Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೆಪಿಎಸ್ ಸಿ ಪ್ರಶ್ನೆಪತ್ರಿಕೆ ಸೋರಿಕೆ...

ಕೆಪಿಎಸ್ ಸಿ ಪ್ರಶ್ನೆಪತ್ರಿಕೆ ಸೋರಿಕೆ ಶಂಕೆ | ವಂದತಿಗಳಿಗೆ ಕಿವಿಗೊಡಬೇಡಿ: ಆಯೋಗ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ6 May 2025 3:52 PM IST
share
ಕೆಪಿಎಸ್ ಸಿ ಪ್ರಶ್ನೆಪತ್ರಿಕೆ ಸೋರಿಕೆ ಶಂಕೆ | ವಂದತಿಗಳಿಗೆ ಕಿವಿಗೊಡಬೇಡಿ: ಆಯೋಗ ಸ್ಪಷ್ಟನೆ

ಬೆಂಗಳೂರು, ಮೇ 6: ಗೆಜೆಟೆಡ್ ಪ್ರೊಬೆಷನರಿ ಗ್ರೂಪ್ ಎಮತ್ತು ಗ್ರೂಪ್ ಬಿ ವೃಂದದ 384 ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಸುದ್ದಿ ಸುಳ್ಳು. ಈ ರೀತಿಯ ಯಾವುದೇ ವದಂತಿಗಳಿಗೆ ಅಭ್ಯರ್ಥಿ ಕಿವಿಗೊಡಬಾರದು ಎಂದು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ ಸಿ) ಮನವಿ ಮಾಡಿದೆ.

ಮೇ 5ರಂದು ನಡೆದ ಕೆಪಿಎಸ್ಸಿ ಮುಖ್ಯ ಪರೀಕ್ಷೆಯ ಸಾಮಾನ್ಯ ಅಧ್ಯಯನ-1 ಪ್ರಶ್ನೆಪತ್ರಿಕೆ ಸೋರಿಕೆ ಆಗಿರುವ ಸಂಶಯದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ದೂರು ನೀಡಿದ್ದರು. ಬೆಂಗಳೂರಿನ ಮೈಸೂರು ರಸ್ತೆಯಲ್ಲಿನ ಕಸ್ತೂರಬಾ ನಗರದ ಬಿಬಿಎಂಪಿ ಸಂಯೋಜಿತ ಪಿಯು ಕಾಲೇಜಿನ ಪರೀಕ್ಷೆ ಕೇಂದ್ರಕ್ಕೆ ಬಂದಿದ್ದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಅಭ್ಯರ್ಥಿಗಳು ಆರೋಪಿಸಿದ್ದರು.

ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಕೆಪಿಎಸ್ ಸಿ, ಪ್ರಶ್ನೆಪತ್ರಿಕೆ ಸೋರಿಕೆಯ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಲಾಗಿದ್ದು, ಪರೀಕ್ಷಾ ಉಪ ಕೇಂದ್ರದ ಮೇಲ್ವಿಚಾರಕರು ಮತ್ತು ಆಯೋಗದಿಂದ ನಿಯೋಜಿತರಾದ ಸ್ಥಳೀಯ ನಿರೀಕ್ಷಣಾಧಿಕಾರಿಗಳಿಂದ ವಿಸ್ತೃತವಾದ ವರದಿಗಳನ್ನು ಪಡೆಯಲಾಗಿದೆ. ಆಯೋಗವು ಪ್ರೊಬೇಷನರಿ ಪರೀಕ್ಷೆಗಳೂ ಸೇರಿದಂತೆ ವಿವಿಧ ನೇಮಕಾತಿ ಪರೀಕ್ಷೆಗಳನ್ನು ನಡೆಸುವಾಗ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗದಂತೆ ಮತ್ತು ಪರೀಕ್ಷಾ ಗೌಪ್ಯತೆಯನ್ನು ಕಾಪಾಡುವ ಮತ್ತು ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವ ಸಲುವಾಗಿ ಹಾಗೂ ದುರಾಚಾರ ಪ್ರಕರಣಗಳು ನಡೆಯದಂತೆ ತಡೆಯಲು ಹಲವು ಹಂತಗಳ ಸುರಕ್ಷಾ ಕ್ರಮಗಳನ್ನು ಅಳವಡಿಸಿಕೊಳ್ಳಲಾಗಿರುತ್ತದೆ.

