Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನಮ್ಮ ಭಾಷೆಯ ಬಗ್ಗೆ ಗೌರವವಿರಲಿ : ಲೇಖಕಿ...

ನಮ್ಮ ಭಾಷೆಯ ಬಗ್ಗೆ ಗೌರವವಿರಲಿ : ಲೇಖಕಿ ಬಾನು ಮುಷ್ತಾಕ್

ವಾರ್ತಾಭಾರತಿವಾರ್ತಾಭಾರತಿ4 Jun 2025 11:49 PM IST
share
ನಮ್ಮ ಭಾಷೆಯ ಬಗ್ಗೆ ಗೌರವವಿರಲಿ : ಲೇಖಕಿ ಬಾನು ಮುಷ್ತಾಕ್

ಬೆಂಗಳೂರು : ‘ನನ್ನ ಮಾತೃಭಾಷೆ ಉರ್ದು, ನಮ್ಮ ನಾಡಿನ ಭಾಷೆ ಕನ್ನಡ, ನನಗೂ ಅಷ್ಟಾಗಿ ಇಂಗ್ಲಿಷ್ ಬರುವುದಿಲ್ಲ. ನಮ್ಮ ