Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ವಿಧಾನಸಭೆ ಅಧಿವೇಶನ | ಗದ್ದಲದ ನಡುವೆ 3...

ವಿಧಾನಸಭೆ ಅಧಿವೇಶನ | ಗದ್ದಲದ ನಡುವೆ 3 ವಿಧೇಯಕಕ್ಕೆ ಅಂಗೀಕಾರ

ವಾರ್ತಾಭಾರತಿವಾರ್ತಾಭಾರತಿ20 Aug 2026 8:40 PM IST
share
ವಿಧಾನಸಭೆ ಅಧಿವೇಶನ | ಗದ್ದಲದ ನಡುವೆ 3 ವಿಧೇಯಕಕ್ಕೆ ಅಂಗೀಕಾರ

ಬೆಂಗಳೂರು : ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ವಿಪಕ್ಷ ಬಿಜೆಪಿ-ಜೆಡಿಎಸ್ ಸದಸ್ಯರು ನಡೆಸಿದ ಪ್ರತಿಭಟನೆ, ಗದ್ದಲ ನಡುವೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ತಿದ್ದುಪಡಿ ವಿಧೇಯಕ ಸೇರಿದಂತೆ ಮೂರು ವಿಧೇಯಕಗಳನ್ನು ವಿಧಾನಸಭೆಯಲ್ಲಿ ಅಂಗೀಕರಿಲಾಯಿತು.

ಗುರುವಾರ ಭೋಜನ ವಿರಾಮದ ಬಳಿಕ ವಿಧಾನಸಭೆಯಲ್ಲಿ ಸ್ಪೀಕರ್ ಜಿ.ಎಸ್.ಪಾಟೀಲ್ ಅವರು ಶಾಸನ ರಚನೆ ಪ್ರಕ್ರಿಯೆ ಕೈಗೆತ್ತಿಕೊಂಡರು. ಈ ವೇಳೆ ಬಿಜೆಪಿ-ಜೆಡಿಎಸ್ ಸದಸ್ಯರು ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಘೋಷಣೆಗಳನ್ನು ಕೂಗುತ್ತ ಪ್ರತಿಭಟನೆ ಮುಂದುವರೆಸಿದರು. ಆಗ ಗದ್ದಲದ ಮಧ್ಯೆ ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಭೈರೇಗೌಡ, 2026ನೆ ಸಾಲಿನ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಿದರು.

ಬಳಿಕ ವಿಧೇಯಕ ಕುರಿತು ವಿವರಣೆ ನೀಡಿದ ಸಚಿವರು, ಬಿಡಿಎ ಭೂ ಸ್ವಾಧೀನ ಮಾಡಿರುವ ಭೂಮಿಯಲ್ಲಿ ಅನೇಕ ಬಡಾವಣೆಗಳು ರಚನೆಯಾಗಿವೆ. ಅದರಲ್ಲಿ ಒಂದು ಲಕ್ಷಕ್ಕಿಂತ ಅಧಿಕ ಅನಧಿಕೃತ ಮನೆಗಳು ತಲೆಯತ್ತಿವೆ. ಅದನ್ನು ತೆರವು ಮಾಡಲು ಸಾಧ್ಯವಾಗುತ್ತಿಲ್ಲ. ಜತೆಗೆ, ಮನೆ ಮಾಲಕರಿಗೆ ತಮ್ಮ ಆಸ್ತಿಗಳಿಗೂ ದಾಖಲೆ ಮಾಡಲು ಆಗುತ್ತಿಲ್ಲ.

ಹೀಗಾಗಿ, ಅವರಿಗೆ ಶಾಶ್ವತ ದಾಖಲೆ ಮಾಡಿಕೊಡಲು ತಿದ್ದುಪಡಿ ತರಲಾಗುತ್ತಿದೆ. ಅದರಂತೆ ಮಾರ್ಗಸೂಚಿ ದರದ ಮೇಲೆ ಶೇ.50ರಷ್ಟು ದರ ಕಡಿಮೆ ಮಾಡಲು ತಿದ್ದುಪಡಿ ಮಾಡಲಾಗಿದೆ. ಆ ಮೂಲಕ ಅವರಿಗೆ ಪರಿಹಾರ ನೀಡಲು ಸರಕಾರ ಮುಂದಾಗಿದೆ. ಈ ತರ ಬೆಂಗಳೂರಲ್ಲಿ ಸುಮಾರು 1,11,560 ಅನಧಿಕೃತ ಮನೆಗಳು ಬಿಡಿಎ ಸ್ವಾಧೀನಪಡಿಸಿದ ಭೂಮಿಗಳಲ್ಲಿ ನಿರ್ಮಿಸಲಾಗಿದೆ ಎಂದರು.

