Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪ್ರವರ್ಗ 2 ‘ಎ’ನಲ್ಲಿ ಸಿಂಹಪಾಲು ಬೆಣ್ಣೆ...

ಪ್ರವರ್ಗ 2 ‘ಎ’ನಲ್ಲಿ ಸಿಂಹಪಾಲು ಬೆಣ್ಣೆ ನುಂಗಿದ ಭೂಪರು ಯಾರು?: ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ16 April 2025 5:00 PM IST
share
ಪ್ರವರ್ಗ 2 ‘ಎ’ನಲ್ಲಿ ಸಿಂಹಪಾಲು ಬೆಣ್ಣೆ ನುಂಗಿದ ಭೂಪರು ಯಾರು?: ಕುಮಾರಸ್ವಾಮಿ

ಬೆಂಗಳೂರು : ‘ಹಿಂದುಳಿದ ವರ್ಗಗಳ ಪ್ರವರ್ಗ 2 ‘ಎ’ ಮೀಸಲಾತಿ ಅಡಿಯಲ್ಲಿ ಸಿಂಹಪಾಲು ‘ಬೆಣ್ಣೆ’ ನುಂಗಿದ ಭೂಪರು ಯಾರು?’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಇಂದಿಲ್ಲಿ ಪ್ರಶ್ನೆ ಮಾಡಿದ್ದಾರೆ.

ಬುಧವಾರ ಪ್ರಕಟಣೆ ನೀಡಿರುವ ಕುಮಾರಸ್ವಾಮಿ, ‘ಜಾತಿ ಗಣತಿ ರಾಜಕೀಯ ಫಸಲಿಗೆ ಹೊಂಚು ಹಾಕಿರುವ ಸಿದ್ದರಾಮಯ್ಯನವರೇ.. ಸತ್ಯವನ್ನೇ ಹೇಳಿ, ನಿಮ್ಮ ಬೆರಳ ತುದಿಯಲ್ಲೇ ದತ್ತಾಂಶವಿದೆ. ನೀವು ಸುಳ್ಳು ಹೇಳಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಅಲ್ಲವೇ? ಸತ್ಯಮೇವ ಜಯತೇ...’ ಎಂದು ಹೇಳಿದ್ದಾರೆ.

‘ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನಿಮಗೂ ಗೊತ್ತು, 2 ‘ಎ’ ಪ್ರವರ್ಗದಲ್ಲಿ 101 ಜಾತಿಗಳಿವೆ. ಶೇ.15ರಷ್ಟು ಮೀಸಲಾತಿ ಪಾಲು ಇದೆ. ಈ ಪಾಲಿನಲ್ಲಿ ಅತಿಹೆಚ್ಚು ಪಾಲು ನುಂಗಿದವರು ಯಾರು ದೇವ್ರು? ಈ ನುಂಗುವಿಕೆಯಲ್ಲಿಯೂ ನಿಮ್ಮ ಪಾತ್ರವೇನು ಸ್ವಾಮೀ? ಸತ್ಯ ಹೇಳಿ ಎಂದು ಕುಮಾರಸ್ವಾಮಿ ಅವರು ಕೇಳಿದ್ದಾರೆ.

