Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಮಾಜದ ಎಲ್ಲರೂ ಒಟ್ಟಾಗಿ ಸರಕಾರಿ ಶಾಲೆಗಳ...

ಸಮಾಜದ ಎಲ್ಲರೂ ಒಟ್ಟಾಗಿ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಬೇಕಿದೆ : ಕೃಷ್ಣ ಬೈರೇಗೌಡ

ವಾರ್ತಾಭಾರತಿವಾರ್ತಾಭಾರತಿ26 Sept 2024 10:30 PM IST
share
ಸಮಾಜದ ಎಲ್ಲರೂ ಒಟ್ಟಾಗಿ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಬೇಕಿದೆ : ಕೃಷ್ಣ ಬೈರೇಗೌಡ

ಬೆಂಗಳೂರು : ಸಮಾಜದಲ್ಲಿರುವ ಪ್ರತಿಯೊಬ್ಬರೂ ಹೆಚ್ಚಿನ ಪ್ರಯತ್ನ ಮಾಡಿ ಸರಕಾರಿ ಶಾಲೆಗಳಲ್ಲಿ ಮತ್ತಷ್ಟು ಉತ್ತಮ ಗುಣಮಟ್ಟದ ಶಿಕ್ಷಣ ಲಭ್ಯವಾಗುವಂತೆ ನೋಡಿಕೊಳ್ಳಬೇಕಿದೆ. ಖಾಸಗಿ ಶಾಲೆಯ ಮಕ್ಕಳೂ ಸರಕಾರಿ ಶಾಲೆಗಳ ಕಡೆ ಮುಖಮಾಡುವಂತಹ ದಿನಗಳು ಶೀಘ್ರದಲ್ಲೇ ಬರಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಭಿಪ್ರಾಯಪಟ್ಟರು.

ಗುರುವಾರ ವಿದ್ಯಾಶಿಲ್ಪ್ ಕಮ್ಯೂನಿಟಿ ಟ್ರಸ್ಟ್‌ ನ ಸಿಎಸ್‍ಆರ್ ನಿಧಿ ಹಾಗೂ ಉದ್ಯಮಿ ಆನಂದ್ ಪೈ ಕುಟುಂಬದವರ ಸಹಯೋಗದೊಂದಿಗೆ ಬ್ಯಾಟರಾಯನಪುರದಲ್ಲಿ 4.5 ಕೋಟಿ ರೂ.ವೆಚ್ಚದಲ್ಲಿ 17 ನೂತನ ತರಗತಿ ಕೊಠಡಿ, ಉತ್ತಮ ಗುಣಮಟ್ಟದ ಶೌಚಾಲಯ ಹಾಗೂ ಅಡುಗೆ ಕೊಣೆಯನ್ನು ಒಳಗೊಂಡ ಹೈಟೆಕ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮೆಲ್ಲರ ಜವಾಬ್ದಾರಿ. ಆ ನಿಟ್ಟಿನಲ್ಲಿ ಖಾಸಗಿ ಶಾಲೆಯ ಮಕ್ಕಳಿಗೆ ಸಿಗುವಂತಹ ಉತ್ತಮ ಗುಣಮಟ್ಟದ ಶಿಕ್ಷಣ ಸರಕಾರಿ ಶಾಲೆಯ ಮಕ್ಕಳಿಗೂ ಸಿಗುವಂತಾಗಬೇಕು ಎಂಬುದೇ ಎಲ್ಲರ ಆಶಯ. ಆ ನಿಟ್ಟಿನಲ್ಲಿ ಬ್ಯಾಟರಾಯನಪುರ ಕ್ಷೇತ್ರದಲ್ಲಿ ಪ್ರಸ್ತುತ ನಿರ್ಮಿಸಲಾಗಿರುವ ಈ ಶಾಲೆ ಯಾರೇ ಆದರೂ ಒಮ್ಮೆ ತಿರುಗಿ ನೋಡುವಂತೆ ಅಭಿವೃದ್ಧಿಯಾಗಿರುವುದು ಸಂತಸದ ವಿಚಾರ ಎಂದು ಅವರು ಹೇಳಿದರು.

