Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಿಜೆಪಿ ಸಭಾತ್ಯಾಗದ ನಡುವೆ ವಿಧಾನ...

ಬಿಜೆಪಿ ಸಭಾತ್ಯಾಗದ ನಡುವೆ ವಿಧಾನ ಪರಿಷತ್ತಿನಲ್ಲಿ ʼಪ್ರೀಮಿಯಂ ಎಫ್‍ಎಆರ್ʼ ತಿದ್ದುಪಡಿ ಮಸೂದೆ ಅಂಗೀಕಾರ

ವಾರ್ತಾಭಾರತಿವಾರ್ತಾಭಾರತಿ22 Feb 2024 9:14 PM IST
share
ಬಿಜೆಪಿ ಸಭಾತ್ಯಾಗದ ನಡುವೆ ವಿಧಾನ ಪರಿಷತ್ತಿನಲ್ಲಿ ʼಪ್ರೀಮಿಯಂ ಎಫ್‍ಎಆರ್ʼ ತಿದ್ದುಪಡಿ ಮಸೂದೆ ಅಂಗೀಕಾರ

ಬೆಂಗಳೂರು : ವಿಧಾನಸಭೆಯಲ್ಲಿ ಅಂಗೀಕಾರ ಸ್ವರೂಪದಲ್ಲಿದ್ದ ‘ಪ್ರೀಮಿಯಂ ಎಫ್‍ಎಆರ್' ಖರೀದಿ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸುವ ‘ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ಮಸೂದೆ-2024’ಕ್ಕೆ ವಿಧಾನ ಪರಿಷತ್ತಿನಲ್ಲಿ ಸುದೀರ್ಘ ಚರ್ಚೆ ಹಾಗೂ ಬಿಜೆಪಿ ಸದಸ್ಯರ ಸಭಾತ್ಯಾಗದ ನಡುವೆ ಗುರುವಾರ ಅಂಗೀಕಾರ ದೊರೆಯಿತು.

ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ‘ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ಮಸೂದೆ-2024’ ಅನ್ನು ವಿಧಾನ ಪರಿಷತ್‍ನಲ್ಲಿ ಮಂಡಿಸಿದರು.

ಮಾರ್ಗಸೂಚಿ ದರದ ಶೇ.40ರಷ್ಟು ಶುಲ್ಕವನ್ನು ಸ್ಥಳೀಯ ಯೋಜನಾ ಪ್ರಾಧಿಕಾರ ಅಥವಾ ನಗರ ಸ್ಥಳೀಯ ಸಂಸ್ಥೆಗಳಿಗೆ ಪಾವತಿಸುವ ಮೂಲಕ ಬಹುಮಹಡಿ ಕಟ್ಟಡಗಳಲ್ಲಿ ಹೆಚ್ಚುವರಿ ಅಂತಸ್ತುಗಳನ್ನು ನಿರ್ಮಿಸಬಹುದು. ಎಫ್‍ಎಆರ್ ಗಳನ್ನು ಬೇರೆಯವರಿಗೆ ಮಾರಾಟ ಮಾಡುವ ಅವಕಾಶವನ್ನು ಈ ಮಸೂದೆಯಲ್ಲಿ ಕಲ್ಪಿಸಲಾಗಿದೆ.

