Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅವಧಿ ಪೂರ್ಣಗೊಳಿಸಿದ ಐವರು ವಿಧಾನ ಪರಿಷತ್...

ಅವಧಿ ಪೂರ್ಣಗೊಳಿಸಿದ ಐವರು ವಿಧಾನ ಪರಿಷತ್ ಸದಸ್ಯರಿಗೆ ಬೀಳ್ಕೊಡುಗೆ

ವಾರ್ತಾಭಾರತಿವಾರ್ತಾಭಾರತಿ21 July 2026 11:39 PM IST
share
ಅವಧಿ ಪೂರ್ಣಗೊಳಿಸಿದ ಐವರು ವಿಧಾನ ಪರಿಷತ್ ಸದಸ್ಯರಿಗೆ ಬೀಳ್ಕೊಡುಗೆ

ಬೆಂಗಳೂರು : ವಿಧಾನ ಪರಿಷತ್ತಿನ ನಾಮನಿರ್ದೇಶಿತ ಸದಸ್ಯರಾದ ಎಚ್.ವಿಶ್ವನಾಥ್, ಭಾರತಿ ಶೆಟ್ಟಿ, ಶಾಂತರಾಮ ಬುಡ್ನ ಸಿದ್ದಿ, ಡಾ.ತಳವಾರ ಸಾಬಣ್ಣ ಹಾಗೂ ರಮೇಶ್ ಬಾಬು ಅವರ ಸದಸ್ಯತ್ವದ ಅವಧಿಯು ಜು.21ರಂದು ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ವತಿಯಿಂದ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು.

ಮಂಗಳವಾರ ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಅವಧಿ ಪೂರ್ಣಗೊಳಿಸಿದ ಐವರು ಸದಸ್ಯರನ್ನು ಗೌರವಿಸಿ, ಸ್ಮರಣಿಕೆಗಳನ್ನು ನೀಡಿ ಸನ್ಮಾನಿಸಿದ ಬಳಿಕ ಮಾತನಾಡಿದರು.

ಈ ಐವರು ಸದಸ್ಯರು ನಾಮನಿರ್ದೇಶನದ ಮೂಲಕ ವಿಧಾನಪರಿಷತ್ತಿಗೆ ಆಯ್ಕೆಯಾಗಿದ್ದು, ಕಳೆದ ಆರು ವರ್ಷಗಳ ಅವಧಿಯಲ್ಲಿ ರಾಜ್ಯದ ಅಭಿವೃದ್ಧಿ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ಅನೇಕ ಜ್ವಲಂತ ಸಮಸ್ಯೆಗಳನ್ನು ವಿಧಾನಪರಿಷತ್ತಿನ ಅಧಿವೇಶನಗಳಲ್ಲಿ ಪ್ರಸ್ತಾಪಿಸಿ, ಅರ್ಥಪೂರ್ಣ ಹಾಗೂ ರಚನಾತ್ಮಕ ಚರ್ಚೆಗಳ ಮೂಲಕ ಸದನದ ಕಾರ್ಯಚಟುವಟಿಕೆಗಳಿಗೆ ಮಹತ್ತರ ಕೊಡುಗೆ ನೀಡಿದ್ದಾರೆ ಎಂದು ಸಭಾಪತಿ ಹೇಳಿದರು.

