Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ದಲಿತ ಸಮುದಾಯವು ಆಳುವ ಸಮಾಜವಾಗಬೇಕು :...

ದಲಿತ ಸಮುದಾಯವು ಆಳುವ ಸಮಾಜವಾಗಬೇಕು : ಕೋಟಗಾನಹಳ್ಳಿ ರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ25 Jun 2026 12:07 AM IST
share
ದಲಿತ ಸಮುದಾಯವು ಆಳುವ ಸಮಾಜವಾಗಬೇಕು : ಕೋಟಗಾನಹಳ್ಳಿ ರಾಮಯ್ಯ

ಬೆಂಗಳೂರು : ದಲಿತ ಸಂಘಟನೆಗಳು ಒಡಕು, ಭಿನ್ನಾಭಿಪ್ರಾಯವನ್ನು ಬಿಟ್ಟು ರಾಜಕೀಯ ಪಕ್ಷಗಳ ಹಿಂಬಾಲಕರಾಗದೆ, ಒಗ್ಗಟ್ಟಿನ ಮೂಲಕ ಆಳುವ ಸಮಾಜವಾಗಿ ಬದಲಾಗಬೇಕು ಎಂದು ಹಿರಿಯ ಹೋರಾಟಗಾರ ಕೋಟಗಾನಹಳ್ಳಿ ರಾಮಯ್ಯ ಹೇಳಿದ್ದಾರೆ.

ಬುಧವಾರ ನಗರದ ದಸಂಸ ವತಿಯಿಂದ ಗಾಂಧಿ ಭವನದಲ್ಲಿ ‘ಪ್ರಜಾಪ್ರಭುತ್ವದಲ್ಲಿ ದಲಿತರ ಸ್ಥಾನ ಮಾನ’ ಕುರಿತು ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾತನಾಡಿದ ಅವರು, 75ವರ್ಷ ಕಳೆದರೂ ಅಸ್ಪೃಶ್ಯತೆ, ಅಸಮಾನತೆ ಬೇರೂರಿದ್ದು, ಚಿಂತನೆಗಳು ಬದಲಾಗಬೇಕು, ಯುವ ಪೀಳಿಗೆ ಒಳಗೊಂಡ ಪ್ರಬುದ್ಧ ಭಾರತ ಸಮಾಜ ನಿರ್ಮಾಣವಾಗಬೇಕು ಎಂದರು.

ದಲಿತ ಸಂಘರ್ಷ ಸಮಿತಿ ಚಳವಳಿಯ ಇತಿಹಾಸವನ್ನು ಅರ್ಥ ಮಾಡಿಕೊಳ್ಳಬೇಕೆಂದರೆ ಮೊದಲಿನಿಂದಲೂ ಬಂದಿರುವ ದಸಂಸದ ಎಲ್ಲ ಕರಪತ್ರಗಳನ್ನು ಅಧ್ಯಯನ ಮಾಡಬೇಕು. ಅದು ನಡೆದಾಗ ಯಾವುದೇ ವಿಶ್ವವಿದ್ಯಾನಿಲಯ ಮಾಡದೇ ಇರುವ ಸಂಶೋಧನೆಯನ್ನು ಮಾಡಿದಂತಾಗುತ್ತದೆ. ಇತ್ತೀಚೆಗೆ ನಾವು ವಿಚಾರ ಮಂಥನದ ಹೆಸರಿನಲ್ಲಿ ಯಾವ ಅಂಶಗಳನ್ನು ಎದುರುಗೊಳ್ಳುತ್ತಿದ್ದೇವೋ, ಅವೆಲ್ಲವೂ ಅತ್ಯಂತ ಕ್ಷೀಷಗೊಂಡಿರುವ, ಪುನಾರವರ್ತತಿತ ಮತ್ತು ಭಜನೆ ಅನಿಸುವಂತ ಮಟ್ಟದಲ್ಲಿ ನಡೆಯುತ್ತಿವೆ ಎಂದು ಕೋಟಗಾನಹಳ್ಳಿ ರಾಮಯ್ಯ ಅಭಿಪ್ರಾಯಪಟ್ಟರು.

ಇತ್ತೀಚೆಗೆ ದಸಂಸ ವತಿಯಿಂದ ವಿಚಾರ ಸಂಕಿರಣಗಳು ಹೆಚ್ಚು ನಡೆಯುತ್ತಿವೆ ಆದರೆ, ಅಧ್ಯಯನ ಶಿಬಿರಗಳು ನಡೆಯುತ್ತಿಲ್ಲ. ‘ಇತಿಹಾಸವನ್ನು ಮರೆತರೆ, ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ’ ಎಂಬ ಮಾತನ್ನು ಹಲವು ರಾಜಕಾರಣಿಗಳು, ನಾಯಕರ ಬಾಯಲ್ಲಿ ಕೇಳುತ್ತಿದ್ದೇವೆ. ಇತಿಹಾಸಕ್ಕೆ ಸಾವಿರಾರು ವರ್ಷಗಳ ಚರಿತ್ರೆ ಇದೆ. ಆದರೆ ಇಂದಿನ ನಮ್ಮ ಪ್ರಜ್ಞಾಮಿತಿಯಲ್ಲಿ ಹತ್ತು ವರ್ಷಗಳ ಚರಿತ್ರೆಯನ್ನು ನೆನಪಿಟ್ಟುಕೊಳ್ಳಲಾರದಷ್ಟು ಶಕ್ತಿ ಹೀನರಾಗಿದ್ದೇವೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ದಸಂಸ ಮುಖಂಡರಾದ ಸಿದ್ದಲಿಂಗಯ್ಯ, ಶಾಮರಾವ್ ಘಾಟ್ಕೆ, ಶೋಭಾ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

Kotaganahalli Ramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X