Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಆರೋಗ್ಯಕರ ಸಮಾಜವನ್ನು ರೂಪಿಸುವುದರಲ್ಲಿ...

ಆರೋಗ್ಯಕರ ಸಮಾಜವನ್ನು ರೂಪಿಸುವುದರಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು : ಕೆ.ವಿ.ಪ್ರಭಾಕರ್

ವಾರ್ತಾಭಾರತಿವಾರ್ತಾಭಾರತಿ1 May 2025 8:15 PM IST
share
ಆರೋಗ್ಯಕರ ಸಮಾಜವನ್ನು ರೂಪಿಸುವುದರಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು : ಕೆ.ವಿ.ಪ್ರಭಾಕರ್

ಬೆಂಗಳೂರು : ಶಿಕ್ಷಕರು ಅಂದರೆ ಮಕ್ಕಳಲ್ಲಿ ಮತ್ತು ಮಕ್ಕಳ ಮೂಲಕ ಸಮಾಜದಲ್ಲಿ ಸಹೃದಯತೆ-ಸಮನ್ವಯತೆ-ಸಹಿಷ್ಣುತೆ-ಸದಾಚಾರ-ಸದ್ವಿಚಾರ-ಸಹಬಾಳ್ವೆ-ಸದಭಿರುಚಿಯನ್ನು ರೂಪಿಸುವ ಸಾಮಾಜಿಕ ರಾಯಭಾರಿಗಳು. ಇವರನ್ನು ವಂಧಿಸುವುದು ಉತ್ತಮ‌ ಸಂಸ್ಕಾರ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.

ಮೀಡಿಯಾ ಕನೆಕ್ಟ್ ಮತ್ತು ಪುಣ್ಯ ಫೌಂಡೇಷನ್ ವಿಧ್ಯಾಭವನದಲ್ಲಿ ಆಯೋಜಿಸಿದ್ದ ಗುರುವಂಧನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ತುಮಕೂರಿನ ಇಡಗೂರು ಸರ್ಕಾರಿ ಶಾಲೆಯ ಶಿಕ್ಷಕರು ಸಮಾಜಮುಖಿಯಾದ ಪ್ರಜೆಗಳನ್ನು ಸೃಷ್ಟಿಸಿ ಸಮಾಜಕ್ಕೆ ಒಪ್ಪಿಸಿದ್ದಾರೆ ಎನ್ನುವುದಕ್ಕೆ ಈ ಗುರುವಂಧನಾ ಕಾರ್ಯಕ್ರಮವೇ ಸಾಕ್ಷಿ. 25 ವರ್ಷಗಳ ಹಿಂದೆ ನಿಮ್ಮಿಂದ ತಿದ್ದಿ ಬೆಳೆದ ವಿದ್ಯಾರ್ಥಿಗಳು ತಮ್ಮ ಶಿಕ್ಷಕರನ್ನು ವಂಧಿಸುವ ಮೂಲಕ ತಮ್ಮ ಸಂಸ್ಕಾರವನ್ನು ತೋರಿಸುತ್ತಿದ್ದಾರೆ. ರೈತರು-ಶಿಕ್ಷಕರು-ಸೈನಿಕರು ಆರೋಗ್ಯಕರ ಮತ್ತು ನೆಮ್ಮದಿಯ ಸಮಾಜದ ಸೇನಾನಿಗಳು ಎಂದು ನಮ್ಮ ಮುಖ್ಯಮಂತ್ರಿಗಳು ಯಾವಾಗಲೂ ಹೇಳ್ತಾ ಇರ್ತಾರೆ. ಇದು ಅಕ್ಷರಶಃ ನಿಜ. ಇದಕ್ಕೆ ಸರ್ವಾಧಿಕಾರಿ ಹಿಟ್ಲರ್ ನ ಒಂದು ಪ್ರಸಂಗ ನೆನಪಿಸುತ್ತೇನೆ.

ಯುದ್ಧದಾಹಿಯಾಗಿದ್ದ ಹಿಟ್ಲರ್ ಯಾವುದೇ ಪ್ರದೇಶವನ್ನು, ದೇಶವನ್ನು ವಶಪಡಿಸಿಕೊಂಡಾಗ ಮೊದಲಿಗೆ ಆ ಪ್ರದೇಶದಲ್ಲಿರುವ ಶಿಕ್ಷಕರನ್ನು ಬಂಧಿಸಲು ತನ್ನ ಸೈನಕ್ಕೆ ಸೂಚಿಸುತ್ತಿದ್ದ. ಏಕೆಂದರೆ, ಶಿಕ್ಷಕರು ಸಮಾಜವನ್ನು ಬೇಗ ಪ್ರಭಾವಿಸುತ್ತಾರೆ, ತಮ್ಮ ಪ್ರಭಾವದಿಂದ ಹೋರಾಟಗಳನ್ನು ರೂಪಿಸುತ್ತಾರೆ ಎನ್ನುವ ತಿಳಿವಳಿಕೆ ಮತ್ತು ಭಯ ಎರಡೂ ಹಿಟ್ಲರ್ ಗೆ ಇತ್ತು ಎಂದರು.

ಭಾರತದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲೂ ಮಹಾತ್ಮಗಾಂಧಿಯವರ ವಿಚಾರಗಳಿಗೆ ಮೊದಲು ಪ್ರಭಾವಿತರಾಗಿ ಸ್ವಾತಂತ್ರ್ಯ ಸಂಗ್ರಾಮಕ್ಕೆ ದುಮುಕಿದವರು ಶಾಲಾ ಶಿಕ್ಷಕರೇ. ಇದಕ್ಕೆ ಮತ್ತೊಂದು ಉದಾಹರಣೆ ಹೇಳ್ತೇನೆ.

