‘ಕಾನೂನು ಮತ್ತು ನೀತಿ-2023’: ಸಂಪುಟ ಉಪ ಸಮಿತಿ ರಚನೆ

ಬೆಂಗಳೂರು: ಕಾನೂನು ಮತ್ತು ನೀತಿ-2023 ಕರಡು ಪ್ರಸ್ತಾವನೆ ಕುರಿತು ಪರಾಮರ್ಶಿಸಲು ಸಚಿವ ಸಂಪುಟಕ್ಕೆ ಸೂಕ್ತ ಶಿಫಾರಸುಗಳನ್ನು ಮಾಡಲು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಲಾಗಿದೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಇಂಧನ ಸಚಿವ ಕೆ.ಜೆ.ಜಾರ್ಜ್ ಹಾಗೂ ಸಹಕಾರ ಸಚಿವ ಕ್ಯಾತ್ಸಂದ್ರ ಎನ್.ರಾಜಣ್ಣ ಅವರನ್ನು ಸಚಿವ ಸಂಪುಟ ಉಪ ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ.
Next Story





