Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ದೇವೇಗೌಡರ ಮೇಲೆ ಗೌರವವಿದ್ದರೆ ದೇಶಕ್ಕೆ...

ದೇವೇಗೌಡರ ಮೇಲೆ ಗೌರವವಿದ್ದರೆ ದೇಶಕ್ಕೆ ವಾಪಸ್ ಬಂದು ತನಿಖೆಗೆ ಸಹಕರಿಸು : ಪ್ರಜ್ವಲ್‍ಗೆ ಕುಮಾರಸ್ವಾಮಿ ಮನವಿ

ವಾರ್ತಾಭಾರತಿವಾರ್ತಾಭಾರತಿ20 May 2024 8:43 PM IST
share
ದೇವೇಗೌಡರ ಮೇಲೆ ಗೌರವವಿದ್ದರೆ ದೇಶಕ್ಕೆ ವಾಪಸ್ ಬಂದು ತನಿಖೆಗೆ ಸಹಕರಿಸು : ಪ್ರಜ್ವಲ್‍ಗೆ ಕುಮಾರಸ್ವಾಮಿ ಮನವಿ

ಬೆಂಗಳೂರು : ದೇವೇಗೌಡರು ತಮ್ಮ ಇಡೀ ರಾಜಕೀಯ ಬದುಕನ್ನು ಪ್ರಜ್ವಲ್ ಬೆಳೆಯಬೇಕು ಎಂದು ಧಾರೆ ಎರೆದಿದ್ದಾರೆ. ಪ್ರಜ್ವಲ್ ನೀನು ಎಲ್ಲೇ ಇದ್ದರೂ ಮುಂದಿನ 24 ಅಥವಾ 48 ಗಂಟೆಯೊಳಗೆ ದೇಶಕ್ಕೆ ವಾಪಸ್ ಬಂದು ತನಿಖೆಗೆ ಸಹಕರಿಸುವ ಮೂಲಕ ಪಕ್ಷದ ಕಾರ್ಯಕರ್ತರಿಗೆ ಮತ್ತು ಎಚ್.ಡಿ. ದೇವೇಗೌಡರಿಗೆ ಗೌರವ ತಂದುಕೊಡಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಸೋಮವಾರ ನಗರದ ಜೆ.ಪಿ.ಭವನದ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, "ಈ ನೆಲದ ಕಾನೂನಿನ ಮುಂದೆ ಯಾರು ದೊಡ್ಡವರಲ್ಲ. ನನ್ನ ಕಾರ್ಯಕರ್ತರು ಪಕ್ಷವನ್ನು ಉಳಿಸಿ ಬೆಳೆಸಿದ್ದಾರೆ. ಅವರ ದುಡಿಮೆಯಿಂದ ನಾವು ನಿಮ್ಮ ಮುಂದೆ ಕೂತು ಮಾತನಾಡುತ್ತಿದ್ದೇವೆ. ಈ ನಾಡಿನ ಲಕ್ಷಾಂತರ ಜನರ ಆಶೀರ್ವಾದದಿಂದ ಇಲ್ಲಿಯವರೆಗೆ ಬೆಳೆದಿದ್ದೇವೆ. ದೇಶಕ್ಕೆ ವಾಪಸ್ ಬಂದು ತನಿಖೆಗೆ ಸಹಕಾರ ಕೊಡಬೇಕು ಎಂದು ಪ್ರಜ್ವಲ್ ರೇವಣ್ಣಗೆ ಕೈ ಜೋಡಿಸಿ ಮಾಧ್ಯಮಗಳ ಮೂಲಕ ಮನವಿ ಮಾಡುತ್ತೇನೆ ಎಂದರು.

ಇನ್ನೆಷ್ಟು ದಿನ ಕಳ್ಳ ಪೊಲೀಸ್ ಆಟ. ಅವಶ್ಯಕತೆ ಇದೆಯಾ?, ನಾನು ನನ್ನ ತಂದೆಯವರ ಮೂಲಕ ಮನವಿ ಮಾಡಿಸಬೇಕು ಅಂದುಕೊಂಡಿದ್ದೆ, ಆದರೆ, ತಡೆಯಲಾರದೇ ನಾನೇ ಮಾಧ್ಯಮಗಳ ಮುಂದೆ ಮನವಿ ಮಾಡುತ್ತಿದ್ದೇನೆ. ರೇವಣ್ಣ ಬೇಲ್ ಮೇಲೆ ಹೊರ ಬಂದ ಮೇಲೆ ಎರಡು ಸಲ ಭೇಟಿ ಮಾಡಿದ್ದೀನಿ. ಪ್ರಜ್ವಲ್ ಎಲ್ಲೇ ಇದ್ದರೂ ಕರೆಸು ಅಂತ ನಾನು ರೇವಣ್ಣಗೂ ಹೇಳಿದ್ದೀನಿ ಎಂದು ಅವರು ಹೇಳಿದರು.

ಪದ್ಮನಾಭನಗರಕ್ಕೆ ನಾನು ಪ್ರಜ್ವಲ್‍ನನ್ನು ಬಿಡಿಸಲು ತಂದೆ ಜೊತೆ ಮಾತನಾಡಲು ಹೋಗಿಲ್ಲ. ತಂದೆ-ತಾಯಿ ಅವರ ಆರೋಗ್ಯ ವಿಚಾರಿಸಲು ಮತ್ತು ಧೈರ್ಯ ಹೇಳಲು ಹೋಗುತ್ತೇನೆ. ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವು ಎಲ್ಲರೂ ತಲೆತಗ್ಗಿಸುವ ಪ್ರಕರಣವಾಗಿದೆ. ಹಾಗಾಗಿ ನಾನು ಸಾರ್ವಜನಿಕವಾಗಿ ಮತ್ತೊಮ್ಮೆ ಕ್ಷಮೆ ಕೋರುತ್ತೇನೆ. ಎಲ್ಲರೂ ಅಸಹ್ಯ ಪಡುವ ಪ್ರಕರಣ ಇದಾಗಿದೆ. ಆದರೆ, ಈ ಪ್ರಕರಣದಲ್ಲಿ ಕಿಂಚಿತ್ತೂ ಪಾಲೇ ಇಲ್ಲದ ನನ್ನ ಹಾಗೂ ದೇವೇಗೌಡರನ್ನು ತಾಳೆ ಹಾಕಿದ್ದಾರೆ ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

‘ಪ್ರಜ್ವಲ್ ಮೇಲೆ ಆರೋಪ ಕೇಳಿಬಂದ ಕೂಡಲೇ ಬಹಳಷ್ಟು ನೊಂದಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ರಾಜ್ಯಸಭೆ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಕೊಡಲು ಮುಂದಾಗಿದ್ದರು. ರಾಜ್ಯದ ಹಿತಕ್ಕಾಗಿ ನೀವು ರಾಜ್ಯಸಭೆಯಲ್ಲಿ ಇರಬೇಕು ಎಂದು ಅವರ ಮನವೊಲಿಸಿದ್ದೇನೆ. ಈ ಘಟನೆಯಿಂದ ನಮ್ಮ ತಂದೆ ತುಂಬಾ ನೊಂದಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ, ಸಾ.ರಾ.ಮಹೇಶ್, ಜೆಡಿಎಸ್ ಬೆಂಗಳೂರು ನಗರ ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ ಉಪಸ್ಥಿರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X