ಇದರ ಜೊತೆಗೆ ಬಿಡಿಎ ಆಯುಕ್ತರಿಗೆ 5 ಕೋಟಿ ವರೆಗೆ ಕಾಮಗಾರಿಗಳಿಗೆ ಮಂಜೂರಾತಿ ನೀಡುವ ಅಧಿಕಾರ ನೀಡಲು ತಿದ್ದುಪಡಿ ತರಲಾಗಿದೆ. ಈ ಮುಂಚೆ 50 ಲಕ್ಷ ರೂ. ವರೆಗೆ ಮಂಜೂರಾತಿ ನೀಡುವ ಅಧಿಕಾರ ಇತ್ತು. ಪ್ರಾಧಿಕಾರದ ಪ್ಲಾಟುಗಳು, ವಿಲ್ಲಾಗಳು, ಬಡಾವಣೆಗಳ ದುರಸ್ತಿ ಮತ್ತು ನಿರ್ವಹಣೆಯಂತಹ ತ್ವರಿತ ಕಾಮಗಾರಿಗಳಿಗೆ ಅನುವಾಗುವಂತೆ ಮತ್ತು ವಿಳಂಬವನ್ನು ನೀಗಿಸಲು ಹಾಗೂ ಆಯವ್ಯಯ ಖರ್ಚುವೆಚ್ಚಗಳನ್ನು ಪರಿಗಣಿಸಿ ಪ್ರಾಧಿಕಾರದ ಆಯುಕ್ತರ ಆರ್ಥಿಕ ಮಂಜೂರಾತಿ ಮಿತಿಯನ್ನು ಹೆಚ್ಚಳ ಮಾಡಲಾಗಿದೆ ಎಂದು ಉಲ್ಲೇಖಿಸಿದರು.

ಈ ವಿಧೇಯಕದಲ್ಲಿ ಪ್ರಾಧಿಕಾರದ ಭೂಮಿಗಳಲ್ಲಿನ ಅನಧಿಕೃತ ಅಧಿಭೋಗದಾರರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ಅಧಿನಿಯಮ, 2026ರ ಪ್ರಾರಂಭದ ದಿನಾಂಕದಿಂದ ಎರಡು ವರ್ಷಗಳೊಳಗಾಗಿ ಈ ಪ್ರಕರಣದಡಿ ನಿವೇಶನದ ಹಂಚಿಕೆಯನ್ನು ಪಡೆಯದಿದ್ದಲ್ಲಿ ಪ್ರಾಧಿಕಾರ ಅಂತಹ ಅನಧಿಕೃತ ಅಧಿಭೋಗದಾರರನ್ನು ಹೊರಹಾಕಲು ಅವಕಾಶ ನೀಡಲಾಗಿದೆ ಎಂದೂ ಸಚಿವರು ತಿಳಿಸಿದರು.

ಇನ್ನೇರಡು ವಿಧೇಯಕ :

ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ವಿಧೇಯಕ 2026 ವಿಧಾನಸಭೆಯಲ್ಲಿ ಅಂಗೀಕರಿಲಾಯಿತು. 2005ರ ನಂತರದಲ್ಲಿ ಮತ್ತು ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ಅಧಿನಿಯಮ, 2015ರ ಕರ್ನಾಟಕ ಅಧಿನಿಯಮ ಪ್ರಾರಂಭದ ದಿನಾಂಕಕ್ಕೆ ಮೊದಲು ಅನುಮೋದನೆಗೊಂಡ ಬಡಾವಣೆಗಳ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಳ್ಳದಿರುವ ಕಡೆಗಳಲ್ಲಿ ಯೋಜನಾ ಪ್ರಾಧಿಕಾರ ಬಡಾವಣೆಯಲ್ಲಿನ ನಿವೇಶನಗಳ ಮಾರ್ಗಸೂಚಿ ಮೌಲ್ಯದ ಶೇಕಡಾ ಮೂರರಷ್ಟು (ಶೇ.3) ದಂಡವನ್ನು ವಿಧಿಸಿತ್ತು.

