Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪೊಲೀಸರ ನಿರ್ಬಂಧದ ನಡುವೆಯೇ...

ಪೊಲೀಸರ ನಿರ್ಬಂಧದ ನಡುವೆಯೇ ‘ನ್ಯಾಯಕ್ಕಾಗಿ ಹಣತೆ ಹಚ್ಚೋಣ’ ಆಂದೋಲನ

ವಾರ್ತಾಭಾರತಿವಾರ್ತಾಭಾರತಿ23 Oct 2025 11:32 PM IST
share
ಪೊಲೀಸರ ನಿರ್ಬಂಧದ ನಡುವೆಯೇ ‘ನ್ಯಾಯಕ್ಕಾಗಿ ಹಣತೆ ಹಚ್ಚೋಣ’ ಆಂದೋಲನ

ಬೆಂಗಳೂರು : ಧರ್ಮಸ್ಥಳ ದೌರ್ಜನ್ಯ ಪ್ರಕರಣಗಳ ಕುರಿತು ಸತ್ಯ ಬೆಳಕಿಗೆ ಬರಲಿ ಎಂಬ ಆಶಯದೊಂದಿಗೆ ಬೆಳಕಿನ ಹಬ್ಬ ದೀಪಾವಳಿ ದಿನದಂದು ‘ನ್ಯಾಯಕ್ಕಾಗಿ ಹಣತೆ ಹಚ್ಚೋಣ’ ಆಂದೋಲನವನ್ನು ಪೊಲೀಸರ ನಿರ್ಬಂಧದ ನಡುವೆಯೇ ನಡೆಸಲಾಯಿತು.

ಗುರುವಾರ ನಗರದ ಬಸವಣ್ಣ ಪುತ್ಥಳಿ ಸಮೀಪ ‘ನ್ಯಾಯಕ್ಕಾಗಿ ನಾವು’ ಸಂಘಟನೆಯ ವತಿಯಿಂದ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಮೇಣದ ಬತ್ತಿಯನ್ನು ಬೆಳಗಿಸಿ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ, ಅತ್ಯಾಚಾರ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದರು.

ಆರೆಸ್ಸೆಸ್ ಪಥಸಂಚಲನಕ್ಕೆ ಅವಕಾಶವನ್ನು ನೀಡುವ ಪೊಲೀಸರು, ಹೈಕೋರ್ಟ್ ಆದೇಶದ ನೆಪದಲ್ಲಿ ನ್ಯಾಯಯುತ ಪ್ರತಿಭಟನೆಗಳಿಗೆ ನಿರ್ಬಂಧ ಹೇರಿದ್ದಾರೆ. ನಾವು ಪೊಲೀಸ್ ರಾಜ್ಯದಲ್ಲಿದ್ದೇವೆಯೋ ಅಥವಾ ಪ್ರಜಾಪ್ರಭುತ್ವ ರಾಜ್ಯದಲ್ಲಿ ಇದ್ದೇವೆಯೋ ಎಂದು ಹೋರಾಟಗಾರರು ಪ್ರಶ್ನಿಸಿದರು.

ಧರ್ಮಸ್ಥಳದಲ್ಲಿ ಈ ಹಿಂದೆ ನಡೆದಿರುವ ಮಹಿಳೆಯರ ಮತ್ತು ನಾಗರಿಕರ ಮೇಲಿನ ಎಲ್ಲ ದೌರ್ಜನ್ಯ, ಅಪಹರಣ, ನಾಪತ್ತೆ, ಅಸಹಜ ಸಾವು, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನೂ ಎಸ್‌ಐಟಿ ತನಿಖೆ ವ್ಯಾಪ್ತಿಗೆ ತರಬೇಕೆಂದು ಆಗ್ರಹಿಸಿ ನವೆಂಬರ್ 1ರಂದು ‘ಸಹಿ ಸಂಗ್ರಹ’ ಆಂದೋಲನವನ್ನು ಆರಂಭಿಸುತ್ತಿದ್ದೇವೆ ಎಂದು ಹೋರಾಟಗಾರರು ತಿಳಿಸಿದರು.

ನವೆಂಬರ್ ತಿಂಗಳಿನಲ್ಲಿ ರಾಜ್ಯದ ಮೂಲೆಮೂಲೆಗಳಲ್ಲಿ ಜಾಗೃತಿ ಅಭಿಯಾನವನ್ನು ನಡೆಸಿ, ಡಿ.10ರಂದು ‘ವಿಶ್ವ ಮಾನವ ಹಕ್ಕುಗಳ ದಿನ’ದ ಸಂದರ್ಭದಲ್ಲಿ ಬೃಹತ್ ಮಹಿಳಾ ಸಮಾವೇಶವನ್ನು ಹಮ್ಮಿಕೊಳ್ಳಲಿದ್ದೇವೆ. ಅದರಲ್ಲಿ ದೇಶದ ವಿವಿಧ ಭಾಗಗಳಿಂದ ಮಹಿಳಾ ಸಂಘಟನೆಗಳ ಹಿರಿಯ ನಾಯಕಿಯರೂ ಮತ್ತು ಚಿಂತಕಿಯರೂ ಪಾಲ್ಗೊಂಡು ನ್ಯಾಯಕ್ಕಾಗಿ ಆಗ್ರಹಿಸಲಿದ್ದೇವೆ ಎಂದು ತಿಳಿಸಿದರು.

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಎಲ್ಲ ಕೊಲೆ, ಅತ್ಯಾಚಾರ ಪ್ರಕರಣಗಳನ್ನು ಎಸ್‌ಐಟಿಯು ಸಮಗ್ರವಾಗಿ ತನಿಖೆ ನಡೆಯಲಿ ಮತ್ತು ತಾರ್ಕಿಕ ಅಂತ್ಯ ಮುಟ್ಟುವ ತನಕ ಅಬಾಧಿತವಾಗಿ ಸಾಗಲಿ ಎಂಬ ಆಗ್ರಹವನ್ನೂ ಪರಿಗಣಿಸಿ, ಅದಕ್ಕೆ ಅಗತ್ಯವಾದ ಆದೇಶಗಳನ್ನು ಹೊರಡಿಸಬೇಕು ಎಂದು ಹೋರಾಟಗಾರರು ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X