Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಬಸವ ಮಂಟಪ' ಪುಸ್ತಕದ ಹಿಂದಿರುವವರ...

‘ಬಸವ ಮಂಟಪ' ಪುಸ್ತಕದ ಹಿಂದಿರುವವರ ವಿರುದ್ಧವೂ ಕಾನೂನು ಕ್ರಮ: ಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ20 Nov 2026 3:06 PM IST
share
‘ಬಸವ ಮಂಟಪ ಪುಸ್ತಕದ ಹಿಂದಿರುವವರ ವಿರುದ್ಧವೂ ಕಾನೂನು ಕ್ರಮ: ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು, ನ.20: "ಬಸವಣ್ಣನವರಿಗೆ ಅಪಮಾನ ಮಾಡಿರುವ ‘ಬಸವ ಮಂಟಪ' ಪುಸ್ತಕದ ಹಿನ್ನೆಲೆಯಲ್ಲಿ ಯಾರೇ ಇದ್ದರೂ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈಗಾಗಲೇ ಪುಸ್ತಕದ ಪ್ರತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಮಾರ್ಗದರ್ಶನ ನೀಡಲಾಗಿದೆ" ಎಂದು ಮುಖ್ಯಮಂತ್ರಿ ಡಿ.ಕೆಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಶುಕ್ರವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, "ಬಸವಣ್ಣನವರಿಗೆ ಅಪಮಾನವಾಗಿರುವುದು ಕರ್ನಾಟಕಕ್ಕೆ ದೊಡ್ಡ ಅಗೌರವದ ಸಂಗತಿ. ಬಸವಣ್ಣರನ್ನು ನಾವು ಸಾಂಸ್ಕೃತಿಕ ನಾಯಕರೆಂದು ಗೌರವಿಸುತ್ತೇವೆ. ಅವರ ಆಚಾರ-ವಿಚಾರ ಹಾಗೂ ತತ್ವಾದರ್ಶಗಳನ್ನು ನಮ್ಮ ಸರಕಾರ ಅಳವಡಿಸಿಕೊಳ್ಳುತ್ತಿದೆ. ಬಸವಣ್ಣನವರ ಹೆಜ್ಜೆ ಗುರುತುಗಳು ಇಡೀ ದೇಶಕ್ಕೆ ಮಾದರಿಯಾಗಿವೆ" ಎಂದರು.

ದಿಲ್ಲಿಯಲ್ಲೂ ಬಸವಣ್ಣನವರ ಪ್ರತಿಮೆ ಸ್ಥಾಪಿಸಲಾಗಿದೆ. ರಾಜ್ಯದ ಪ್ರತಿಯೊಂದು ಊರು, ಮನೆ, ಶಾಲೆ ಹಾಗೂ ಕಚೇರಿಗಳಲ್ಲಿ ಅವರ ವಿಚಾರಗಳನ್ನು ತಲುಪಿಸುವ ಕೆಲಸ ಮಾಡಲಾಗುತ್ತಿದೆ. ಸರಕಾರಿ ಕಚೇರಿಗಳಲ್ಲಿ ಅವರ ಭಾವಚಿತ್ರ ಅಳವಡಿಸಿ, ಅವರ ಆಚಾರ-ವಿಚಾರಗಳಿಗೆ ಅನುಗುಣವಾಗಿ ಸರ್ಕಾರ ಮುನ್ನಡೆಯುತ್ತಿದೆ" ಎಂದು ಹೇಳಿದರು.

"ಜಾತಿ ವಿಚಾರವಾಗಿ ಸಮಾಜದಲ್ಲಿ ಪರಸ್ಪರ ವೈಷಮ್ಯ ಮೂಡಿಸುವ ಕೆಲಸವನ್ನು ಕೆಲವು ಮಾಧ್ಯಮ ಹಾಗೂ ಕಿಡಿಗೇಡಿಗಳು ಮಾಡುತ್ತಿದ್ದಾರೆ. ಈ ವಿಚಾರವನ್ನು ಸಚಿವ ಸಂಪುಟದಲ್ಲಿ ಗಂಭೀರವಾಗಿ ಚರ್ಚಿಸಲಾಗಿದೆ. ಸಚಿವರಾದ ಈಶ್ವರ್ ಖಂಡ್ರೆ, ಎಂ.ಬಿ. ಪಾಟೀಲ್, ಶಿವಾನಂದ ಪಾಟೀಲ್, ಬಸವರಾಜ ರಾಯರೆಡ್ಡಿ, ಯತೀಂದ್ರ ಸಿದ್ದರಾಮಯ್ಯ, ಕೆ.ಎಚ್. ಮುನಿಯಪ್ಪ ಸೇರಿದಂತೆ ಇಡೀ ಸಚಿವ ಸಂಪುಟವೇ ';ಬಸವ ಮಂಟಪ' ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳಲು ನಿರ್ಧರಿಸಿದೆ. ಬಸವ ಸಮಿತಿಯವರೂ ಈ ಸಂಬಂಧ ನನಗೆ ಪತ್ರ ಬರೆದಿದ್ದಾರೆ. ಈ ವಿಚಾರವಾಗಿ ಇನ್ನಷ್ಟು ಸುದೀರ್ಘ ಚರ್ಚೆ ನಡೆಸಬೇಕಿದೆ" ಎಂದರು.

