Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೆಪಿಸಿಸಿಗೆ 112 ಕಾರ್ಯದರ್ಶಿ, ಸಂಯೋಕರ...

ಕೆಪಿಸಿಸಿಗೆ 112 ಕಾರ್ಯದರ್ಶಿ, ಸಂಯೋಕರ ನೇಮಕ: ಬಿ.ಕೆ.ಹರಿಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ12 Nov 2026 1:19 PM IST
share
ಕೆಪಿಸಿಸಿಗೆ 112 ಕಾರ್ಯದರ್ಶಿ, ಸಂಯೋಕರ ನೇಮಕ: ಬಿ.ಕೆ.ಹರಿಪ್ರಸಾದ್

ಬೆಂಗಳೂರು, ನ.12: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಗೆ ನೂತನವಾಗಿ ತಲಾ 112 ಕಾರ್ಯದರ್ಶಿಗಳು ಹಾಗೂ ಸಂಯೋಜಕರನ್ನು ನೇಮಕ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ತಿಳಿಸಿದ್ದಾರೆ.

ಗುರುವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಕ್ಷದ ಸಂಘಟನೆಯನ್ನು ಪುನರ್ ರಚಿಸಲು ಎಐಸಿಸಿ ಸೂಚನೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ದೇಶದೆಲ್ಲೆಡೆಯಿಂದ ಸುಮಾರು 800 ಜನರನ್ನು ಕರೆದು ಎಐಸಿಸಿ ಮಟ್ಟದಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಲು ಆಸಕ್ತಿ ಹೊಂದಿದ್ದಾರೋ ಅಂತಹವರ ಸಂದರ್ಶನ ಮಾಡಿ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ. ಅದೇ ರೀತಿ ನಾವು ಸಹ ರಾಜ್ಯದಲ್ಲಿ ಕೆಪಿಸಿಸಿ ವತಿಯಿಂದ ಪಕ್ಷ ಸಂಘಟನೆ ಮಾಡುವ ಉದ್ದೇಶದಿಂದ ಅರ್ಜಿಗಳನ್ನು ಆಹ್ವಾನಿಸಿದ್ದೆವು. ಅದರಂತೆ ರಾಜ್ಯದೆಲ್ಲೆಡೆಯಿಂದ ಸುಮಾರು 920 ಅರ್ಜಿಗಳು ಬಂದಿವೆ ಎಂದು ಅವರು ತಿಳಿಸಿದರು.

ಈ ಪೈಕಿ 308 ಅರ್ಜಿಗಳು ಬೆಂಗಳೂರು ನಗರದಿಂದಲೇ ಬಂದಿವೆ. ಈ ಅರ್ಜಿದಾರರ ಸಂದರ್ಶನ ಮಾಡಲು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಸಚಿವರಾದ ದಿನೇಶ್ ಗುಂಡೂರಾವ್, ಎಚ್.ಕೆ.ಪಾಟೀಲ್, ರಾಣಿ ಸತೀಶ್, ನಸೀರ್ ಅಹ್ಮದ್, ಸಂಸದ ಈ.ತುಕಾರಾಂ, ಡಾ.ಬಿ.ಎಲ್.ಶಂಕರ್ ಅವರ ಸಮಿತಿ ರಚನೆ ಮಾಡಲಾಗಿದೆ ಎಂದು ಹರಿಪ್ರಸಾದ್ ಹೇಳಿದರು.

ಈ ಸಮಿತಿ ಎಲ್ಲರನ್ನೂ ಸಂದರ್ಶನ ಮಾಡಿ, 112 ಕಾರ್ಯದರ್ಶಿಗಳ ಪಟ್ಟಿ ಸಿದ್ಧಪಡಿಸಲಿದೆ. ಪ್ರತಿಯೊಬ್ಬ ಕಾರ್ಯದರ್ಶಿಗೆ ಎರಡು ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ನೀಡಿ ಅವರು ಒಂದೂವರೆ ವರ್ಷಗಳ ಕಾಲ ಅಲ್ಲಿ ಕೆಲಸ ಮಾಡುವಂತಹ ಪ್ರಕ್ರಿಯೆ ಆರಂಭ ಮಾಡಿದ್ದೇವೆ. ಅವರ ಜೊತೆ 112 ಸಂಯೋಜಕರು ಇರುತ್ತಾರೆ ಎಂದು ಅವರು ಹೇಳಿದರು.

