Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ʼಜಲಜೀವನ ಮಿಷನ್ ಯೋಜನೆ ಅನುಷ್ಠಾನದಲ್ಲಿ...

ʼಜಲಜೀವನ ಮಿಷನ್ ಯೋಜನೆ ಅನುಷ್ಠಾನದಲ್ಲಿ ಲೋಪʼ ತನಿಖೆಗೆ ತಂಡ : ಕೃಷ್ಣ ಭೈರೇಗೌಡ

ವಾರ್ತಾಭಾರತಿವಾರ್ತಾಭಾರತಿ14 March 2025 6:12 PM IST
share
ʼಜಲಜೀವನ ಮಿಷನ್ ಯೋಜನೆ ಅನುಷ್ಠಾನದಲ್ಲಿ ಲೋಪʼ ತನಿಖೆಗೆ ತಂಡ : ಕೃಷ್ಣ ಭೈರೇಗೌಡ

ಬೆಂಗಳೂರು : ತುಮಕೂರು ಜಿಲ್ಲೆಯ ಜಲಜೀವನ್ ಮಿಷನ್ ಯೋಜನೆ ಅನುಷ್ಠಾನದಲ್ಲಿ ನಾನಾ ತಪ್ಪುಗಳಾಗಿದ್ದು, ಸರಕಾರ ತನಿಖೆ ನಡೆಸಿ ವರದಿ ನೀಡಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮೂವರು ಅಧಿಕಾರಿಗಳನ್ನೊಳಗೊಂಡ ತನಿಖಾ ತಂಡವನ್ನು ರಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.

ಶುಕ್ರವಾರ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಟಿ.ಬಿ.ಜಯಚಂದ್ರರ ಗಮನ ಸೆಳೆಯುವ ಸೂಚನೆಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪರವಾಗಿ ಉತ್ತರಿಸಿದ ಅವರು, ತನಿಖಾ ತಂಡವು ತುಮಕೂರಿಗೆ ಭೇಟಿ ನೀಡಿ 571 ಕಾಮಗಾರಿಗಳನ್ನು ಆಯ್ಕೆ ಮಾಡಿ, 183 ಕಾಮಗಾರಿಗಳ ಕಡತಗಳನ್ನು ಪರಿಶೀಲಿಸಿದೆ. 25 ಅನರ್ಹ ಗುತ್ತಿಗೆದಾರರಿಗೆ 69 ಕಾಮಗಾರಿಗಳ ಟೆಂಡರ್ ನೀಡಿ, ಕಾರ್ಯಪಾಲಕ ಇಂಜಿನಿಯರ್ ಕರ್ತವ್ಯ ಲೋಪ ಎಸಗಿದ್ದಾರೆಂದು ಮಧ್ಯಂತರ ವರದಿ ನೀಡಿದೆ ಎಂದು ಉಲ್ಲೇಖಿಸಿದರು.

ಕರ್ತವ್ಯಲೋಪ ಎಸಗಿದ ಕಾರ್ಯಪಾಲಕ ಇಂಜಿನಿಯರ್ (ನಿವೃತ್ತ) ಎಸ್.ರವೀಶ್ ಅವರ ವಿರುದ್ಧ ಇಲಾಖಾ ವಿಚಾರಣೆ ಕೈಗೊಳ್ಳಲು ಮತ್ತು ದೋಷಾರೋಪಪಟ್ಟಿ ಸಲ್ಲಿಸಲು ಸರಕಾರ ಅನುಮತಿ ನೀಡಿದೆ. ತನಿಖೆ ಅರ್ಧ ನಡೆಯುವುದರಿಂದ ಲೋಕಾಯುಕ್ತ ತನಿಖೆಗೆ ವಹಿಸಿದರೆ ವಿಳಂಬವಾಗುವುದು. ಇದೇ ತನಿಖಾತಂಡವನ್ನು ಮುಂದುವರಿಸುವ ಮತ್ತು ಎಲ್‍ಓಎ ಕೊಟ್ಟಿರುವ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವರು, ಸಂಬಂಧಪಟ್ಟ ಶಾಸಕರೊಂದಿಗೆ ಚರ್ಚಿಸಲು ತಿಳಿಸಲಾಗುವುದು ಎಂದರು.

ಈ ಹಂತದಲ್ಲಿ ಮಧ್ಯಪ್ರವೇಶಿಸಿದ ಕಾಂಗ್ರೆಸ್ಸಿನ ಜಿ.ಟಿ.ಪಾಟೀಲ್, ಈ ಸಂಬಂಧ ಅಂದಾಜು ಸಮಿತಿಯಲ್ಲಿ ಚರ್ಚೆಯಾಗಿದೆ. ಲೋಕಾಯುಕ್ತ ತನಿಖೆಯಾಗಬೇಕೆಂದು ಆಗ್ರಹಿಸಿದರು. ಬಿಜೆಪಿ ಸದಸ್ಯ ಸಿದ್ದು ಸವದಿ ಮಾತನಾಡಿ, ರಾಜ್ಯದಲ್ಲಿ ಜಲಜೀವನ್ ಮಿಷನ್ ಯೋಜನೆ ಕಳಪೆಯಿಂದ ಕೂಡಿದ್ದು, ತನಿಖೆ ಆಗಬೇಕೆಂದು ಒತ್ತಾಯಿಸಿದರು.

ಇದಕ್ಕೂ ಮುನ್ನ ಮಾತನಾಡಿದ ಟಿ.ಬಿ.ಜಯಚಂದ್ರ ಅವರು, ಜಲಜೀವನ್ ಮಿಷನ್ ಯೋಜನೆಯ 2528 ಕಾಮಗಾರಿಗಳಲ್ಲಿ ಅವ್ಯವಹಾರವಾಗಿದೆ. ರಸ್ತೆ ಕಾಮಗಾರಿ ಆಗುತ್ತಿಲ್ಲ. ಸಂಬಂಧಪಟ್ಟ ಅಧಿಕಾರಿ ನಿವೃತ್ತರಾಗಿದ್ದಾರೆ. ಭ್ರಷ್ಟ ಅಧಿಕಾರಿಗಳನ್ನು ರಕ್ಷಿಸುತ್ತಿರುವವರಿಗೆ ತಕ್ಕ ಶಾಸ್ತಿಯಾಗಲು ಲೋಕಾಯುಕ್ತ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X