ಹದಿನೈದು-ಇಪ್ಪತ್ತು ವರ್ಷಗಳಲ್ಲಿ ಎ, ಬಿ, ಸಿ, ಡಿ ಗ್ರೂಪ್‍ಗಳಲ್ಲಿ ನಡೆದಿರುವ ನೇಮಕಾತಿ, ವೃತ್ತಿಪರ ಕೋರ್ಸ್ ಪ್ರವೇಶ, ಇನ್ನಿತರೆ ಎಲ್ಲ್ಲ ಸೌಲಭ್ಯಗಳ ಅಂಕಿ-ಅಂಶ ಸುಳ್ಳು ಹೇಳುವುದಿಲ್ಲ, ಹೌದಲ್ಲವೇ?. ವ್ಯದ್ಯಕೀಯ, ದಂತ ವೈದ್ಯಕೀಯ, ಎಂಜಿನಿಯರಿಂಗ್, ಡಿ-ಫಾರ್ಮ, ಬಿ-ಫಾರ್ಮ, ಕೃಷಿ ಇತ್ಯಾದಿ ವಿಭಾಗಗಳಲ್ಲಿ 2 ‘ಎ’ ಪ್ರವರ್ಗದ ನೂರೊಂದು ಜಾತಿಗಳಲ್ಲಿ ಯಾವ್ಯಾವ ಜಾತಿಯ ಎಷ್ಟೆಷ್ಟು ಮಕ್ಕಳಿಗೆ ಪ್ರವೇಶ ಸಿಕ್ಕಿದೆ. ಇಲ್ಲಿಯೂ ಸಿಂಹಪಾಲು ಪ್ರವೇಶ, ಲಾಭ ದಕ್ಕಿದ್ದು ಯಾರಿಗೆ? ಮಲ್ಲೇಶ್ವರಂ 18ನೇ ಅಡ್ಡರಸ್ತೆಯಲ್ಲಿ (ಕೆಇಎ) ಸಮಗ್ರ ದತ್ತಾಂಶ ಲಭ್ಯವಿದೆ, ತಾವು ತರಿಸಿ ನೋಡಬಹುದು ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

‘2 ‘ಎ’ ಪ್ರವರ್ಗದ ನೂರೊಂದು ಸಮಾಜಗಳ ಪೈಕಿ ಎಲ್ಲ ನೂರು ಸಮಾಜಗಳಲ್ಲಿ ನನ್ನ ಮನವಿ ಇಷ್ಟೇ. ಒಕ್ಕಲಿಗರು, ವೀರಶೈವ, ಲಿಂಗಾಯತರ ಕಡೆ ಬೆರಳು ತೋರಿಸಿ ನಿಮ್ಮ ಮೂಗಿಗೆ ಬೆಣ್ಣೆ ಕೊಸರು ಸವರುತ್ತಿದ್ದಾರೆ. ನಿಮ್ಮ ನ್ಯಾಯಯುತ ಪಾಲಿನಲ್ಲಿ ಸಿಂಹಪಾಲು ಕಬಳಿಸಿದ್ದು ಯಾರೆಂದು ನಿಮಗೂ ಚೆನ್ನಾಗಿ ಗೊತ್ತು? ಆದರೂ ಸುಮ್ಮನಿದ್ದೀರಿ! ಯಾಕೆ? ನಿಮ್ಮ ಎದುರು ನಿಂತು ಲಿಂಗಾಯಿತರು, ಒಕ್ಕಲಿಗರನ್ನು ಬೈದರೇ ನಿಮ್ಮ ಹೊಟ್ಟೆ ತುಂಬುವುದೇ? ನಿಮ್ಮ ಮಕ್ಕಳಿಗೆ ನ್ಯಾಯ ಸಿಗುವುದೇ? ಎಂದು ಅವರು ಪ್ರಶ್ನಿಸಿದ್ದಾರೆ.

ಅತೀ ಹಿಂದುಳಿದ 2 ‘ಎ’ ಪ್ರವರ್ಗದಲ್ಲಿ ಅತೀ ಹೆಚ್ಚು ಪಾಲು ಬೆಣ್ಣೆ ತಿಂದವರು ಯಾರು? ಈಗಲಾದರೂ ಸತ್ಯ ಹೇಳಿ ಸಿದ್ದರಾಮಯ್ಯನವರೇ.. ನಿಮ್ಮಿಂದ ಉತ್ತರ ನಿರೀಕ್ಷಿಸುತ್ತೇನೆ. ಸತ್ಯಮೇವ ಜಯತೇ.. ಸತ್ಯಕ್ಕೆ ಜಯವಾಗಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X