ಸಮಾಜವಾದಿ ಹೋರಾಟಗಾರರಾದ ಶಾಂತವೇರಿ ಗೋಪಾಲಗೌಡರು ತಮ್ಮ ಚಿಂತನೆಗಳನ್ನು, ಹೋರಾಟದ ವಿಷಯಗಳನ್ನು ಜನರಿಗೆ ಹೇಳುವ ಮೊದಲು ಶಾಲೆಗಳಿಗೆ ಹೋಗಿ ಶಿಕ್ಷಕರು ಮತ್ತು ಮಕ್ಕಳಿಗೆ ಹೇಳುತ್ತಿದ್ದರು. ಶಿಕ್ಷಕರು ಮತ್ತು ಮಕ್ಕಳು ಒಟ್ಟಾಗಿ ಪೋಷಕರಿಗೆ ವಿಷಯ ಮುಟ್ಟಿಸುತ್ತಿದ್ದರು. ಹೀಗಾಗಿ ಆರೋಗ್ಯಕರ ಸಮಾಜವನ್ನು ರೂಪಿಸುವುದರಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು ಎಂದರು.

ಈಗ ತಂತ್ರಜ್ಞಾನದ ಕಾರಣಕ್ಕೆ ಸಮಾಜ ಅತ್ಯಂತ ವೇಗವಾಗಿ ಬೆಳೆಯುತ್ತಿದೆ, ಬದಲಾಗುತ್ತಾ ಶಿಕ್ಷಣದ ಅಗತ್ಯ ಮತ್ತು ಮಹತ್ವ ಕೂಡ ಬದಲಾಗುತ್ತಿದೆ. ಕಾರ್ಪೋರೇಟ್ ಜಗತ್ತಿನ ಮಾರುಕಟ್ಟೆಗೆ ಬೇಕಾದ "ಮಾಲು" ಗಳನ್ನು ಮಾತ್ರ ಸೃಷ್ಟಿಸುವ ಒತ್ತಡವನ್ನು ಹೇರಲಾಗುತ್ತಿದೆ. ಈ ಸವಾಲನ್ನು ನಾವೆಲ್ಲರೂ ಅತ್ಯಂತ ಸಮನ್ವಯದಿಂದ ಎದುರಿಸಬೇಕಿದೆ ಎಂದು ಹೇಳಿದರು.

ಈಗ ನಮ್ಮ ಸರ್ಕಾರ ಒಂದು ಹೊಸ ಕಾರ್ಯಕ್ರಮ‌ ರೂಪಿಸಿದೆ. "ನನ್ನ‌ ಶಾಲೆ ನನ್ನ ಜವಾಬ್ದಾರಿ" ಎನ್ನುವ ಕಾರ್ಯಕ್ರಮ. ಸರ್ಕಾರಿ ಶಾಲೆಗಳಲ್ಲಿ‌ ಓದಿದ ಲಕ್ಷಾಂತರ ಮಂದಿ ತಾವು ಓದಿದ ಶಾಲೆಗಳಿಗೆ ತಮ್ಮ ಕೈಲಾದ ನೆರವು ನೀಡುತ್ತಿದ್ದಾರೆ. ಹಲವರು ತಾವು ಓದಿದ ಶಾಲೆಗಳನ್ನು ದತ್ತು ಕೂಡ ಪಡೆದಿದ್ದಾರೆ. ಕೆಲವರು ಕೊಠಡಿಗಳನ್ನು ಕಟ್ಟಿಸಿಕೊಟ್ಟಿದ್ದಾರೆ. ಇಂಥಾ ಕಾಳಜಿಗಳು ಹೆಚ್ಚೆಚ್ಚು ವ್ಯಕ್ತ ಆಗುವುದು ಸರ್ಕಾರಿ ಶಾಲೆಗಳಲ್ಲಿ‌ ಓದಿದವರಿಂದಲೇ. ನಾನು ಕೂಡ ಕೋಲಾರದಲ್ಲಿ ಓದಿದ್ದು‌ ಸರ್ಕಾರಿ ಶಾಲೆಯಲ್ಲೇ. ಈಗ ಆ ಶಾಲೆಗೆ ಅಪಾರ ನೆರವು ಒದಗಿಸಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ತಾವು ಓದಿದ ಶಾಲೆಗೆ ನೆರವು ನೀಡಿದ್ದಾರೆ ಎಂದು ಹೇಳಿದರು.

ಈ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸುವ ಮೂಲಕ ನನ್ನ‌ ಶಾಲೆ ಮತ್ತು ಶಿಕ್ಷಕರುಗಳನ್ನು ಸ್ಮರಿಸಲು, ವಂಧಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಮೀಡಿಯಾ ಕನೆಕ್ಟ್ ನ ದಿವ್ಯಾ ರಂಗೇನಹಳ್ಳಿ ಮತ್ತು ಪುಣ್ಯ ಫೌಂಡೇಷನ್ ಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.

ಆದಿಚುಂಚನಗಿರಿ ಮಹಾ ಸಂಸ್ಥಾನದ ಜಗದ್ಗುರು ನಿರ್ಮಲಾನಂದ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಸತಿ ಸಚಿವರ ಮಾಧ್ಯಮ ಸಂಯೋಜನ ಲಕ್ಷ್ಮೀನಾರಾಯಣ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X