Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನಗರ ಪಾಲಿಕೆ ಮಟ್ಟದಲ್ಲಿ ಪೊಲೀಸ್-ಪಾಲಿಕೆ...

ನಗರ ಪಾಲಿಕೆ ಮಟ್ಟದಲ್ಲಿ ಪೊಲೀಸ್-ಪಾಲಿಕೆ ಜಂಟಿ ಟಾಸ್ಕ್ ಫೋರ್ಸ್: ಕೃಷ್ಣಬೈರೇಗೌಡ

‘ಪಾದಚಾರಿ ಮಾರ್ಗಗಳ ಮರು ಒತ್ತುವರಿ ತಡೆಗೆ ಕ್ರಮ’

ವಾರ್ತಾಭಾರತಿವಾರ್ತಾಭಾರತಿ4 Sept 2026 6:26 PM IST
share
ನಗರ ಪಾಲಿಕೆ ಮಟ್ಟದಲ್ಲಿ ಪೊಲೀಸ್-ಪಾಲಿಕೆ ಜಂಟಿ ಟಾಸ್ಕ್ ಫೋರ್ಸ್: ಕೃಷ್ಣಬೈರೇಗೌಡ

ಬೆಂಗಳೂರು : ನಗರಾದ್ಯಂತ ತೆರವುಗೊಳಿಸಿದ ಪಾದಚಾರಿ ಮಾರ್ಗಗಳಲ್ಲಿ ಮರು ಒತ್ತುವರಿ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಪ್ರತಿ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆ ಹಾಗೂ ಪಾಲಿಕೆ ಅಧಿಕಾರಿಗಳನ್ನು ಒಳಗೊಂಡ ಜಂಟಿ ಟಾಸ್ಕ್ ಫೋರ್ಸ್ ರಚಿಸಿ, ನಿರಂತರ ಮೇಲ್ವಿಚಾರಣೆ ಹಾಗೂ ಜಂಟಿ ಕಾರ್ಯಾಚರಣೆ ನಡೆಸಬೇಕು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪಾದಚಾರಿ ಮಾರ್ಗಗಳ ಒತ್ತುವರಿ ಕುರಿತು ಶುಕ್ರವಾರ ನಡೆದ ವರ್ಚುವಲ್ ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಒತ್ತುವರಿ ತೆರವುಗೊಳಿಸಿದ ಬಳಿಕ ಮತ್ತೆ ಅದೇ ಸ್ಥಳದಲ್ಲಿ ಮರು ಒತ್ತುವರಿ ನಡೆಯುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೃಷ್ಣ ಬೈರೇಗೌಡ ನಿರ್ದೇಶನ ನೀಡಿದರು.

ಪ್ರತಿ ನಗರಪಾಲಿಕೆ ವ್ಯಾಪ್ತಿಯಲ್ಲಿ ಪೊಲೀಸ್ ಮತ್ತು ಪಾಲಿಕೆ ಅಧಿಕಾರಿಗಳ ಸಮನ್ವಯದೊಂದಿಗೆ ಜಂಟಿ ಟಾಸ್ಕ್ ಫೋರ್ಸ್ ರಚಿಸಬೇಕು. ತೆರವುಗೊಳಿಸಿದ ಪಾದಚಾರಿ ಮಾರ್ಗಗಳಲ್ಲಿ ನಿಯಮಿತ ಹಾಗೂ ಅನಿರೀಕ್ಷಿತ ಪರಿಶೀಲನೆ ನಡೆಸಿ, ಮರು ಒತ್ತುವರಿ ಕಂಡುಬಂದ ಕೂಡಲೇ ಸ್ಥಳದಲ್ಲೇ ಕ್ರಮ ಕೈಗೊಳ್ಳುವ ವ್ಯವಸ್ಥೆ ರೂಪಿಸಬೇಕು ಎಂದು ಕೃಷ್ಣ ಬೈರೇಗೌಡ ಸೂಚಿಸಿದರು.

ಮರು ಒತ್ತುವರಿ ಪ್ರಕರಣಗಳನ್ನು ತಕ್ಷಣ ಗುರುತಿಸಿ, ಫೋಟೋ ಹಾಗೂ ಜಿಯೋ-ಟ್ಯಾಗ್ ಮಾಹಿತಿಯೊಂದಿಗೆ ವರದಿ ಮಾಡುವ ವ್ಯವಸ್ಥೆ ಮಾಡಬೇಕು. ಮಾರ್ಷಲ್‍ಗಳು ಹಾಗೂ ಬೀಟ್ ಪೊಲೀಸ್ ಸಿಬ್ಬಂದಿ ಜಂಟಿಯಾಗಿ ನಿಯಮಿತವಾಗಿ ಪರಿಶೀಲನೆ ನಡೆಸಬೇಕು ಎಂದು ಕೃಷ್ಣ ಬೈರೇಗೌಡ ನಿರ್ದೇಶನ ನೀಡಿದರು.