ಅದರಂತೆಯೇ ಈ ಪರೀಕ್ಷೆಯಲ್ಲಿಯೂ ಪ್ರಶ್ನೆ ಪತ್ರಿಕೆಯ ಭದ್ರತೆಗಾಗಿ ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ಮೊಹರು ಮಾಡಿದ ಪೆಟ್ಟಿಗೆ, ಮೊಹರು ಮಾಡಿದ ಲೋಹದ ಟ್ರಂಕ್. ಮೊಹರು ಮಾಡಿದ ಟ್ಯಾಂಪರ್ ಎವಿಡೆಂಟ್ ಕವರ್ಗಳನ್ನು ಇತ್ಯಾದಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಅದರೊಂದಿಗೆ ಪ್ರಶ್ನೆಪತ್ರಿಕೆಗಳನ್ನು ಸಾಗಿಸುವಾಗ ಅವು ಹಾನಿಯಾಗದಂತೆ ಸಂರಕ್ಷಿಸಲು ನೀರು ನಿರೋಧಕ ಪ್ಲಾಸ್ಟಿಕ್ ಕವರ್ಗಳನ್ನು ದ್ರವ ಪದಾರ್ಥಗಳಿಂದ ಸುರಕ್ಷಿತವಾಗಿ ಸಂರಕ್ಷಿಸುವ ಉದ್ದೇಶಕ್ಕಾಗಿ ಮಾತ್ರ ಉಪಯೋಗಿಸಲಾಗಿದ್ದು, ಅದು ಟ್ಯಾಂಪರ್ ಎವಿಡೆಂಟ್ ಕವರ್ ಆಗಿರುವುದಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಸದರಿ ಪರೀಕ್ಷೆಯ ಪರೀಕ್ಷಾ ಉಪಕೇಂದ್ರಕ್ಕೆ ವಿತರಿಸಲಾದ ಪ್ರಶ್ನೆ ಪತ್ರಿಕೆಗಳನ್ನೊಳಗೊಂಡ ಪೆಟ್ಟಿಗೆಗಳು, ಟ್ರಂಕ್ ಗಳು ಮತ್ತು ಟ್ಯಾಂಪರ್ ಎವಿಡೆಂಟ್ ಕವರ್ ಗಳಲ್ಲಿನ ಎಲ್ಲ ಭದ್ರತಾ ಮೊಹರುಗಳು ಕ್ರಮಬದ್ಧವಾಗಿಯೇ ಇರುವುದು ಕಂಡುಬಂದಿರುತ್ತದೆ. ಇದನ್ನು ಅಭ್ಯರ್ಥಿಗಳು, ಉಪಕೇಂದ್ರದ ಮೇಲ್ವಿಚಾರಕರು, ಸ್ಥಳೀಯ ನಿರೀಕ್ಷಣಾಧಿಕಾರಿಗಳು ಮತ್ತು ಕೊಠಡಿ ಸಂವೀಕ್ಷಕರು ಖಚಿತಪಡಿಸಿದ್ದಾರೆ. ಸದರಿ ಉಪ-ಕೇಂದ್ರಕ್ಕಾಗಿ ಕೊನೆಯ ಪದರದ ಪ್ಲಾಸ್ಟಿಕ್ ಕವರ್ಗಳಲ್ಲಿ ಅಳವಡಿಸಲಾದ ಪ್ರಶ್ನೆ ಸಹಿತ ಉತ್ತರ ಪುಸ್ತಿಕೆಗಳ ಸಂಖ್ಯೆ ಇತರ ಕೇಂದ್ರಗಳಿಗೆ ಸಾಮಾನ್ಯವಾಗಿ ವಿತರಿಸಲಾದ ಪ್ರಶ್ನೆಪತ್ರಿಕೆಗಳಿಗಿಂತ ದುಪ್ಪಟ್ಟಾಗಿತ್ತು ಎಂದು ಕೆಪಿಎಸ್ ಸಿ ತಿಳಿಸಿದೆ.