ಕಲಬುರಗಿ ವಿಭಾಗದ ಬೀದರ್, ರಾಯಚೂರು, ಕಲಬುರಗಿ, ಬಳ್ಳಾರಿ, ಬಳ್ಳಾರಿ ಗ್ರಾಮಾಂತರ, ವಿಜಯನಗರ, ಕೊಪ್ಪಳದಿಂದ 112 ಅರ್ಜಿಗಳು ಬಂದಿವೆ. ಇವತ್ತು ಕಲಬುರಗಿ ವಿಭಾಗದ ಅರ್ಜಿದಾರರ ಸಂದರ್ಶನ ಮಾಡಿ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಲಿದ್ದಾರೆ ಎಂದು ಹರಿಪ್ರಸಾದ್ ತಿಳಿಸಿದರು.

ರಾಜ್ಯಮಟ್ಟದಲ್ಲಿ ಪಕ್ಷದ ಸಂಘಟನೆ ಮಾಡುವಾಗ ಈ ಹಿಂದೆ ಹಲವಾರು ವಿಧಿ ವಿಧಾನಗಳನ್ನು ಅನುಸರಿಸಲಾಗುತ್ತಿತ್ತು. ಆದರೆ, ಈ ಬಾರಿ ಯಾವುದೇ ಗೊಂದಲಗಳಿಗೆ ಅವಕಾಶ ಇಲ್ಲದಂತೆ, ಎಲ್ಲರಿಗೂ ಅವಕಾಶ ಸಿಗಬೇಕು, ಯಾವುದೇ ವ್ಯಕ್ತಿ ಅಥವಾ ಗುಂಪಿಗೆ ಸೀಮಿತ ಆಗೋದು ಬೇಡ ಎಂಬ ಉದ್ದೇಶದಿಂದ ಈ ನಿರ್ಧಾರ ಮಾಡಲಾಗಿದೆ. ಇದು ಪಕ್ಷ ಸಂಘಟನೆಗೆ ಅನುಕೂಲ ಆಗಲಿದೆ ಎಂದು ಅವರು ಹೇಳಿದರು.

ಈಗಾಗಲೇ ಸಂಘಟನ್ ಅಭಿಯಾನ 2 ಪ್ರಯುಕ್ತ ನಮ್ಮ ವೀಕ್ಷಕರು ಬ್ಲಾಕ್ ಮಟ್ಟದಲ್ಲಿ ಸಭೆಗಳನ್ನು ಮಾಡಿ ಬ್ಲಾಕ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮಾಡುತ್ತಿದ್ದಾರೆ. ಅಕ್ಟೋಬರ್ 30ರವರೆಗೆ ಪಟ್ಟಿ ನೀಡುವಂತೆ ತಿಳಿಸಲಾಗಿತ್ತು. ಇದೀಗ ನವೆಂಬರ್ ಅಂತ್ಯದವರೆಗೆ ಅವಧಿ ವಿಸ್ತರಿಸಿದ್ದೇವೆ. ಆದಷ್ಟು ಬೇಗ ಬ್ಲಾಕ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ನೇಮಕ ಮಾಡುತ್ತೇವೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಸಂವಹನ ಮತ್ತು ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ವಿಧಾನಪರಿಷತ್ ಮಾಜಿ ಸದಸ್ಯ ಎಂ.ನಾರಾಯಣ ಸ್ವಾಮಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ರಾಮಚಂದ್ರಪ್ಪ ಉಪಸ್ಥಿತರಿದ್ದರು.

Tags

KPCCSecretaries and CoordinatorsB.K. Hariprasad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X