ಶಾಸಕರಾಗಿ ಇವರು ಸರಕಾರದ ಕಾರ್ಯವೈಖರಿಯ ಕುರಿತು ಸಚಿವರನ್ನು ಪ್ರಶ್ನಿಸುವ ಮೂಲಕ ಉತ್ತರದಾಯಿತ್ವವನ್ನು ಬಲಪಡಿಸುವುದು, ಸಾರ್ವಜನಿಕ ಸಮಸ್ಯೆಗಳ ಕುರಿತು ಗಂಭೀರ ಚರ್ಚೆಗಳಲ್ಲಿ ಪಾಲ್ಗೊಳ್ಳುವುದು, ವಿವಿಧ ಶಾಸನ ಸಮಿತಿಗಳಲ್ಲಿ ಕಾರ್ಯನಿರ್ವಹಿಸಿ ಸರಕಾರದ ನೀತಿಗಳು ಹಾಗೂ ಕಾರ್ಯಕ್ರಮಗಳನ್ನು ಪರಿಶೀಲಿಸುವುದು ಮತ್ತು ಶಾಸನಗಳ ಪರಿಶೀಲನೆ, ಚರ್ಚೆ ಹಾಗೂ ಅಗತ್ಯ ತಿದ್ದುಪಡಿಗಳನ್ನು ಸೂಚಿಸುವ ಮೂಲಕ ತಮ್ಮ ಶಾಸನಾತ್ಮಕ ಜವಾಬ್ದಾರಿಗಳನ್ನು ಅತ್ಯಂತ ಸಮರ್ಪಕವಾಗಿ ನಿರ್ವಹಿಸಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ, ಜನರ ಆಶೋತ್ತರಗಳಿಗೆ ಸದನದಲ್ಲಿ ಧ್ವನಿಯಾಗುವಲ್ಲಿ ಹಾಗೂ ಸಾರ್ವಜನಿಕ ಜೀವನದಲ್ಲಿ ಆದರ್ಶಪ್ರಾಯ ಸೇವೆ ಸಲ್ಲಿಸುವಲ್ಲಿ ಇವರು ವಹಿಸಿದ ಪಾತ್ರ ವಿಧಾನಪರಿಷತ್ತಿನ ಇತಿಹಾಸದಲ್ಲಿ ಸದಾ ಸ್ಮರಣೀಯವಾಗಿರಲಿದೆ. ಇವರ ಅನುಭವ, ಜ್ಞಾನ, ವಿಚಾರಪಕ್ವತೆ ಮತ್ತು ಜನಪರ ಕಾಳಜಿ ಸದನದ ಚರ್ಚೆಗಳಿಗೆ ವಿಶೇಷ ಗೌರವ ಮತ್ತು ಗಂಭೀರತೆಯನ್ನು ತಂದುಕೊಟ್ಟಿದೆ ಎಂದು ಬಸವರಾಜ ಹೊರಟ್ಟಿ ಹೇಳಿದರು.

ಸದಸ್ಯತ್ವದ ಅವಧಿ ಪೂರ್ಣಗೊಳ್ಳುವುದು ಒಂದು ಹಂತದ ಸಮಾಪ್ತಿಯಷ್ಟೇ ಹೊರತು, ಸಾರ್ವಜನಿಕ ಸೇವೆಯ ಪಯಣದ ಅಂತ್ಯವಲ್ಲ. ಮುಂದಿನ ದಿನಗಳಲ್ಲಿಯೂ ಅವರ ಅಪಾರ ಅನುಭವ, ಮಾರ್ಗದರ್ಶನ ಮತ್ತು ಸಮಾಜಮುಖಿ ಚಿಂತನೆಯ ಮೂಲಕ ರಾಜ್ಯ ಹಾಗೂ ಸಮಾಜದ ಅಭಿವೃದ್ಧಿಗೆ ಇನ್ನಷ್ಟು ಕೊಡುಗೆ ನೀಡಲಿದ್ದಾರೆ ಎಂಬ ದೃಢ ವಿಶ್ವಾಸ ನನಗಿದೆ ಎಂದು ಸಭಾಪತಿ ತಿಳಿಸಿದರು. ಇದೇ ಸಂದರ್ಭದಲ್ಲಿ ಅವಧಿ ಪೂರ್ಣಗೊಳಿಸಿದ ಸದಸ್ಯರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

Tags

Legislative Council
share
ವಾರ್ತಾಭಾರತಿ
ವಾರ್ತಾಭಾರತಿ
Next Story
X