Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು ವರ್ತುಲ ರಸ್ತೆ ಯೋಜನೆಗೆ...

ಬೆಂಗಳೂರು ವರ್ತುಲ ರಸ್ತೆ ಯೋಜನೆಗೆ ಶೀಘ್ರವೇ ಒಪ್ಪಿಗೆ: ಎಚ್‍ಡಿ ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ20 March 2025 7:07 PM IST
share
ಬೆಂಗಳೂರು ವರ್ತುಲ ರಸ್ತೆ ಯೋಜನೆಗೆ ಶೀಘ್ರವೇ ಒಪ್ಪಿಗೆ: ಎಚ್‍ಡಿ ಕುಮಾರಸ್ವಾಮಿ

ಹೊಸದಿಲ್ಲಿ : ಬೆಂಗಳೂರು ನಗರದ ವಾಹನ ದಟ್ಟಣೆಯನ್ನು ಗಣನೀಯ ತಗ್ಗಿಸುವ ಉಪ ನಗರ ವರ್ತುಲ ರಸ್ತೆ ಯೋಜನೆ (ಎಸ್‍ಟಿಆರ್‌ಆರ್) ಕೇಂದ್ರ ಸಂಪುಟದ ಮುಂದೆ ಬರಲಿದ್ದು, ಯೋಜನೆಗೆ ‘ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೌಲ್ಯಮಾಪನ ಸಮಿತಿ' ಒಪ್ಪಿಗೆ ನೀಡಿದೆ.

ಗುರುವಾರ ಈ ಬಗ್ಗೆ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು, ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಭರವಸೆ ನೀಡಿದ್ದು, ಶೀಘ್ರವೇ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಯೋಜನೆಗೆ ಮಂಜೂರಾತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಸಂಸತ್ ಭವನದ ಕಚೇರಿಯಲ್ಲಿ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾದ ಸಚಿವ ಕುಮಾರಸ್ವಾಮಿ, ಈ ಯೋಜನೆಯ ಬಗ್ಗೆ ಸಮಾಲೋಚನೆ ನಡೆಸಿದರು. ಉಪನಗರ ವರ್ತುಲ ರಸ್ತೆ ಯೋಜನೆ 2013ರಲ್ಲಿಯೇ ಚಾಲನೆ ಪಡೆದಿತ್ತು. ಆದರೆ, ಹಲವಾರು ಕಾರಣಗಳಿಂದ ಅದು ನೆನೆಗುದಿಗೆ ಬಿದ್ದಿತ್ತು. ಬೆಂಗಳೂರು ಸುತ್ತಮುತ್ತ ಇರುವ ಎಂಟು ಕೈಗಾರಿಕಾ ಪಟ್ಟಣಗಳಿಗೆ ಸಂಪರ್ಕ ಕಲ್ಪಿಸುವ ಯೋಜನೆ ಇದಾಗಿದೆ. ಈ ಯೋಜನೆಯ ಕಾರ್ಯಗತಕ್ಕೆ ಮಾಜಿ ಪ್ರಧಾನಿ ದೇವೇಗೌಡ ಸಾಕಷ್ಟು ಪ್ರಯತ್ನ ಮಾಡಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದರು.

ಈ ಯೋಜನೆಯು ದಾಬಸ್‍ಪೇಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ಸೂಲಿಬೆಲೆ, ಹೊಸಕೋಟೆ, ಆನೇಕಲ್, ಕನಕಪುರ, ರಾಮನಗರ ಮತ್ತು ಮಾಗಡಿ ಸೇರಿದಂತೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಉಪನಗರ ಪ್ರದೇಶಗಳನ್ನು ಸಂಪರ್ಕಿಸುತ್ತದೆ. ಹಾಗೂ ಬೆಂಗಳೂರು-ಚೆನ್ನೈ ಎಕ್ಸ್‌ ಪ್ರೆಸ್ ಹೈವೇಯನ್ನು ಕೂಡುತ್ತದೆ. ಜತೆಗೆ ತಮಿಳುನಾಡಿನ ಹೊಸೂರನ್ನೂ ಸಂಪರ್ಕಿಸುತ್ತದೆ. ಈ ಉಪನಗರ ವರ್ತುಲ ರಸ್ತೆಯನ್ನು ಬೆಂಗಳೂರು-ಚೆನ್ನೈ ಎಕ್ಸ್‍ಪ್ರೆಸ್ ಹೆದ್ದಾರಿಯ ಸಂಪರ್ಕಗೊಳಿಸಲಾಗುವುದು. ಕೈಗಾರಿಕೆಗಳಿಗೆ ಸರಕು ಸರಂಜಾಮು ಸಾಗಿಸುವ ಬೃಹತ್ ವಾಹನ ಬೆಂಗಳೂರು ನಗರದೊಳಕ್ಕೆ ಪ್ರವೇಶ ಮಾಡದಂತೆ ತಡೆಯುವುದೇ ಈ ಯೋಜನೆಯ ಉದ್ದೇಶ ಎಂದು ಅವರು ಹೇಳಿದರು.

ಯೋಜನೆಯು ಕರ್ನಾಟಕ ರಾಜ್ಯದಲ್ಲಿ 135 ಕಿ.ಮೀ.ದೂರ ಹಾದು ಹೋಗಲಿದ್ದು, ಯೋಜನೆಯ ಸುಮಾರು 4,750ಕೋಟಿ ರೂ.ವೆಚ್ಚದಲ್ಲಿ ಕಾರ್ಯಗತ ಆಗುತ್ತಿದೆ. 4 ರಿಂದ 6 ಪಥ ಹೊಂದಿರುವ ಸಂಪೂರ್ಣ ನಿಯಂತ್ರಿತ ಪ್ರವೇಶ ವ್ಯವಸ್ಥೆಯನ್ನು ಹೊಂದಿರುವ ಈ ಹೆದ್ದಾರಿಯು ಯಾವುದೇ ಅಡೆತಡೆಗಳಿಲ್ಲದೆ ಸಂಚಾರ ಸೌಲಭ್ಯ ಕಲ್ಪಿಸಲಿದೆ. ಬೆಂಗಳೂರು ಸುತ್ತಲಿನ ಉಪನಗರಗಳ ಮೂಲಕ ರಸ್ತೆ ಹಾದು ಹೋಗಲಿದೆ. ಇದು ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲಿದೆ ಎಂದು ಅಂದಾಜಿಸಲಾಗಿದೆ ಎಂದು ಅವರು ತಿಳಿಸಿದರು

‘ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕೈಗೊಂಡಿರುವ ಯೋಜನೆ ಇದಾಗಿದ್ದು, ಕೈಗಾರಿಕಾಭಿವೃದ್ಧಿಗೆ ಕೊಡುಗೆ ನೀಡಲಿದೆ. ಪ್ರಧಾನಿ ಮೋದಿ ಮಾರ್ಗದರ್ಶನದಲ್ಲಿ ಇದೆಲ್ಲಾ ಸಾಧ್ಯವಾಗುತ್ತಿದೆ. ರಾಜ್ಯದ ಅಭಿವೃದ್ಧಿ ಬಗ್ಗೆ ನಿತಿನ್ ಗಡ್ಕರಿ ತೋರಿದ ಬದ್ಧತೆ ಅಭಿನಂದನಾರ್ಹ’

-ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X