ನಾನು ಅಸಮಾಧಾನಗೊಂಡಿದ್ದೇನೆ ಎಂದು ಹೇಳುವ ವರದಿಗಳು ಸಂಪೂರ್ಣವಾಗಿ ಆಧಾರರಹಿತ : ಕೆ.ಜೆ.ಜಾರ್ಜ್

ಬೆಂಗಳೂರು : ʼನಾನು ಅಸಮಾಧಾನಗೊಂಡಿದ್ದೇನೆ ಎಂದು ಹೇಳುವ ವರದಿಗಳು ಸಂಪೂರ್ಣವಾಗಿ ಆಧಾರರಹಿತವಾಗಿವೆ. ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಮತ್ತು ನನ್ನ ನಡುವೆ ಯಾವುದೇ ಸಮಸ್ಯೆ ಇಲ್ಲʼ ಎಂದು ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ʼಮಾಧ್ಯಮಗಳು ಅನಗತ್ಯ ಕಲ್ಪನೆಗಳನ್ನು ಸುಳ್ಳು ಸುದ್ದಿಗಳನ್ನು ಸೃಷ್ಟಿಮಾಡಬಾರದು. ಕರ್ನಾಟಕದ ಮುಖ್ಯಮಂತ್ರಿಗಳು ಮತ್ತು ನಾನು, ಕರ್ನಾಟಕದ ಜನರಿಗೆ ಸೇವೆ ಸಲ್ಲಿಸುವ ನಮ್ಮ ಬದ್ಧತೆಯಲ್ಲಿ ಒಗ್ಗಟ್ಟಿನಿಂದ ಅತ್ಯುತ್ತಮ ಕಾರ್ಯ ಸಂಬಂಧವನ್ನು ಹೊಂದಿದ್ದೇವೆ. ನಮ್ಮ ಗಮನ ಉತ್ತಮ ಆಡಳಿತ, ಅಭಿವೃದ್ಧಿ ಮತ್ತು ಜನರ ಆಕಾಂಕ್ಷೆಗಳನ್ನು ಈಡೇರಿಸುವುದರ ಮೇಲೆ ದೃಢವಾಗಿದೆʼ ಎಂದು ತಿಳಿಸಿದ್ದಾರೆ.
Next Story