"ಈ ವಿಚಾರವಾಗಿ ವಿವಿಧ ಪಕ್ಷಗಳ ಮುಖಂಡರೂ ತಮ್ಮೊಂದಿಗೆ ಮಾತನಾಡಿದ್ದಾರೆ. ರಾಜ್ಯದಲ್ಲಿ ಪ್ರತಿಭಟನೆಗಳು ನಡೆದು ಶಾಂತಿ ಭಂಗ ಉಂಟಾಗುವ ಸಾಧ್ಯತೆಗಳಿದ್ದ ಹಿನ್ನೆಲೆಯಲ್ಲಿ ಸರಕಾರ ತಕ್ಷಣವೇ ಕ್ರಮ ಕೈಗೊಳ್ಳುತ್ತಿದೆ" ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿಯೇ ಕುಡಿಯಲು ನೀರಿಲ್ಲದ ಪರಿಸ್ಥಿತಿ ಇದೆ

ಕಾವೇರಿ ನೀರಿನ ವಿಚಾರವಾಗಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿರುವ ಕುರಿತು ಕೇಳಿದಾಗ, "ರಾಜ್ಯದಲ್ಲಿ ನೀರಿದ್ದರೆ ಖಂಡಿತವಾಗಿಯೂ ತಮಿಳುನಾಡಿಗೆ ನೀರು ನೀಡುತ್ತೇವೆ. ಆದರೆ, ಪ್ರಸಕ್ತ ನಮ್ಮ ರಾಜ್ಯದಲ್ಲೇ ಕುಡಿಯಲು ನೀರಿಲ್ಲದ ಪರಿಸ್ಥಿತಿ ಇದೆ. ರಾಜ್ಯದ ಹಿತಾಸಕ್ತಿ ಹಾಗೂ ರೈತರನ್ನು ರಕ್ಷಿಸುವುದು ನಮ್ಮ ಜವಾಬ್ದಾರಿ" ಎಂದರು.

"ನಮ್ಮ ರೈತರಿಗೆ ಪರಿಸ್ಥಿತಿಯ ಗಂಭೀರತೆಯನ್ನು ತಿಳಿಸಿ ಎಚ್ಚರಿಕೆಯಿಂದ ಇರುವಂತೆ ಹೇಳಿದ್ದೇನೆ. ಈ ವರ್ಷ ಕಾವೇರಿಗೆ ಬಾಗಿನ ಅರ್ಪಿಸಲೂ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದಲ್ಲಿ ಎಷ್ಟು ನೀರಿದೆ ಎಂಬ ವಾಸ್ತವಾಂಶ ತಮಿಳುನಾಡಿನವರಿಗೂ, ನಮಗೂ ಹಾಗೂ ಇಡೀ ಜಗತ್ತಿಗೂ ಗೊತ್ತಿದೆ. ಸುಪ್ರೀಂ ಕೋರ್ಟ್ ನಲ್ಲಿ ತಮಿಳುನಾಡಿನ ಅರ್ಜಿ ವಜಾಗೊಂಡಿರುವುದು ವಾಸ್ತವಾಂಶವಾಗಿದೆ. ಈ ಸಂಬಂಧದ ನ್ಯಾಯಾಲಯದ ಆದೇಶದಲ್ಲಿರುವ ಅಂಶಗಳನ್ನು ನಮ್ಮ ಪಕ್ಷದ ಅಧ್ಯಕ್ಷರಿಗೂ ತಿಳಿಸುತ್ತಿದ್ದೇನೆ" ಎಂದು ಹೇಳಿದರು.

ಎಲ್ಲ ಪಕ್ಷದ ಶಾಸಕರಿಗೂ ಆಹ್ವಾನ ನೀಡಿದ್ದೆ

ಹಿರಿಯೂರು ಚುನಾವಣೆಯ ವಿಚಾರವಾಗಿ ಸಚಿವರೊಂದಿಗೆ ಸಭೆ ನಡೆಸಿದ್ದೀರಾ ಎಂದು ಕೇಳಿದಾಗ, "ಎಲ್ಲ ವಿಚಾರಗಳ ಬಗ್ಗೆಯೂ ಚರ್ಚೆ ನಡೆಸಿದ್ದೇವೆ. ಹೊಸ ಮನೆಗೆ 'ಗಂಗಾ'ಕ್ಕೆ ಬಂದ ಹಿನ್ನೆಲೆಯಲ್ಲಿ ಎಲ್ಲರಿಗೂ ಊಟಕ್ಕೆ ಆಹ್ವಾನ ನೀಡಿದ್ದೆ. ನಿನ್ನೆ ಎಲ್ಲರಿಗೂ ಆಹ್ವಾನ ನೀಡಲಾಗಿತ್ತು. ನಾನು ರಾಜ್ಯದ 224 ಶಾಸಕರಿಗೂ ಮುಖ್ಯಮಂತ್ರಿ. ಹೀಗಾಗಿ ಎಲ್ಲರನ್ನೂ ಆಹ್ವಾನಿಸಿದ್ದೆ" ಎಂದು ತಿಳಿಸಿದರು.

Tags

Legal Action'Basava Mantapa' BookCM D.K. ShivakumarRavi Hunj
share
ವಾರ್ತಾಭಾರತಿ
ವಾರ್ತಾಭಾರತಿ
Next Story
X