ಒತ್ತುವರಿ ತೆರವುಗೊಳಿಸಿದ್ದೇವೆ ಎಂದು ಹೇಳುವುದಷ್ಟೇ ಸಾಕಾಗುವುದಿಲ್ಲ. ತೆರವುಗೊಳಿಸಿದ ಸ್ಥಳದಲ್ಲಿ ಮತ್ತೆ ಒತ್ತುವರಿ ಆಗದಂತೆ ನಿರಂತರ ಮೇಲ್ವಿಚಾರಣೆ ನಡೆಸಬೇಕು. ಮರು ಒತ್ತುವರಿ ಮಾಡುವ ಪುನರಾವರ್ತಿತ ಉಲ್ಲಂಘನಾಕಾರಿಗಳ ವಿರುದ್ಧ ಎಫ್‍ಐಆರ್ ದಾಖಲಿಸಿ, ಮೆಟೀರಿಯಲ್ ವಶಪಡಿಸಿಕೊಂಡು, ನಿಯಮಾನುಸಾರ ಹೆಚ್ಚಿನ ದಂಡ ವಿಧಿಸಬೇಕು ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಈ ಸಂಬಂಧ ಅಧಿಕಾರಿಗಳ ಜವಾಬ್ದಾರಿಯನ್ನು ಸ್ಪಷ್ಟವಾಗಿ ನಿಗದಿಪಡಿಸಿ, ಕೈಗೊಂಡ ಕ್ರಮಗಳ ಕುರಿತು ನಿಯಮಿತವಾಗಿ ಪ್ರಗತಿ ವರದಿ ಪರಿಶೀಲಿಸಬೇಕು. ಸ್ಟ್ರೀಟ್ ವೆಂಡಿಂಗ್‍ಗೆ ಸಂಬಂಧಿಸಿದಂತೆ ವೆಂಡಿಂಗ್‍ಗೆ ನಿರ್ಬಂಧಿತ ರಸ್ತೆಗಳ ಕುರಿತು ಸ್ಪಷ್ಟತೆ ನೀಡಬೇಕು. ಈ ಕುರಿತು ಸಂಬಂಧಪಟ್ಟ ಪೊಲೀಸ್ ಹಾಗೂ ಪಾಲಿಕೆ ಅಧಿಕಾರಿಗಳಿಗೆ ಅಧಿಕೃತವಾಗಿ ಮಾಹಿತಿ ನೀಡಬೇಕು ಎಂದು ಎಂದು ಕೃಷ್ಣ ಬೈರೇಗೌಡ ಸೂಚಿಸಿದರು

ಮುಖ್ಯ ಹಾಗೂ ಹೆಚ್ಚಿನ ಸಂಚಾರವಿರುವ ರಸ್ತೆಗಳಲ್ಲಿ ಪಾದಚಾರಿ ಮತ್ತು ವಾಹನ ಸಂಚಾರಕ್ಕೆ ಯಾವುದೇ ರೀತಿಯ ಅಡಚಣೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಸುಗಮ ಸಂಚಾರಕ್ಕೆ ಆದ್ಯತೆ ನೀಡಬೇಕು ಎಂದು ಕೃಷ್ಣ ಬೈರೇಗೌಡ ನಿರ್ದೇಶನ ನೀಡಿದರು.

ಸ್ಟ್ರೀಟ್ ವೆಂಡರ್‍ಗಳಿಗೆ ಸಂಬಂಧಿಸಿದಂತೆ ಹೊಸ ಸಮಗ್ರ ಸಮೀಕ್ಷೆಯನ್ನು ತ್ವರಿತವಾಗಿ ನಡೆಸಬೇಕು. ಸಮೀಕ್ಷೆಯ ಬಳಿಕ ಅರ್ಹತೆ ಹಾಗೂ ಕಾನೂನುಬದ್ಧ ಮಾನದಂಡಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, ನಗರ ಪಾಲಿಕೆ ಆಯುಕ್ತರಾದ ರಮೇಶ್ ಡಿ.ಎಸ್., ಪೆÇಮ್ಮಲ ಸುನೀಲ್ ಕುಮಾರ್, ರಮೇಶ್ ಕೆ.ಎನ್., ಜಿ.ಜಗದೀಶ್, ಡಾ.ರಾಜೇಂದ್ರ ಕೆ.ವಿ., ಪೆÇಲೀಸ್ ಅಧಿಕಾರಿಗಳು, ಕಾರ್ಯಪಾಲಕ ಇಂಜಿನಿಯರ್‍ಗಳು ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

ಪಾಲಿಕೆ-ಪೊಲೀಸ್ ಜಂಟಿ ಆದೇಶ ಹೊರಡಿಸಲು ಸೂಚನೆ..!

ಪಾಲಿಕೆ-ಪೊಲೀಸ್ ಜಂಟಿ ಕಾರ್ಯಾಚರಣೆ, ಟಾಸ್ಕ್ ಫೋರ್ಸ್ ರಚನೆ, ರಸ್ತೆವಾರು ವ್ಯಾಪ್ತಿ ಗುರುತಿಸುವಿಕೆ, ಮರು ಒತ್ತುವರಿ ಪತ್ತೆ ಹಾಗೂ ಕಾನೂನು ಕ್ರಮಗಳ ಕುರಿತು ಮುಖ್ಯ ಆಯುಕ್ತರ ಮಟ್ಟದಲ್ಲಿ ಜಂಟಿ ಆದೇಶ/ಸಕ್ರ್ಯುಲರ್ ಹೊರಡಿಸಬೇಕು. ಪ್ರತಿ ಅಧಿಕಾರಿಯ ಜವಾಬ್ದಾರಿ ಮತ್ತು ಕಾರ್ಯವ್ಯಾಪ್ತಿಯನ್ನು ಸ್ಪಷ್ಟವಾಗಿ ನಿಗದಿಪಡಿಸಿ, ಮರು ಒತ್ತುವರಿ ಪ್ರಕರಣಗಳ ಕುರಿತು ತ್ವರಿತವಾಗಿ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವಿವರಗಳನ್ನು ನಿಯಮಿತವಾಗಿ ಪರಿಶೀಲಿಸುವ ವ್ಯವಸ್ಥೆ ರೂಪಿಸಬೇಕು ಎಂದು ಕೃಷ್ಣ ಬೈರೇಗೌಡ ನಿರ್ದೇಶನ ನೀಡಿದರು.

Tags

Krishna Byre Gowda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X