Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ತಂತ್ರಜ್ಞಾನ ಆಧಾರಿತ ಸರ್ವೆ ನಡೆಸಲು ಕ್ರಮ...

ತಂತ್ರಜ್ಞಾನ ಆಧಾರಿತ ಸರ್ವೆ ನಡೆಸಲು ಕ್ರಮ : ಸಚಿವ ಕೃಷ್ಣಬೈರೇಗೌಡ

ವಾರ್ತಾಭಾರತಿವಾರ್ತಾಭಾರತಿ10 April 2025 6:03 PM IST
share
ತಂತ್ರಜ್ಞಾನ ಆಧಾರಿತ ಸರ್ವೆ ನಡೆಸಲು ಕ್ರಮ : ಸಚಿವ ಕೃಷ್ಣಬೈರೇಗೌಡ

ಬೆಂಗಳೂರು : ಆಧುನಿಕ ತಂತ್ರಜ್ಞಾನ ಆಧಾರಿತ ಸರ್ವೆ ನಡೆಸಲು ಇಲಾಖೆ ಕ್ರಮ ವಹಿಸುತ್ತಿದೆ. ಆರಂಭದಿಂದ ಅಂತ್ಯದವರೆಗೆ ಎಲ್ಲಾ ಕಂಪ್ಯೂಟರೀಕರಣ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಗುರುವಾರ ವಿಧಾನಸೌಧದ ಮುಂಭಾಗ ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ ರಾಷ್ಟ್ರೀಯ ಭೂಮಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕಾಲ ಬದಲಾದಂತೆ ಆಧುನಿಕತೆಯನ್ನು ಅಳವಡಿಸಿಕೊಂಡು ಸರ್ವೆ ಕೆಲಸವನ್ನು ಮಾಡಲಾಗುತ್ತಿದೆ. ಜಲಾಶಯ, ನೀರಾವರಿ, ರಸ್ತೆ, ಇಂಡಸ್ಟ್ರೀಯಲ್, ಬಡಾವಣೆ ನಿರ್ಮಾಣಕ್ಕೆ ಸರ್ವೆ ಇಲಾಖೆ ನಕ್ಷೆ ಸಿದ್ದಪಡಿಸಿದರೇ ಮಾತ್ರ ಇದೆಲ್ಲಾ ಸಾಧ್ಯ. ಕಂದಾಯ ಇಲಾಖೆಯು ಆರಂಭದಿಂದ ಅಂತ್ಯದವರೆಗೆ ಎಲ್ಲಾ ಕಂಪ್ಯೂಟರೀಕರಣ ಮಾಡಲಾಗುವುದು ಎಂದು ಕೃಷ್ಣಬೈರೇಗೌಡ ಹೇಳಿದರು.

ಕಂದಾಯ ಇಲಾಖೆಯು ಆಧುನಿಕ ತಂತ್ರಜ್ಞಾನ ಆಧಾರಿತ ಡ್ರೋನ್ ಸರ್ವೆ ಕಾರ್ಯ. ಭೂಮಾಪನದ ನಿಖರತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ 49 ಸಿಒಆರ್‌ಎಸ್ ಕೇಂದ್ರಗಳ ಸ್ಥಾಪನೆ, ರಾಜ್ಯದಲ್ಲಿ ಪ್ರಪ್ರಥಮವಾಗಿ ಅಳತೆಯಾಗದೇ ಇರುವ ಗ್ರಾಮೀಣ ಜನವಸತಿ ಪ್ರದೇಶಗಳ ಆಸ್ತಿಗಳಿಗೆ ಡ್ರೋನ್ ಸರ್ವೆ. ರಾಜ್ಯದ ಆಯ್ದ 10 ನಗರಸಭೆ/ಪಟ್ಟಣ ಪಂಚಾಯಿತಿಗಳ ಆಸ್ತಿಗಳಿಗೆ ಡ್ರೋನ್ ಸರ್ವೆ, ಭೂದಾಖಲೆಗಳ ಗಣಕೀಕರಣ ಕಾರ್ಯ, ಹೀಗೆ ಸಾಕಷ್ಟು ಸಾಧನೆಗಳನ್ನು ಸಾಧಿಸಿ ಇತರೆ ಇಲಾಖೆಗಳಿಗೆ ಮಾದರಿ ಇಲಾಖೆಯಾಗಿದೆ ಎಂದು ಕೃಷ್ಣಬೈರೇಗೌಡ ತಿಳಿಸಿದರು.