ಪ್ರೀಮಿಯಂ ಎಫ್‍ಎಆರ್ ಮಿತಿಯನ್ನು ಶೇ.0.4ಕ್ಕೆ ನಿಗದಿಪಡಿಸಲಾಗಿದೆ. ಟ್ರಾನ್ಸ್ ಫಾರಮ್ ಡೆವೆಲಪ್‍ಮೆಂಟ್ ರೈಟ್ಸ್(ಟಿಡಿಆರ್) ಬಳಸಿ ನಿರ್ಮಿಸಿರುವ ಕಟ್ಟಡದ ಎಫ್‍ಎಆರ್ ಮಿತಿಯು ಶೇ.0.6 ರಷ್ಟನ್ನು ಮೀರುವಂತಿಲ್ಲ ಎಂದು ಹೇಳಲಾಗಿದೆ. ಇದರಿಂದಾಗಿ ಸ್ಥಳೀಯ ಸಂಸ್ಥೆಗಳ ಆದಾಯ ಹೆಚ್ಚಾಗುತ್ತಿದ್ದು, ಅಭಿವೃದ್ದಿ ಕಾರ್ಯಗಳಿಗೆ ವಿನಿಯೋಗವಾಗುತ್ತದೆ. ಎಫ್‍ಎಆರ್ ಗಳ ಮಾರಾಟದಿಂದ ಸಂಗ್ರಹವಾಗುವ ಶುಲ್ಕವನ್ನು ಭೂಸ್ವಾಧೀನ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಬಳಸಿಕೊಳ್ಳಬಹುದು ಎಂದು ತಿಳಿಸಲಾಗಿದೆ.

ನಿವೇಶನದ ಅಳತೆ ಮತ್ತು ಮುಂದಿರುವ ರಸ್ತೆಯ ಅಳತೆ ಮೇಲೆ ಇಂತಿಷ್ಟು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಬಹುದು ಎಂದು ಅಳತೆ ಮಾಡಿ ಅನುಮತಿ ನೀಡಲಾಗುತ್ತಿತ್ತು. ಈ ಮಸೂದೆಯಿಂದಾಗಿ ಕಟ್ಟಡ ನಿರ್ಮಿಸುವವರು ಪ್ರೀಮಿಯಂ ಎಫ್‍ಎಆ‌ರ್ ಗಳನ್ನು ಖರೀದಿಸಿ, ಕಟ್ಟಡದ ನಿವೇಶನದ ಅಳತೆಗಿಂತ ಹೆಚ್ಚುವರಿ ಅಂತಸ್ತುಗಳನ್ನು ನಿರ್ಮಿಸಿಕೊಳ್ಳಬಹುದು ಎಂದು ಮಸೂದೆ ವಿವರಿಸುತ್ತದೆ.

ಆಡಳಿತ ಪಕ್ಷದ ಸದಸ್ಯ ನಾಗರಾಜ್ ಯಾದವ್ ಮಾತನಾಡಿ, ಹಳೆಯ ಕಾನೂನಿಗೆ ಹೊಸ ರೂಪ ನೀಡಿರುವುದು ಸ್ವಾಗತಾರ್ಹ. ಸ್ಥಳೀಯ ಸಂಸ್ಥೆಗಳಿಗೆ ಅನುಮತಿ ನೀಡುವ ಅಧಿಕಾರ ನೀಡಿರುವ ಕಾರಣ ಕೆಲಸದ ವಿಳಂಬ ತಪ್ಪುತ್ತದೆ ಎಂದು ವಿಧೇಯಕಕ್ಕೆ ಬೆಂಬಲ ಸೂಚಿಸಿದರು.

ಬಿಜೆಪಿ ಸದಸ್ಯ ಕೆ.ಎಸ್.ನವೀನ್ ತಿದ್ದುಪಡಿಯನ್ನು ಸ್ವಾಗತಿಸಿ, ಸಣ್ಣ ರಸ್ತೆಗಳು ಇರುವ ಕಡೆ ಜನದಟ್ಟಣೆ ಉಂಟಾಗುತ್ತದೆ ಮತ್ತು ಅಗ್ನಿ ಅವಘಡಗಳು ಉಂಟಾದಾಗ ತೊಂದರೆಯಾಗುತ್ತದೆ. ಈ ಕುರಿತು ಸರಕಾರ ಆಲೋಚಿಸಬೇಕು ಎಂದು ಸಲಹೆ ನೀಡಿದರು

