Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಮುದಾಯಗಳ ವಿವೇಕ ಮುಂದಿನ ಪೀಳಿಗೆಗೆ...

ಸಮುದಾಯಗಳ ವಿವೇಕ ಮುಂದಿನ ಪೀಳಿಗೆಗೆ ಜ್ಞಾನದ ಭಾಗವಾಗಲಿ : ಕೋಟಿಗಾನಹಳ್ಳಿ ರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ15 Nov 2024 8:33 PM IST
share
Photo of program

ಬೆಂಗಳೂರು : ರಾಜ್ಯ ಹಾಗೂ ದೇಶದಲ್ಲಿ ಅನೇಕ ಪಶುಪಾಲನ ಸಮುದಾಯಗಳಿವೆ. ಆ ಸಮುದಾಯಗಳಲ್ಲಿರುವ ಜ್ಞಾನ ಸಂಪತ್ತು, ವಿವೇಕ ಮುಂದಿನ ಪೀಳಿಗೆಗೆ ಜ್ಞಾನದ ಭಾಗವಾಗಲಿ ಎಂದು ಹಿರಿಯ ಚಿಂತಕ ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಶುಕ್ರವಾರ ನಗರದ ಸಮಗತ ಫೌಂಡೇಷನ್‌ನಲ್ಲಿ ದಖ್ಖನಿ ಡೈರೀಸ್ ವತಿಯಿಂದ ಆಯೋಜಿಸಿದ್ದ ‘ಕುರುಬ್ಕಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಂದು ಸಮುದಾಯವನ್ನು ಕೇವಲ ಹೊರಗಿನಿಂದ ಮಾತ್ರವಲ್ಲ. ಒಳಗಿನಿಂದ ಒಳಗೊಂಡು ಜತೆಯಾಗಬೇಕು. ಇಂದು ಅನೇಕ ಅಳಿವು ಉಳಿವಿನ ಪ್ರಶ್ನೆಗಳಿವೆ. ಅವೆಲ್ಲವೂ ರಾಜಕೀಯ ಪ್ರಶ್ನೆಗಳಾಗಿವೆ. ಆ ಪ್ರಶ್ನೆಗಳನ್ನು ಎದುರಿಸಲು ಪ್ರಯತ್ನಿಸಬೇಕಿದೆ ಎಂದು ಅಭಿಪ್ರಾಯಪಟ್ಟರು.

ಪೊಲೀಸ್ ಅಧಿಕಾರಿ ರವಿಕಾಂತೇಗೌಡ ಮಾತನಾಡಿ, ನಮ್ಮ ನೆಲವನ್ನು ಸಂಸ್ಕರಿಸಿ ಫಲವತ್ತಾಗಿ ಇಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ಕುರುಬರ ಸಂಸ್ಕೃತಿಯ ಕುರಿತ ಕಾರ್ಯಕ್ರಮ ವಿಭಿನ್ನವಾಗಿದೆ. ಕುರುಬರು ಅಲೆಮಾರಿಗಳು ಆದ್ದರಿಂದ ಬಡವರು ಎಂದು ತಿಳಿದುಕೊಂಡಿದ್ದೇವೆ. ಆದರೆ ಅವರು ಸಾಂಸ್ಕೃತಿಕವಾಗಿ ಶ್ರೀಮಂತರಾಗಿದ್ದಾರೆ. ನೆಲವನ್ನು ಬರಡು ಮಾಡುತ್ತಾ ಶೋಷಿಸುತ್ತಿದ್ದರೆ, ಕುರುಬರು ನೆಲದ ಸಾರವನ್ನು ಮತ್ತೆ ಸೇರಿಸಿ ಫಲವತ್ತಾಗಿ ಮಾಡುವಲ್ಲಿ ಸಕ್ರಿಯರಾಗಿದ್ದಾರೆ ಎಂದು ತಿಳಿಸಿದರು.

ಸಮುದಾಯದ ಹಿರಿಯರಾದ ನೀಲಕಂಠ ಮಾಮಾ ಮಾತನಾಡಿ, ಕುರುಬರ ಮೂಲ ಸಂಸ್ಕೃತಿ ಕುರಿ ಹುಟ್ಟಿದ ಬಗೆ, ಕುರುಬ ಕಂಬಳಿಗಳು ಸೇರಿ ಇತರೆ ವಸ್ತುಗಳ ಹೇಗೆ ಮನುಷ್ಯನಿಗೆ ಪರಿಣಾಮಕಾರಿಯಾಗಿ ಉಪಯೋಗವಾಗಬಲ್ಲವು ಎಂಬುದನ್ನು ತಿಳಿಸಿದರು.

ಇದೇ ವೇಳೆ ಹಿರಿಯ ಚಿಂತಕ ಕೋಟಿಗಾನಹಳ್ಳಿ ರಾಮಯ್ಯ ಅವರು ಸಂಪಾದಿಸಿರುವ ‘ರತ್ನ ಪಕ್ಸಿ’ ಜನಪದ ಕಥೆಗಳು, ಹಾಗೂ ಟಗರಜೋಗಿ ತಲ್ಲಣಗಳು ಪುಸ್ತಕ ಬಿಡುಗಡೆ, ಜತೆಗೆ ಕುರುಬ ಮಹಿಳಾ ಕುಶಲಕರ್ಮಿಗಳಿಂದ ಉಣ್ಣೆ ಫೆಲ್ಟಿಂಗ್, ವಸ್ತ್ರ ನೇಯ್ಗೆಯಲ್ಲಿ ಕಾರ್ಯಾಗಾರ ನಡೆಯಿತು.

ಕಾರ್ಯಕ್ರಮದಲ್ಲಿ ಹಿರಿಯ ವಿನ್ಯಾಸಕಾರ ಗೋಪಿಕೃಷ್ಣ, ಸಮಗತ ಫೌಂಡೇಷನ್ನ ರೋಶಿಣಿ, ದೀಪಾ, ಡಾ.ಚಂದ್ರಪ್ಪ ಸೊಬಟಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X