Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಸವಣ್ಣನ ತತ್ವ ಆದರ್ಶಗಳು ಆಚರಣೆಗೆ...

ಬಸವಣ್ಣನ ತತ್ವ ಆದರ್ಶಗಳು ಆಚರಣೆಗೆ ಸೀಮಿತವಾಗಬಾರದು : ಲಕ್ಷ್ಮೀ ಹೆಬ್ಬಾಳ್ಕರ್

ವಾರ್ತಾಭಾರತಿವಾರ್ತಾಭಾರತಿ30 April 2025 8:09 PM IST
share
ಬಸವಣ್ಣನ ತತ್ವ ಆದರ್ಶಗಳು ಆಚರಣೆಗೆ ಸೀಮಿತವಾಗಬಾರದು : ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ : ಜಗತ್ತಿನ ಶ್ರೇಷ್ಠ ದಾರ್ಶನಿಕ ಬಸವಣ್ಣನವರ ತತ್ವ ಆದರ್ಶಗಳು ಕೇವಲ ಆಚರಣೆಗೆ ಸೀಮಿತವಾಗದೆ, ನಾವೆಲ್ಲರೂ ಅನುಕರಣೆ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಬುಧವಾರ ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಶ್ರೀ ಬಸವೇಶ್ವರ ಉದ್ಯಾನವನದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಸವಣ್ಣ. ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾದರಿ ಎಂದರು.

ಜಾತಿ ರಹಿತ ಸಮಾಜವನ್ನು ಬಯಸಿದ ವ್ಯಕ್ತಿ, ಮೇಲು ಕೀಳು ಎಲ್ಲವನ್ನು ಕಿತ್ತೊಗೆದು, ಸಾಮಾಜಿಕ ಪರಿಕಲ್ಪನೆಯನ್ನು ಇಟ್ಟುಕೊಂಡ ವ್ಯಕ್ತಿ. ಆದರೆ, ನಾವಿಂದು ಬಸವಣ್ಣನವರು ಹಾಕಿಕೊಟ್ಟ ಮಾರ್ಗದಲ್ಲಿ ಹೋಗುವ ಬದಲಿಗೆ ಜಾತಿ ಜಾತಿ ಎಂದು ಜಾತಿ ಹಿಂದೆ ಬಿದ್ದಿದ್ದೇವೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ನಮ್ಮ ಸರಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ. ಇಂದು ಧರ್ಮ-ಧರ್ಮ ಹಾಗೂ ಜಾತಿ-ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಸಂದರ್ಭದಲ್ಲಿ ಬಸವಣ್ಣನ ವಿಚಾರಧಾರೆಯಿಂದ ಇಂತವುಗಳನ್ನು ತಡೆಯಲು ಸಾಧ್ಯ. ಜಾತಿ, ಮತ, ಲಿಂಗಗಳ ಭೇದವನ್ನು ತಿರಸ್ಕರಿಸಿದ ಬಸವಣ್ಣನವರು ಸಾಮಾಜಿಕ ಕ್ರಾಂತಿಗೆ ಕಾರಣವಾದರು ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಬಸವಾದಿ ಶರಣರು ಸಮಾಜವನ್ನು ಸುಧಾರಣೆ ಮಾಡುವ ಸಲುವಾಗಿ ಜೀವನವನ್ನೇ ಮುಡಿಪಾಗಿಟ್ಟರು. ಆದರೆ, ಇಂದು ಸ್ವಾರ್ಥ, ಸುಳ್ಳು, ಮೋಸ ಮಾಡುವಂತ ಪ್ರತಿವೃತ್ತಿಯೇ ಜಾಸ್ತಿಯಾಗುತ್ತಿದೆ. ಎಂದೆಂದಿಗೂ ಶಾಶ್ವತವಾಗಿ ಉಳಿಯುವಂತಹ ಸಮಾನತೆ, ನ್ಯಾಯ ಮತ್ತು ಮಾನವೀಯ ಮೌಲ್ಯಗಳನ್ನು 12ನೇ ಶತಮಾನದಲ್ಲೇ ಸಾರಿದ ಮಹಾನ್ ವ್ಯಕ್ತಿ ಬಸವೇಶ್ವರರು ಎಂದು ಅವರು ತಿಳಿಸಿದರು.

ರಾಜಕಾರಣದಲ್ಲಿ ಸೋಲೋದು ಗೆಲ್ಲೋದು ಸಾಮಾನ್ಯ, ಬಸವಣ್ಣನ ತತ್ವ ಆದರ್ಶಗಳನ್ನು ಪಾಲಿಸುವಂತೆಯೇ ನಾನು ನನ್ನ ಮಗ ಮೃಣಾಲ್ ಹೆಬ್ಬಾಳ್ಕರ್‍ಗೆ ಹೇಳಿಕೊಟ್ಟಿದ್ದೇನೆ. ಬಸವಾದಿ ಶರಣರು ಹಾಕಿಕೊಟ್ಟ ಮಾರ್ಗದಲ್ಲಿ ಎಲ್ಲರೂ ನಡೆಯೋಣ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಈ ವೇಳೆ ಮುಖಂಡರಾದ ರತ್ನಪ್ರಭಾ ಬೆಲ್ಲದ, ಬಸವರಾಜ ಜಗಜಂಪಿ, ಡಾ.ಎಚ್.ಬಿ.ರಾಜಶೇಖರ್, ವಿಜಯಕುಮಾರ ಹೊನಕೇರಿ, ಆರ್.ಪಿ.ಪಾಟೀಲ್, ಮುರಘೇಂದ್ರಗೌಡ ಪಾಟೀಲ್, ಮೃಣಾಲ್ ಹೆಬ್ಬಾಳ್ಕರ್, ವಿದ್ಯಾವತಿ ಭಜಂತ್ರಿ, ಅನಂತ ಬ್ಯಾಕೊಡ್, ಉದಯಕುಮಾರ್ ತಳವಾರ, ಸೋಮಲಿಂಗ ಮಾವಿನಕಟ್ಟಿ, ಮಲಗೌಡ ಪಾಟೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X