Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮುಖ್ಯಮಂತ್ರಿ ಸಿದ್ದರಾಮಯ್ಯ ವಜಾಕ್ಕೆ...

ಮುಖ್ಯಮಂತ್ರಿ ಸಿದ್ದರಾಮಯ್ಯ ವಜಾಕ್ಕೆ ಕುಮಾರಸ್ವಾಮಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ28 Jan 2024 8:13 PM IST
share
ಮುಖ್ಯಮಂತ್ರಿ ಸಿದ್ದರಾಮಯ್ಯ ವಜಾಕ್ಕೆ ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ‘ಮಾತೆದ್ದಿದರೆ ಸಂವಿಧಾನ, ಪ್ರಜಾಪ್ರಭುತ್ವ, ವಕೀಲಿಕೆ ನಮ್ಮಪ್ಪನ ಮನೆ ಆಸ್ತಿ ಎಂದು ಜಾಗಟೆ ಹೊಡೆಯುವ ಸಿದ್ದರಾಮಯ್ಯನವರು ಮಾನ, ಮರ್ಯಾದೆ, ಮಹಿಳೆಯರ ಮೇಲೆ ಗೌರವ ಏನಾದರೂ ಇಟ್ಟುಕೊಂಡಿದ್ದರೆ, ಈ ಕ್ಷಣದಲ್ಲಿಯೇ ಸಿಎಂ ಕುರ್ಚಿಯನ್ನು ಖಾಲಿ ಮಾಡಬೇಕು’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ರವಿವಾರ ಎಕ್ಸ್ ನಲ್ಲಿ ಸರಣಿ ಪೋಸ್ಟ್ ಹಾಕಿರುವ ಅವರು, ‘ರಾಷ್ಟ್ರಪತಿಯವರು ದೇಶದ ಪ್ರಥಮ ಪ್ರಜೆ ಆಗಿರುವ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ (ಆ ಪದವನ್ನು ಬರೆಯಲಾರೆ) ಎಂದು ತುಚ್ಛವಾಗಿ ಸಂಬೋಧಿಸಿದ ಕೀಳು, ವಿಕೃತ, ಹೀನ ನಾಲಗೆಯ ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೂಡಲೇ ವಜಾ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.

‘ಡೋಂಗೀ ಪ್ರಜಾಪ್ರಭುತ್ವವಾದಿಯ ಅಸಲಿ ಮುಖ ಕಳಚಿಬಿದ್ದಿದೆ. ಒಂದು ಕ್ಷಣವೂ ಮುಖ್ಯಮಂತ್ರಿ ಪದವಿಯಲ್ಲಿ ಇರಲು ಅವರು ಅರ್ಹರಲ್ಲ. ಕೂಡಲೇ ತಾವೆಸಗಿರುವ ಅಪಚಾರಕ್ಕೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಅಥವಾ ರಾಜ್ಯಪಾಲರೇ ಅವರನ್ನು ಸಿಎಂ ಕುರ್ಚಿಯಿಂದ ಕಿತ್ತೆಸೆಯಬೇಕು’ ಎಂದು ಕುಮಾರಸ್ವಾಮಿ ಕೋರಿದ್ದಾರೆ.

‘ಆಚಾರವಿಲ್ಲದ ನಾಲಿಗೆ, ನಿನ್ನ ನೀಚಬುದ್ಧಿಯ ಬಿಡು ನಾಲಿಗೆ ಎಂದು ದಾಸರು ಹೇಳಿದ್ದಾರೆ. ಸಿದ್ದರಾಮಯ್ಯಗೆ ಆಚಾರ ಹತ್ತಿರಕ್ಕೂ ಸುಳಿಯದ ವಿಚಾರ. ಶೋಷಿತ ಬುಡಕಟ್ಟು ಸಮುದಾಯದಿಂದ ಬಂದ ದೇಶದ ಮೊತ್ತ ಮೊದಲ ರಾಷ್ಟ್ರಪತಿಗಳು, ಅದರಲ್ಲಿಯೂ ಮಹಿಳೆ. ಶೋಷಿತರ ಜಾಗೃತಿ ಸಮಾವೇಶದಲ್ಲೇ ಅವರಿಗೆ ಮುಖ್ಯಮಂತ್ರಿ ಅಪಮಾನ ಎಸಗಿದ್ದಾರೆ’ ಎಂದು ಅವರು ಟೀಕಿಸಿದ್ದಾರೆ.

‘ ಸ್ವಯಂಘೋಷಿತ ಸಂವಿಧಾನ ತಜ್ಞರಂತೆ. ನಾಚಿಕೆಯಾಗಬೇಕು ಇವರಿಗೆ. ಸಾರ್ವಜನಿಕ ವೇದಿಕೆಯಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ಮುಖ್ಯಮಂತ್ರಿಯೊಬ್ಬರು ಸಂಬೋಧಿಸುವ ರೀತಿಯೇ ಇದು. ಸಿದ್ದರಾಮಯ್ಯನವರ ನಡವಳಿಕೆ ಕರ್ನಾಟಕಕ್ಕೆ ಅಂಟಿದ ಅಳಿಸಲಾಗದ ಕಳಂಕ. ಅವರ ಈ ಕೀಳುಮಾತು ದೇಶಕ್ಕೆ, ಸಂವಿಧಾನಕ್ಕೆ ಆಗಿರುವ ಘೋರ ಅಪಚಾರ’ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

‘ನಿನ್ನೆಯ ದಿನ ಚಾಮರಾಜನಗರದಲ್ಲಿ ಇದೇ ಸಿದ್ದರಾಮಯ್ಯನವರ ಸುಪುತ್ರ ಯತೀಂದ್ರ ಭಾಷಣ ಮಾಡುತ್ತಿದ್ದಾಗ ಯಾರೋ ಒಬ್ಬರು ಏಕವಚನದಲ್ಲಿ ಪ್ರಶ್ನಿಸಿದರೆಂಬ ಕಾರಣಕ್ಕೆ ಪೊಲೀಸರು ಆತನನ್ನು ಅಟ್ಟಾಡಿಸಿಕೊಂಡು ಹೋಗಿ ಬಂಧಿಸಿ ದರದರನೇ ಎಳೆದುಕೊಂಡು ಹೋದರು. ಹಾಗಿದ್ದರೆ, ರಾಷ್ಟ್ರಪತಿಗಳನ್ನೇ ಏಕವಚನದಲ್ಲಿ ಸಂಬೋಧಿಸಿದ ಈ ಮುಖ್ಯಮಂತ್ರಿಗೇನು ಶಿಕ್ಷೆ?’ ಎಂದು ಅವರು ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X