Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಭೂಮಿಯನ್ನು ಕೃಷಿಯೇತರ ಚಟುವಟಿಕೆಗೆ...

ಭೂಮಿಯನ್ನು ಕೃಷಿಯೇತರ ಚಟುವಟಿಕೆಗೆ ಬಳಸಲಾಗುತ್ತಿದೆ : ಪ್ರೊ.ಎಸ್.ಜಿ.ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ21 March 2025 11:27 PM IST
share
Photo of Program

ಬೆಂಗಳೂರು : ಚನ್ನರಾಯಪಟ್ಟಣವೂ ಒಳಗೊಂಡಂತೆ ದೇವನಹಳ್ಳಿ ಸುತ್ತಲಿನ 13 ಹಳ್ಳಿಗಳಲ್ಲಿ ಒಕ್ಕಲೆಬ್ಬಿಸುವ ಸ್ಥಿತಿಯಲ್ಲಿವೆ. ಫಲವತ್ತಾದ ಭೂಮಿಯನ್ನು ಸರಕಾರಗಳು ಕೃಷಿಯೇತರ ಚಟುವಟಿಕೆಗೆ ಬಳಸಲಾಗುತ್ತಿದ್ದು, ನೀವೂ, ನಾವೂ ಏನನ್ನು ತಿನ್ನಬೇಕು ಎಂದು ಹಿರಿಯ ಸಾಹಿತಿ ಪ್ರೊ.ಎಸ್.ಜಿ. ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಶುಕ್ರವಾರ ನಗರದ ಗಾಂಧಿ ಭವನದಲ್ಲಿ ದಲಿತ ಸಾಹಿತ್ಯ ಪರಿಷತ್, ದಸಂಸ, ಕೆ.ಎನ್.ಎಸ್ ಪಬ್ಲಿಕೇಶನ್ಸ್ ಸಹಯೋಗದೊಂದಿಗೆ ಆಯೋಜಿಸಿದ್ದ ಡಾ.ಹೆಬ್ಬಾಲೆ ಕೆ.ನಾಗೇಶ್ ಅವರ 5 ಕೃತಿಗಳ ಲೋಕಾಪರ್ಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗ ತುರ್ತಾಗಿ ನಡೆಯಬೇಕಿರುವುದು ಭೂಮಿ ಚಳವಳಿ. 70-80ರ ದಶಕದಲ್ಲಿ ರಾಜ್ಯಾದ್ಯಂತ ನೂರಾರು ಚಳವಳಿಗಳು ಹುಟ್ಟಿದವು. ಸರಕಾರಗಳನ್ನು ಸರಿದಾರಿಗೆ ತರುವ ಪ್ರಯತ್ನ ಮಾಡಿದ್ದವು. ಮಾದ್ಯಮಗಳು ಕೂಡ ಚಳವಳಿಗೆ ಸಹಕರಿಸುತ್ತಿದ್ದವು. ಸರಕಾರಗಳಿಗೂ ಕೂಡ ನೈತಿಕ ಭಯ ಕಾಡುತ್ತಿತ್ತು ಎಂದು ಅಭಿಪ್ರಾಯಪಟ್ಟರು.

ರಾಜಕೀಯ ಸ್ವಾತಂತ್ರ್ಯಕ್ಕಾಗಿ ಗಾಂಧೀಜಿ ಹೋರಾಟ ಮಾಡಿದರೆ, ಸಾಂಸ್ಕೃತಿಕ ಸ್ವಾತಂತ್ರ್ಯಕ್ಕಾಗಿ ಅಂಬೇಡ್ಕರ್ ಅವರು ಹೋರಾಟ ಮಾಡಿದ್ದಾರೆ. ಇಡೀ ದೇಶದ ತಳ ಸಮುದಾಯಗಳು ಸಾಂಸ್ಕೃತಿಕ ದಾಸ್ಯದಿಂದ ನರಳತಾ ಇದ್ದವು. ಯಾಕೆಂದರೆ ಚಿರಿತ್ರೆ ಪುರಾಣಗಳಿಂದ ಊಳಿಗಮಾನ್ಯ ಪದ್ಧತಿ ಜೀತದಾಳಿನಂತೆ ನಂಬಿಸಲಾಗಿದೆ ಎಂದರು.

ಶಿಕ್ಷಣ ವಂಚಿತ ಸಮುದಾಯಗಳೆಲ್ಲವೂ ಕರ್ಮ ಸಿದ್ಧಾಂತದ ದವಡೆಗೆ ಸಿಕ್ಕು ನಲುಗಿ ಹೋಗಿದ್ದವು. ಇಂದಿಗೂ ಚಾತುರ್ವರ್ಣ ವ್ಯವಸ್ಥೆಯ ಶ್ರೇಣಿಕೃತ ಸಮಾಜದ ಮನಸ್ಥಿತ ದೂರವಾಗಿಲ್ಲ. ಅಂಬೇಡ್ಕರ್ ಅವರು ಧ್ವನಿ ಎತ್ತಿದ್ದು, ಸಾಂಸ್ಕೃತಿಕ ಬಿಡುಗಡೆಗಾಗಿ ಮೂಲಭೂತವಾಗಿ ಸಿಗಬೇಕಿರುವ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು ಎಂದು ತಿಳಿಸಿದರು.

ಇದೇ ವೇಳೆ ಡಾ. ಹೆಬ್ಬಾಲೆ ಕೆ.ನಾಗೇಶ್ ಅವರ ಬದುಕು ಬರಹ, ಅಗ್ರಾರ-ನಾಟಕ, ಅಗ್ರಾರ-ಕಾದಂಬರಿ, ಅಂಬಲಿ, ದಲಿತರು ಮತ್ತು ಅನುಭಾವ ಕಥನ, ಅವರೊಳಗಿನ ಲೋಕ ಕೃತಿಗಳನ್ನು ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ದಸಂಸ ಪ್ರದಾನ ಸಂಚಾಲಕ ಮಾವಳ್ಳಿ ಶಂಕರ್, ಹಿರಿಯ ಪತ್ರಕರ್ತ ಡಾ.ಸಿದ್ದನಗೌಡ ಪಾಟೀಲ್, ಕವಿ ಸುಬ್ಬು ಹೊಲೆಯಾರ್, ಸಾಹಿತಿ ಎಚ್.ಲಕ್ಷ್ಮೀ ನಾರಾಯಣ ಸ್ವಾಮಿ, ದಲಿತ ಸಾಹಿತ್ಯ ಪರಿಷತ್‍ನ ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಗೌಡಗೆರೆ ಮಾಯುಶ್ರೀ ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X