ಬ್ಯಾಟರಾಯನಪುರದಲ್ಲಿ ಅನೇಕ ಸರಕಾರಿ ಶಾಲೆಗಳನ್ನು ಈಗಾಗಲೇ ಸಿಎಸ್‍ಆರ್ ಫಂಡ್ ಬಳಸಿ ಉನ್ನತ ಮಟ್ಟಕ್ಕೆ ಏರಿಸಲಾಗಿದೆ. ಖಾಸಗಿ ಶಾಲೆಗಳಿಗಿಂತ ಉತ್ತಮ ಗುಣಮಟ್ಟದ ಕಟ್ಟಡ ಹಾಗೂ ಕಲಿಕಾ ಸೌಲಭ್ಯಗಳನ್ನು ಒದಗಿಸಲಾಗಿದೆ. ಪರಿಣಾಮ ಸರಕಾರಿ ಶಾಲೆಗಳಿಗೆ ಆಗಮಿಸುವ ಮಕ್ಕಳ ಸಂಖ್ಯೆಯಲ್ಲೂ ಗಣನೀಯ ಏರಿಕೆ ಕಂಡಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಇದೇ ಮಾದರಿಯಲ್ಲಿ ಇದೀಗ ಮತ್ತೊಂದು ಶಾಲೆ ಲೋಕಾರ್ಪಣೆಯಾಗಿದ್ದು ನಿಜಕ್ಕೂ ಹೆಮ್ಮೆ ಪಡಬೇಕಾದ ವಿಚಾರ. ಈ ಮೂಲಕ ನಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ, ನಾಳಿನ ಸಮಾಜಕ್ಕೆ ಅವರನ್ನು ಆಸ್ತಿಯನ್ನಾಗಿ ರೂಪಿಸುವ ನಿಟ್ಟಿನಲ್ಲಿ ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದು ಅವರು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಶಾಲಾ ಶಿಕ್ಷಕರಿಗೂ ಕಿವಿಮಾತು ಹೇಳಿದ ಕೃಷ್ಣ ಬೈರೇಗೌಡ, ದೊಡ್ಡ ದೊಡ್ಡ ಕಟ್ಟಡಗಳನ್ನು ಕಟ್ಟಿದ ಕೂಡಲೆ ಶಾಲೆಗಳು ಉತ್ತಮಗೊಳ್ಳುವುದಿಲ್ಲ. ಬದಲಾಗಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಿದಾಗ ಮಾತ್ರ ನಮ್ಮ ಕೆಲಸ ಸಾರ್ಥಕವಾಗುತ್ತದೆ. ಆ ನಿಟ್ಟಿನಲ್ಲಿ ಶಿಕ್ಷಕರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ ಎಂದು ಹೇಳಿದರು.

ಶಾಲೆಯ ಶಿಕ್ಷಕರು ನಮ್ಮ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡುವ ಕೆಲಸ ಮಾಡಲಿ, ಸರಕಾರಿ ಶಾಲೆಯಲ್ಲಿ ಓದಿದ ಮಕ್ಕಳೂ ನಾಳೆ ದೊಡ್ಡ ಉದ್ಯಮಿಗಳಾಗಿ ನಮ್ಮ ಸಮಾಜಕ್ಕೆ ಹಾಗೂ ಎಲ್ಲ ಶಿಕ್ಷಕರಿಗೂ ಮತ್ತಷ್ಟು ಸ್ಫೂರ್ತಿ ಪ್ರೇರಣೆಯಾಗಲಿ ಎಂದು ಕೃಷ್ಣ ಬೈರೇಗೌಡ ಆಶಿಸಿದರು.

ಕಾರ್ಯಕ್ರಮದಲ್ಲಿ ಉದ್ಯಮಿ ಪಿ.ರವೀಂದ್ರ ಪೈ, ಕ್ಷೇತ್ರ ಶಿಕ್ಷಣಾಧಿಕಾರಿ ರಾಮಮೂರ್ತಿ, ಡಾ.ಪಿ.ದಯಾನಂದ ಪೈ ಹಾಗೂ ಕುಟುಂಬ ವರ್ಗದವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X