Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎಸಿ ವ್ಯಾಪ್ತಿಯ ನ್ಯಾಯಾಲಯ ಪ್ರಕರಣಗಳಿಗೆ...

ಎಸಿ ವ್ಯಾಪ್ತಿಯ ನ್ಯಾಯಾಲಯ ಪ್ರಕರಣಗಳಿಗೆ ಚುರುಕು ಮುಟ್ಟಿಸಿ: ಸಚಿವ ಕೃಷ್ಣ ಭೈರೇಗೌಡ ಸೂಚನೆ

ವಾರ್ತಾಭಾರತಿವಾರ್ತಾಭಾರತಿ7 Jan 2026 6:55 PM IST
share
ಎಸಿ ವ್ಯಾಪ್ತಿಯ ನ್ಯಾಯಾಲಯ ಪ್ರಕರಣಗಳಿಗೆ ಚುರುಕು ಮುಟ್ಟಿಸಿ: ಸಚಿವ ಕೃಷ್ಣ ಭೈರೇಗೌಡ ಸೂಚನೆ

ಬೆಂಗಳೂರು : ಬೆಂಗಳೂರು ನಗರ-ಗ್ರಾಮಾಂತರ, ತುಮಕೂರು ಹಾಗೂ ರಾಮನಗರ ಜಿಲ್ಲೆ ಉಪ ವಿಭಾಗಾಧಿಕಾರಿಗಳ (ಎಸಿ) ವ್ಯಾಪ್ತಿಯಲ್ಲಿ ನ್ಯಾಯಾಲಯ ಪ್ರಕರಣಗಳು ಅತಿಹೆಚ್ಚು ಸಂಖ್ಯೆಯಲ್ಲಿ ಬಾಕಿ ಇದ್ದು, ಶೀಘ್ರ ವಿಲೇವಾರಿ ಮಾಡುವಂತೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಸೂಚನೆ ನೀಡಿದ್ದಾರೆ.

ಬುಧವಾರ ವಿಕಾಸಸೌಧದಲ್ಲಿ ನಡೆದ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯ ಪ್ರಕರಣಗಳ ಸಂಬಂಧಿಸಿದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ರಾಜ್ಯಾದ್ಯಂತ ಒಟ್ಟು 19 ಸಾವಿರ ಪ್ರಕರಣಗಳು ಬಾಕಿ ಇದ್ದು, ಈ ಪೈಕಿ ಸುಮಾರು 13 ಸಾವಿರ ಪ್ರಕರಣಗಳು ಬೆಂಂಗಳೂರು ನಗರ, ಗ್ರಾಮಾಂತರ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳಲ್ಲೇ ಬಾಕಿ ಇವೆ ಎಂದರು.

ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಲ್ಲೇ ಹೆಚ್ಚು ಸಂಖ್ಯೆಯಲ್ಲಿ ನ್ಯಾಯಾಲಯ ಪ್ರಕರಣಗಳು ಬಾಕಿ ಇದ್ದರೆ, ರಾಜ್ಯದ ಇತರ ಭಾಗಗಳ ಅಧಿಕಾರಿಗಳೊಂದಿಗೆ ಏನೆಂದು ಸಭೆ ನಡೆಸಲಿ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಕೇವಲ 6 ಸಾವಿರ ಪ್ರಕರಣಗಳು ಮಾತ್ರ ಬಾಕಿ ಇದ್ದು, ಈ ನಾಲ್ಕು ಜಿಲ್ಲೆಗಳ ಅಧಿಕಾರಿಗಳು ತಮ್ಮ ಕೆಲಸಕ್ಕೆ ವೇಗ ನೀಡಿದರೆ ಮಾತ್ರ ರಾಜ್ಯಮಟ್ಟದಲ್ಲಿ ಪ್ರಶ್ನಿಸಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಕಳೆದ ಅಕ್ಟೋಬರ್‍ನಲ್ಲಿ ಈ ನಾಲ್ಕು ಜಿಲ್ಲೆಗಳಲ್ಲಿ 15,364 ಪ್ರಕರಣಗಳು ಬಾಕಿ ಇದ್ದದ್ದು ಈಗ 13,610ಕ್ಕೆ ಇಳಿದಿರುವುದು ಉತ್ತಮ ಬೆಳವಣಿಗೆ. ಆದರೂ, ವಿವಿಧ ಕಾರಣಗಳಿಂದ ವಿಲೇವಾರಿ ಆಗದ ಪ್ರಕರಣಗಳು ಹಾಗೂ ಅನರ್ಹ (ಅನ್ಫಿಟ್) ಪ್ರಕರಣಗಳು ಹಾಗೂ ಆದೇಶಕ್ಕಾಗಿ ಕಾಯ್ದಿರಿಸಿದ ಪ್ರಕರಣಗಳನ್ನು ಜನವರಿ ಅಂತ್ಯದೊಳಗೆ ಮುಗಿಸಿದರೆ ಈ ಸಂಖ್ಯೆ ಮತ್ತಷ್ಟು ಸುಧಾರಿಸುತ್ತದೆ ಎಂದು ಸಲಹೆ ನೀಡಿದರು.

ಉಪ ವಿಭಾಗಾಧಿಕಾರಿಗಳಿಗೆ ತಮ್ಮ ಮುಂದಿರುವ ಸವಾಲುಗಳು ಹಾಗೂ ಪರಿಹಾರಗಳ ಬಗ್ಗೆ ಅರಿವಿದೆ. ಹೀಗಾಗಿ ಸುಲಭವಾಗಿ ಇತ್ಯರ್ಥಗೊಳಿಸಬಹುದಾದ ಪ್ರಕರಣಗಳನ್ನು ಮೊದಲು ಕೈಗೆತ್ತಿಕೊಳ್ಳಿ. ಮಾರ್ಚ್ ಅಂತ್ಯದೊಳಗೆ ಆರು ತಿಂಗಳು ಮೀರಿದ ಎಲ್ಲ ಪ್ರಕರಣಗಳನ್ನು ಕಡ್ಡಾಯವಾಗಿ ಮುಗಿಸಿ. ಫೆಬ್ರವರಿ ಮೊದಲ ವಾರದಲ್ಲಿ ಈ ನಾಲ್ಕು ಜಿಲ್ಲೆಗಳ ಮತ್ತೊಂದು ಸಭೆ ನಡೆಸಿ, ಅದರ ಆಧಾರದಲ್ಲಿ ರಾಜ್ಯಾದ್ಯಂತದ ಎಲ್ಲಾ ಎಸಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಗೆ ದಿನಾಂಕ ನಿಗದಿಪಡಿಸಲಾಗುವುದು ಎಂದು ಅವರು ತಿಳಿಸಿದರು.

ಈ ಜಿಲ್ಲೆಗಳಲ್ಲಿ ಸುಧಾರಣೆ ಕಾಣದಿದ್ದರೆ, ಇಡೀ ರಾಜ್ಯದ ಎಲ್ಲ ಉಪ ವಿಭಾಗಾಧಿಕಾರಿಗಳ ಸಭೆ ವ್ಯರ್ಥವಾಗುತ್ತದೆ ಎಂದು ಎಚ್ಚರಿಸಿದ ಅವರು, ಪ್ರತಿ ಶನಿವಾರ ಎಸಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಕುರಿತು ಮೇಲ್ವಿಚಾರಣೆ ನಡೆಸುವಂತೆ ನೂತನ ಕಂದಾಯ ಆಯುಕ್ತೆ ಮೀನಾ ನಾಗರಾಜ್ ಅವರಿಗೆ ಸಚಿವರು ಸೂಚಿಸಿದರು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Krishna Bhairegowda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X