ಇಲಾಖೆಯಲ್ಲಿ ಭೂಮಿಯ ಅಳತೆಗೆ ಸಂಬಂಧಿಸಿದ ಸೇವೆಗಳನ್ನು ಸಾರ್ವಜನಿಕರಿಗೆ ಮತ್ತು ಇತರ ಇಲಾಖೆಗಳಿಗೆ ಬದಗಿಸುವ ನಿಟ್ಟಿನಲ್ಲಿ ಪ್ರತಿ ತಿಂಗಳು ಅಳತೆ ಕೋರಿ ಸ್ವೀಕೃತವಾಗುವ ಸರಾಸರಿ 1.3 ಲಕ್ಷ ಅರ್ಜಿಗಳ ವಿಲೇವಾರಿ ಮಾಡಲಾಗುತ್ತಿದೆ. ಪ್ರತಿನಿತ್ಯ 5000 ದಿಂದ 6000 ಅಳತೆ ಕಾರ್ಯ. ಎರಡು ವರ್ಷಗಳಲ್ಲಿ 26 ಲಕ್ಷಕ್ಕೂ ಹೆಚ್ಚಿನ ಅರ್ಜಿಗಳ ವಿಲೇವಾರಿ ಮಾಡಲಾಗಿದೆ. ಅರ್ಜಿ ವಿಲೇವಾರಿ ಅವಧಿಯನ್ನು ಹಿಂದೆ ತೆಗೆದುಕೊಳ್ಳಲಾಗುತ್ತಿದ್ದ ಸರಾಸರಿ 3 ರಿಂದ 6 ತಿಂಗಳಿಂದ 30 ದಿನಗಳ ಒಳಗಾಗಿ ತ್ವರಿತ ಸೇವೆ ಒದಗಿಸಲಾಗುತ್ತಿದೆ ಎಂದು ಕೃಷ್ಣಬೈರೇಗೌಡ ಹೇಳಿದರು.

ಪೋಡಿ ಅಭಿಯಾನದಡಿ ರೈತರ ಜಮೀನಿನ ದುರಸ್ತಿ ಪ್ರಕ್ರಿಯೆಯನ್ನು ಸುಗಮಗೊಳಿಸಲು, ಯಾವುದೇ ತಕರಾರು ಇಲ್ಲದೆ ಇರುವ ಜಮೀನುಗಳಿಗೆ ಸರಕಾರದಿಂದ ಸ್ವಯಂ ಪ್ರೇರಿತವಾಗಿ 1ರಿಂದ 5 ರವರೆಗಿನ ದಾಖಲೆಗಳನ್ನು ಸಿದ್ಧಪಡಿಸಲಾಗುವುದು. ಈ ಹಿಂದೆ ಪೋಡಿಗೆ ಅಗತ್ಯವಿದ್ದ ಕನಿಷ್ಠ 5 ದಾಖಲೆಗಳನ್ನು 3ಕ್ಕೆ ಇಳಿಸಲಾಗಿದೆ. ಸಂಪೂರ್ಣ ಪ್ರಕ್ರಿಯೆ ಆನ್‍ಲೈನ್ ಮೂಲಕ ನೈಜತೆ/ಅರ್ಹ ಪ್ರಕರಣಗಳಿಗೆ 30 ದಿನಗಳೊಳಗೆ ಅಳತೆ ಮತ್ತು ದುರಸ್ತಿ ಮಾಡಲಾಗುವುದು ಎಂದು ಕೃಷ್ಣಬೈರೇಗೌಡ ಹೇಳಿದರು.

ಈ ಹಿಂದೆ ಸರಕಾರವು 2015ರಲ್ಲಿ ಪ್ರಾರಂಭಿಸಿದ್ದ ಪೋಡಿ ಮುಕ್ತ ಗ್ರಾಮ ಅಭಿಯಾನದಲ್ಲಿ 16,630 ಗ್ರಾಮಗಳನ್ನು ಪೋಡಿ ಮುಕ್ತವನ್ನಾಗಿಸಲಾಗಿತ್ತು. ಈಗ ಪುನಃ 2024ರ ಆಯವ್ಯಯ ಘೋಷಣೆಯಂತೆ ಪೋಡಿ ಮುಕ್ತ ಗ್ರಾಮ ಅಭಿಯಾನ 2.0ವನ್ನು ಮೋಜಿಣಿ ತಂತ್ರಾಂಶದ ಮೂಲಕ ಪ್ರಾರಂಭಿಸಿ, ಈವರೆಗೆ 6,925 ಗ್ರಾಮಗಳನ್ನು ಆಯ್ಕೆ ಮಾಡಿಕೊಂಡು ಹಿಂದಿನ ಒಂದು ವರ್ಷದ ಅವಧಿಯಲ್ಲಿ 2,079 ಗ್ರಾಮಗಳನ್ನು ಪೋಡಿ ಮುಕ್ತಗೊಳಿಸಲಾಗಿದೆ. ಫಲಾನುಭವಿಗಳಿಗೆ ಪ್ರತ್ಯೇಕ ಪಹಣಿ ವಿತರಿಸಲಾಗಿದೆ ಎಂದು ಕೃಷ್ಣಬೈರೇಗೌಡ ವಿವರಿಸಿದರು.