ಪರೀಕ್ಷಾ ಗೌಪ್ಯ ಸಾಮಗ್ರಿಗಳ ಗೌಪ್ಯತೆ, ಸುರಕ್ಷತೆ ಮತ್ತು ಭದ್ರತೆಯನ್ನು ಕಾಪಾಡುವಲ್ಲಿ ಆಯೋಗವು ಅತ್ಯಂತ ಜವಾಬ್ದಾರಿಯುತವಾಗಿ ಕಾಳಜಿ ವಹಿಸುವುದಲ್ಲದೆ, ಪಾರದರ್ಶಕವಾಗಿ ಕಾರ್ಯನಿರ್ವಹಿಸಲು ಯತ್ನಿಸುತ್ತಿದೆ ಎಂಬ ಅಂಶವನ್ನು ಪುನರುಚ್ಚರಿಸುತ್ತಾ, ಸಾಮಾಜಿಕ ಮತ್ತು ಸಮೂಹ ಮಾಧ್ಯಮದಲ್ಲಿ ಭಿತ್ತರಗೊಳ್ಳುತ್ತಿರುವ ವಿಷಯವು ಸತ್ಯಕ್ಕೆ ದೂರವಾದುದ್ದಾಗಿದ್ದು, ಇತರ ಅಭ್ಯರ್ಥಿಗಳು ಇದರಿಂದ ಯಾವುದೇ ರೀತಿಯಲ್ಲಿಯೂ ಹತಾಶರಾಗಬಾರದೆಂದು ಎಂದು ಕೆಪಿಎಸ್ಸಿ ಮನವಿ ಮಾಡಿದೆ.

ಪ್ರಶ್ನೆಪತ್ರಿಕೆಗಳ ಗೌಪ್ಯತೆ ಮತ್ತು ಸುರಕ್ಷತೆಯನ್ನು ಕಾಪಾಡುವ ದೃಷ್ಟಿಯಿಂದ ಅವುಗಳನ್ನು ಬಹುಪದರಗಳುಳ್ಳ ಪ್ಯಾಕ್ ನಲ್ಲಿರಿಸಿ ಮೊಹರು ಮಾಡಲಾಗಿರುತ್ತದೆ. ಹಾಗಾಗಿ, ಸದರಿ ಉಪಕೇಂದ್ರದ 2 ಕೊಠಡಿಗಳಲ್ಲಿ ಟ್ಯಾಂಪರ್ ಎವಿಡೆಂಟ್ ಎನೊಲಪ್ ಒಳಗಿನ ದ್ರವ ಪದಾರ್ಥಗಳಿಂದ ಸಂರಕ್ಷಿಸಲು ಪ್ಯಾಕ್ ಮಾಡಲಾಗಿದ್ದ ಪ್ಲಾಸ್ಟಿಕ್ ಕವರ್ಗಳು ಮಾತ್ರ ಪ್ಯಾಕಿಂಗ್ ಅಥವಾ ಸಾಗಣೆಯ ವೇಳೆ ಯಾಂತ್ರಿಕವಾಗಿ ಹರಿದಿರಬಹುದಾದ ಸಾಧ್ಯತೆ ಇರುತ್ತದೆಯೇ ಹೊರತು, ಇತರ ಯಾವುದೇ ಲೋಪಗಳುಂಟಾಗಿರುವುದಿಲ್ಲ ಎಂದು ಕೆಪಿಎಸ್ ಸಿ ಸ್ಪಷ್ಟನೆ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X