ದಂಡ ವಿಧಿಸಿದ ಬಳಿಕ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಿರುವುದಕ್ಕಾಗಿ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ಅಧಿನಿಯಮ, 2026ರ ಪ್ರಾರಂಭದ ದಿನಾಂಕದಿಂದ ಪ್ರತಿ ವಾರ್ಷಿಕ ಅವಧಿಗಾಗಿ ಯೋಜನಾ ಪ್ರಾಧಿಕಾರ ಬಿಡುಗಡೆಗೊಳಿಸಬೇಕಾದ ಅಂತಿಮ ಬಡಾವಣೆ ಅನುಮೋದನೆಯನ್ನು ಮಂಜೂರು ಮಾಡಲು ಮತ್ತು ಉಳಿಕೆ ನಿವೇಶನಗಳನ್ನು ಬಿಡುಗಡೆಗೊಳಿಸಲು ಈ ವಿಧೇಯಕ ಅನುವು ಮಾಡಿಕೊಡಲಿದೆ.

ಈ ವಿಧೇಯಕಯಡಿ ಅನುಮೋದಿತ ಬಡಾವಣೆಗಳಲ್ಲಿನ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸದಿರುವುದಕ್ಕಾಗಿ ಯೋಜನಾ ಪ್ರಾಧಿಕಾರಗಳು 2018ರಲ್ಲಿನ ಸರಕಾರಿ ನಿರ್ದೇಶನಗಳ ಮೂಲಕ ದಂಡವನ್ನು ವಿಧಿಸಿರುತ್ತವೆ. ಅದನ್ನು ಶಾಸನಾತ್ಮಕ ಉಪಬಂಧಗಳೊಳಗೆ ತರುವುದು ಹಾಗೂ ಈಗಾಗಲೇ ವಿಧಿಸಲಾದ ಅಥವಾ ಸಂಗ್ರಹಿಸಲಾದ ದಂಡವನ್ನು ಸಿಂಧುಗೊಳಿಸಲಾಗುವುದು.

ಈ ಮಸೂದೆ ಪ್ರಕಾರ ಈ ಹಿಂದೆ ವಿಧಿಸಲಾದ ದಂಡ, ಮೌಲ್ಯನಿರ್ಣಯ ಅಥವಾ ಸಂಗ್ರಹಣೆಗೆ ಸಂಬಂಧಿಸಿದಂತೆ ಯೋಜನಾ ಪ್ರಾಧಿಕಾರ ಅಥವಾ ಅಧಿಕಾರಿ ಮಾಡಿದ ಅಥವಾ ಕೈಗೊಂಡ ಎಲ್ಲ ಕಾರ್ಯಗಳು, ವ್ಯವಹಾರಗಳು ಅಥವಾ ವಿಷಯಗಳನ್ನು ಕಾನೂನಿನ ಪ್ರಕಾರ ಮಾಡಲಾಗಿದೆಯೆಂದು ಭಾವಿಸಲಾಗುವುದು. ಸಂಗ್ರಹಿಸಲಾದ ದಂಡದ ಮರುಪಾವತಿಗಾಗಿ ಯಾವುದೇ ನ್ಯಾಯಾಲಯ ಅಥವಾ ನ್ಯಾಯಾಧಿಕರಣ ಅಥವಾ ಯಾವುದೇ ಪ್ರಾಧಿಕಾರದ ಮುಂದೆ ಯಾವುದೇ ದಾವೆ ಹೊಡುವಂತಿಲ್ಲ. ಯಾವುದೇ ನ್ಯಾಯಾಲಯ ಅಂತಹ ಯಾವುದೇ ದಂಡದ ಮರುಪಾವತಿ ನಿರ್ದೇಶನದ ಯಾವುದೇ ಡಿಕ್ರಿ ಅಥವಾ ಆದೇಶವನ್ನು ಜಾರಿಗೊಳಿಸುವಂತಿಲ್ಲ.

ಅದೇ ರೀತಿ, ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ 2026 ಅಂಗೀಕಾರ ನೀಡಲಾಯಿತು. ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರು, ಪದನಿಮಿತ್ತ ಸದಸ್ಯರು ಮತ್ತು ಸರ್ಕಾರೇತರ ಸದಸ್ಯರ ಕುರಿತ ಉಪಬಂಧವನ್ನು ಪರಿಷ್ಕರಿಸಲು ಈ ತಿದ್ದುಪಡಿ ವಿಧೇಯಕ ತರಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಭೈರೇಗೌಡ ಹೇಳಿದರು.

Tags

Legislative Assembly Session
share
ವಾರ್ತಾಭಾರತಿ
ವಾರ್ತಾಭಾರತಿ
Next Story
X