Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪ್ರತಿಯೊಬ್ಬ ಭೂಮಾಪಕರಿಗೂ ರೋವರ್ ನೀಡಲು...

ಪ್ರತಿಯೊಬ್ಬ ಭೂಮಾಪಕರಿಗೂ ರೋವರ್ ನೀಡಲು ಕ್ರಮ : ಕೃಷ್ಣ ಬೈರೇಗೌಡ

ವಾರ್ತಾಭಾರತಿವಾರ್ತಾಭಾರತಿ19 Feb 2025 8:20 PM IST
share
ಪ್ರತಿಯೊಬ್ಬ ಭೂಮಾಪಕರಿಗೂ ರೋವರ್ ನೀಡಲು ಕ್ರಮ : ಕೃಷ್ಣ ಬೈರೇಗೌಡ

ಬೆಂಗಳೂರು : ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮೂಲಕ ತ್ವರಿತ ಸರ್ವೇ ಮಾಡಿಕೊಡುವುದು ಮತ್ತು ಅಧಿಕಾರಿಗಳ ಒತ್ತಡ ಕಡಿಮೆ ಮಾಡುವುದು ನಮ್ಮ ಉದ್ದೇಶವಾಗಿದ್ದು, ಮುಂದಿನ ದಿನಗಳಲ್ಲಿ ಪ್ರತಿಯೊಬ್ಬ ಭೂಮಾಪಕರಿಗೂ ಒಂದು ರೋವರ್ ನೀಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದ್ದಾರೆ.

ಬುಧವಾರ ಇಲ್ಲಿನ ಕೆ.ಆರ್.ವೃತ್ತದಲ್ಲಿರುವ ಸರ್ವೇ ಆಯುಕ್ತರ ಕಚೇರಿಯಲ್ಲಿ ಆಯೋಜಿಸಿದ್ದ ಆಧುನಿಕ 465 ‘ರೋವರ್’ ಉಪಕರಣಗಳನ್ನು ಭೂಮಾಪಕರಿಗೆ ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಚೈನ್ ಸರ್ವೇ ಕೆಲಸದಲ್ಲಿ ಕೆಲವರು ತಮ್ಮ ಹಿತಾಸಕ್ತಿಗೆ ಅನುಗುಣವಾಗಿ ಸರ್ವೇಯಲ್ಲಿ ಬದಲಾವಣೆ ಮಾಡಬಹುದು. ಇದರಿಂದ ಕೆಲವರು ಇಂದಿಗೂ ಕೋರ್ಟ್ ಕಚೇರಿಗೆ ಅಲೆಯುವಂತಾಗಿದೆ. ಆದರೆ, ರೋವರ್ ಸರ್ವೇಯಲ್ಲಿ ಇಂತಹ ಅಕ್ರಮಗಳಿಗೆ ಆಸ್ಪದ ಇರುವುದಿಲ್ಲ. ಹೀಗಾಗಿ ಎಲ್ಲ ಭೂಮಾಪಕರಿಗೂ ರೋವರ್ ನೀಡಲಾಗುವುದು ಎಂದು ಅವರು ತಿಳಿಸಿದರು.

ಸರ್ವೇ ಕೆಲಸವನ್ನು ಹಿಂದಿನಿಂದಲೂ ಚೈನ್ ಹಿಡಿದೇ ಭೂಮಿಯನ್ನು ಅಳೆಯುವ ಸಂಪ್ರದಾಯ ಚಾಲ್ತಿಯಲ್ಲಿದೆ. ಬಿಸಿಲಿನಲ್ಲಿ ಸರ್ವೇಯರ್ ಜೊತೆಗೆ ಇಬ್ಬರು ಸಹಾಯಕರೂ ಕೆಲಸ ಮಾಡಬೇಕಿತ್ತು. ಸರ್ವೇ ಮಾಡಿ, ನಕ್ಷೆ ಮಾಡಲು 3 ಗಂಟೆ ಸಮಯ ವ್ಯರ್ಥವಾಗುತ್ತಿತ್ತು. ಆದರೆ, ಆಧುನಿಕ ತಂತ್ರಜ್ಞಾನ ಆಧಾರಿತ ರೋವರ್ ಈ ಕೆಲಸವನ್ನು ಕೇವಲ 10 ನಿಮಿಷಕ್ಕೆ ಮುಗಿಸಲಿದೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ 1830 ರಿಂದ 1870ರ ವರೆಗೆ ಮಾತ್ರ ಸರ್ವೇ ಕೆಲಸ ಆಗಿದೆ. 1967 ರಲ್ಲಿ ಅಲ್ಪ ಸಲ್ಪ ಸರ್ವೇ ಆಗಿದೆ ಎಂಬುದನ್ನು ಬಿಟ್ಟರೆ ಉಳಿದಂತೆ ಸರ್ವೇ ಆಗಿಲ್ಲ. ಆದರೆ, ಪ್ರಸ್ತುತ ರೈತರ ನಾನಾ ಸಮಸ್ಯೆಗಳಿಗೆ ಸರ್ವೇ ಹಾಗೂ ರೀ ಸರ್ವೇ ಕೆಲಸಗಳಿಗೆ ವೇಗ ತುಂಬುವ ಅಗತ್ಯವಿದೆ. ಆದರೆ, 1806ರಿಂದಲೂ ಸರ್ವೇ ಕೆಲಸಗಳಿಗೆ ಬಳಸಿದ ಚೈನ್ ವ್ಯವಸ್ಥೆಯನ್ನು ಈಗಲೂ ಮುಂದುವರೆಯುತ್ತಿರುವುದು ಆಘಾತಕಾರಿ ಎಂದು ಅವರು ಕಳವಳ ವ್ಯಕ್ತಪಡಿಸಿದರು.

200 ವರ್ಷದಲ್ಲಿ ಪ್ರಪಂಚ ಇಷ್ಟು ಬದಲಾದರೂ ನಮ್ಮ ವಿಧಿ-ವಿಧಾನ ಹಾಗೆಯೇ ಇದೆ. ಪ್ರಪಂಚದ ಮುಖ ಅಂತರಾಳ ಬದಲಾದರೂ, ಇಲಾಖೆ ಕೆಲಸ ಮಾಡುವ ರೀತಿ ನೀತಿ ಮಾತ್ರ ಬದಲಾಗಿಲ್ಲ. ಆದರೆ, ಸರ್ವೇ ಕೆಲಸವನ್ನು ತಾಂತ್ರಿಕಗೊಳಿಸದೆ ಕೆಲಸ ಮಾಡುವುದಕ್ಕೆ ಜನ ಇದ್ದಾರೆ ಎಂದು ಉಡಾಫೆಯಿಂದ ನೌಕರರ ಮೇಲೆ ಹೊರೆ ಹಾಕುವುದು ಅಮಾನವೀಯ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದ ನಡವಳಿಕೆ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಶಾಸಕ ರಿಝ್ವಾನ್ ಅರ್ಶದ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಇಲಾಖೆಯ ಆಯುಕ್ತ ಸುನೀಲ್ ಕುಮಾರ್ ಹಾಗೂ ಭೂ ಮಾಪನಾ ಇಲಾಖೆ ಆಯುಕ್ತ ಮಂಜುನಾಥ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X