಾಗಿ ಹೆಚ್ಚಿದ್ದು, ಅವುಗಳಿಂದ ಉತ್ಪಾದನೆಯಾಗುವ ವಿದ್ಯುತ್ತನ್ನು ಸಂಗ್ರಹಿಸಿ ಅಗತ್ಯವಿದ್ದಾಗ ಪೂರೈಸಲು ಬೇಕಾದ ಸೂಕ್ತ ಶೇಖರಣಾ ವ್ಯವಸ್ಥೆ ಮಾಡಿಕೊಳ್ಳುವುದು ಅನಿವಾರ್ಯ ಎಂದರು.

ಪವರ್ ಗ್ರಿಡ್‍ನ ಸ್ಥಿರತೆ ಕಾಯ್ದುಕೊಳ್ಳುವ ಜತೆಗೆ ಕಡಿಮೆ ಬೇಡಿಕೆಯ ಅವಧಿಯಲ್ಲಿ ಉತ್ಪಾದಿಸಲಾದ ನವೀಕರಿಸಬಹುದಾದ ಇಂಧನವನ್ನು ಸಂಗ್ರಹಿಸಿ, ಅಗತ್ಯವಿದ್ದಾಗ ಪೂರೈಸುವ ಉದ್ದೇಶದಿಂದ ಕೇಂದ್ರ ಸರಕಾರವೂ ಸ್ಟೋರೇಜ್ ಪ್ರಾಜೆಕ್ಟ್‌ ಗಳನ್ನು ಉತ್ತೇಜಿಸುತ್ತಿದೆ. ಈ ಕಾರ್ಯದಲ್ಲಿ ಖಾಸಗಿ ಸಂಸ್ಥೆಯವರೂ ಕೈಜೋಡಿಸಿರುವುದು ಸಂತಸದ ವಿಷಯ ಎಂದು ಹೇಳಿದರು.

ವಿದ್ಯುತ್ ಕ್ಷೇತ್ರದಲ್ಲಿ ಕರ್ನಾಟಕ ಮೊದಲಿನಿಂದಲೂ ಮುನ್ನಡೆ ಕಾಯ್ದುಕೊಂಡಿದೆ. ಏಷ್ಯಾ ಖಂಡದಲ್ಲೇ ಮೊದಲ ಜಲ ವಿದ್ಯುತ್ ಯೋಜನೆಯನ್ನು ಪ್ರಾರಂಭಿಸಿದ ಕೀರ್ತಿ ನಾಲ್ವಡಿ ಕೃಷ್ಣರಾಜ ಒಡೆಯರ್‍ಗೆ ಸಲ್ಲುತ್ತದೆ. ಇದೀಗ ಶರಾವತಿಯಲ್ಲಿ ಪಂಪ್ಡ್ ಸ್ಟೋರೇಜ್ ಯೋಜನೆ ಆರಂಭಿಸಲಿದ್ದೇವೆ. ಕೇಂದ್ರದಿಂದಲೂ ಅನುಮತಿ ದೊರೆತಿದೆ. ನಮಗೆ ಸಹಕಾರ ನೀಡುತ್ತಿರುವ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

‘ರಾಜ್ಯದಲ್ಲಿ ಬೇಡಿಕೆಗಿಂತ ಹೆಚ್ಚು ವಿದ್ಯುತ್ ಉತ್ಪಾದನೆಯಾದರೂ, ಸಂಗ್ರಹಣೆಗೆ ಅವಕಾಶ ಇಲ್ಲ. ಹೀಗಾಗಿ, ಶರಾವತಿ ಪಂಪ್ಡ್ ಸ್ಟೋರೇಜ್ ಮೂಲಕ 2ಸಾವಿರ ಮೆ.ವ್ಯಾ. ವಾರಾಹಿ ಪಂಪ್ಡ್ ಸ್ಟೋರೇಜ್ ಮೂಲಕ 1500 ಮೆ.ವ್ಯಾ. ಪಾವಗಡದಲ್ಲಿ 1ಸಾವಿರ ಮೆ.ವ್ಯಾ.ಸಾಮಥ್ರ್ಯ ಹಾಗೂ ರ್ಯಾಪ್ಟೆಯಲ್ಲಿ 2ಸಾವಿರ ಮೆ.ವ್ಯಾ. ಸಾಮಥ್ರ್ಯದ ಬ್ಯಾಟರಿ ಸ್ಟೋರೇಜ್ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರಕಾರ ತೀರ್ಮಾನಿಸಿದೆ ಎಂದರು.

ಸ್ಟೋರೇಜ್ ವ್ಯವಸ್ಥೆ: ಲಿನೇಜ್ ಪವರ್ ಸಂಸ್ಥೆಯ ಬ್ಯಾಟರಿ ಸ್ಟೋರೇಜ್ ಘಟಕವನ್ನು ಉದ್ಘಾಟಿಸಿದ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ಇಂಧನ ಸ್ವಾವಲಂಬನೆಯತ್ತ ಸದೃಢ ಹೆಜ್ಜೆ ಹಾಕುತ್ತಿರುವ ಆತ್ಮನಿರ್ಭರ ಭಾರತಕ್ಕೆ ಬ್ಯಾಟರಿ ಸ್ಟೋರೇಜ್ ವ್ಯವಸ್ಥೆ ಅತ್ಯಗತ್ಯ ಎಂದರು.

ದೇಶದಲ್ಲಿ ಆದ ಮೊದಲ ಕ್ರಾಂತಿ ವಿದ್ಯುಚ್ಛಕ್ತಿ, ನಂತರ ಬಂದದ್ದು ಟಿವಿ. ನಮ್ಮೆಲ್ಲರ ಬದುಕನ್ನು ಬದಲಿಸಿದ್ದು ಇಂಟರ್ನೆಟ್. ಸ್ಮಾರ್ಟ್‍ಟಿವಿ ಈಗ ಬ್ಯಾಟರಿ ಸ್ಟೋರೇಜ್ ವ್ಯವಸ್ಥೆ ಮತ್ತೊಮ್ಮೆ ಅಂತಹ ಮಹತ್ವದ ಬದಲಾವಣೆ ತರಲಿದೆ. ಇಂತಹ ಬದಲಾವಣೆಗೆ ನಾವೆಲ್ಲರೂ ಸಾಕ್ಷಿ ಆಗಲಿದ್ದೇವೆ ಎಂದು ಅವರು ನುಡಿದರು.

ಕಾರ್ಯಕ್ರಮದಲ್ಲಿ ಕ್ರೆಡಲ್ ಅಧ್ಯಕ್ಷ ಟಿ.ಡಿ.ರಾಜೇಗೌಡ, ಶಾಸಕ ಸಾ.ರಾ.ಮಹೇಶ್, ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ, ಶ್ರೀ ಪ್ರಕಾಶನಾಥ ಸ್ವಾಮೀಜೀ, ಅವಧೂತ ವಿನಯ್ ಗೂರೂಜಿ, ಪೇಸ್ ಡಿಜಿಟೆಕ್-ಲಿನೇಜ್ ಪವರ್ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ವೇಣುಗೋಪಾಲ್ ರಾವ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X