ಕೆಎಸ್ಸಾರ್ಟಿಸಿ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಭೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಕೆಎಸ್ಸಾರ್ಟಿಸಿ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯೊಂದಿಗೆ ಸಭೆ ನಡೆಸಿದರು.
ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಕೆಎಸ್ಸಾರ್ಟಿಸಿ ಕಾರ್ಮಿಕ ಸಂಘಟನೆಯ ಮುಖಂಡ ಅನಂತಸುಬ್ಬರಾವ್ ಮತ್ತು ಸಾರಿಗೆ ನಿಗಮಗಳ ಅಧ್ಯಕ್ಷರು, ಕಾರ್ಮಿಕ ಸಂಘಟನೆಗಳ ಮುಖಂಡರು ಮತ್ತು ಹಣಕಾಸು ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸಾರಿಗೆ ನೌಕರರಿಗೆ 38 ತಿಂಗಳ ವೇತನ ಬಾಕಿ ಬರಬೇಕು. ಅದರಲ್ಲಿ 14 ತಿಂಗಳ ವೇತನ ಕೊಡುವುದಾಗಿ ಹೇಳುತ್ತಿದ್ದಾರೆ. 2024ರಲ್ಲಿ ವೇತನ ಪರಿಷ್ಕರಣೆಯಾಗಬೇಕಿತ್ತು. ಆದರೆ, 2026ರಲ್ಲಿ ಮಾಡುವುದಾಗಿ ಹೇಳುತ್ತಿದ್ದಾರೆ. ಒಂದು ಸಾವಿರ ಕೋಟಿ ರೂ.ವಿಚಾರಕ್ಕೆ ಚೌಕಾಸಿ ನಡೆಯುತ್ತಿದೆ. ಡಿ.6ರಂದು ಮತ್ತೆ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ ಎಂದು ಅನಂತ ಸುಬ್ಬರಾವ್ ಸಭೆಯ ಬಳಿಕ ಸುದ್ದಿಗಾರರಿಗೆ ತಿಳಿಸಿದರು.
Next Story