ಬಿಜೆಪಿ ಸದಸ್ಯ ಕೇಶವಪ್ರಸಾದ್.ಎಸ್ ಮಾತನಾಡಿ, ಬೆಂಗಳೂರಿನ ಮೂಲಸೌಕರ್ಯಗಳ ಮೇಲೆ ಒತ್ತಡ ಹೆಚ್ಚಾಗಲಿದೆ. ಆದ ಕಾರಣ ಸಮಿತಿ ರಚಿಸಿ ಮತ್ತೊಂದು ಸುತ್ತಿನ ಪರಾಮರ್ಶೆಯ ನಂತರ ಮತ್ತೊಮ್ಮೆ ಪ್ರೀಮಿಯಂ ಎಫ್‍ಎಆರ್ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಲಿ ಎಂದು ಆಗ್ರಹಿಸಿದರು.

ಇದೇ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ನೀವು ಮಾಡಿದ ಕಾನೂನನ್ನೇ ಸರಳೀಕರಣ ಮಾಡಿ ಕರ್ನಾಟಕದ ಎಲ್ಲ ಭಾಗದ ಜನರು ಇದರ ಉಪಯೋಗ ಪಡೆಯಲಿ ಮತ್ತು ಸ್ಥಳೀಯ ಸಂಸ್ಥೆಗಳ ಆದಾಯ ಹೆಚ್ಚಾಗಲಿ ಎನ್ನುವುದಷ್ಟೇ ನಮ್ಮ ಉದ್ದೇಶ. ಬೊಮ್ಮಾಯಿ ಅವರ ಸರಕಾರವೂ ಇದನ್ನು ತಿದ್ದುಪಡಿ ಮಾಡಲು ಹೊರಟಿತ್ತು ಎಂದು ಸ್ಪಷ್ಟಪಡಿಸಿದರು.

ಈಗಾಗಲೇ ಈ ಕಾನೂನು ಇದೆ. ನಾವು ಹೊಸದಾಗಿ ತರಲು ಮುಂದಾಗಿಲ್ಲ. ಸ್ಥಳೀಯ ಸಂಸ್ಥೆಗಳೂ ಇದರ ಉಪಯೋಗ ಪಡೆದುಕೊಳ್ಳಲಿ ಎಂದು ತಿದ್ದುಪಡಿ ಮಾಡಿದ್ದೇವೆ. ಮಂಗಳೂರಿನಲ್ಲಿ ಪ್ರೀಮಿಯಂ ಎಫ್‍ಎಆರ್ ಜಾರಿಯಾಗಿತ್ತು. ಇದರಿಂದಾಗಿ ಹಿಂದಿನ 5-6 ವರ್ಷಗಳಲ್ಲಿ 2-3 ಸಾವಿರ ಕೋಟಿ ರೂ.ಗಳಷ್ಟು ಆದಾಯ ಬಂದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಕಡೆ ಈ ಅವಕಾಶ ಕಲ್ಪಿಸಲು ವಿಧೇಯಕಕ್ಕೆ ತಿದ್ದುಪಡಿ ಮಾಡಲಾಗಿದೆ ಎಂದು ಅವರು ಹೇಳಿದರು.

ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ, ಈ ಬಿಲ್ ಅನ್ನು ತಡೆ ಹಿಡಿದು, ಹೆಚ್ಚಿನ ಚರ್ಚೆ ನಡೆಸುವುದು ಉತ್ತಮ. ಎಲ್ಲರೊಟ್ಟಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಿ ಪುನಃ ಮಂಡನೆ ಮಾಡಿ. ಇದರಿಂದ ಅಧಿಕಾರಿಗಳ ಕೈಗೆ ಎಲ್ಲಾ ಅಧಿಕಾರಗಳನ್ನು ನೀಡಿದಂತಾಗುತ್ತದೆ ಎಂದು ವಿಧೇಯಕವನ್ನು ವಿರೋಧಿಸಿ, ಸಭಾತ್ಯಾಗ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X