ರಾಜ್ಯದಲ್ಲಿರುವ ಸುಮಾರು 30,700 ಗ್ರಾಮ ಠಾಣಾ ಪ್ರದೇಶಗಳನ್ನು ಹಂತ ಹಂತವಾಗಿ ಡ್ರೋನ್ ಮುಖಾಂತರ ಸರ್ವೆ ಮಾಡಿಸಿ ಆಸ್ತಿ ಮತ್ತು ಹಕ್ಕು ದಾಖಲಾತಿಗಳನ್ನು ಭೂ ಮಾಲಕರಿಗೆ ವಿತರಿಸುವ ಯೋಜನೆಯನ್ನು ರಾಜ್ಯಾದ್ಯಂತ ವಿತರಿಸಲಾಗುವುದು ಎಂದು ಕೃಷ್ಣಬೈರೇಗೌಡ ಹೇಳಿದರು.

ಆಕಾರ್ ಬಂದ್ ಮತ್ತು ಆರ್.ಟಿ.ಸಿಯಲ್ಲಿನ ವಿಸ್ತೀರ್ಣವನ್ನು ಹೊಂದಾಣಿಕೆ ಮಾಡುವ ಮೂಲಕ ಹಿಡುವಳಿದಾರರಿಗೆ ತ್ವರಿತ ಸೇವೆ ಒದಗಿಸಲು ಆಕಾರ್ ಬಂದ್‍ಗಳ ಕಾರ್ಯವನ್ನು ಕೈಗೊಳ್ಳಲಾಗುವುದು. ಸುಮಾರು 1.34 ಕೋಟಿ ಸರ್ವೆ ಸ್ಕೆಚ್(ಹಿಸ್ಸಾ)ಗಳನ್ನು ಗಣಕೀಕರಣಗೊಳಿಸಿ ಸಾರ್ವಜನಿಕರಿಗೆ ಮುಕ್ತವಾಗಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೃಷ್ಣಬೈರೇಗೌಡ ತಿಳಿಸಿದರು.

ಡ್ರೋನ್ ಆಧಾರಿತ ಮರು ಭೂಮಾಪನ: ಪ್ರಥಮ ಬಾರಿಗೆ ಆಧುನಿಕ ತಂತ್ರಜ್ಞಾನ ಆಧಾರಿತ ಡ್ರೋನ್ ಸರ್ವೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕು ಉಯ್ಯಂಬಳ್ಳಿ ಹೋಬಳಿಯ ಎಲ್ಲಾ 33 ಗ್ರಾಮಗಳಲ್ಲಿ ಮರುಭೂಮಾಪನದಡಿ 23,000 ಡ್ರೋನ್ ಆರ್.ಟಿ.ಸಿಗಳನ್ನು ವಿತರಿಸಲಾಗಿದೆ. ಕೇಂದ್ರ ಸರಕಾರದ ಸಹಯೋಗದೊಂದಿಗೆ “ನಕ್ಷಾ” ಯೋಜನೆಯಡಿಯಲ್ಲಿ ಪ್ರಾರಂಭಿಕವಾಗಿ ರಾಜ್ಯದ 10 ನಗರಸಭೆ/ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಆಸ್ತಿಗಳನ್ನು ಆಧುನಿಕ ತಂತ್ರಜ್ಞಾನ ಡ್ರೋನ್/ವೈಮಾನಿಕ ಸರ್ವೆ ಕೈಗೊಂಡು ಡಿಜಿಟಲ್ ಮಾಧ್ಯಮದಲ್ಲಿ ಆಸ್ತಿ ದಾಖಲೆಗಳನ್ನು ಸಿದ್ದಪಡಿಸಲಾಗುತ್ತಿದೆ ಎಂದು ಕೃಷ್ಣಬೈರೇಗೌಡ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X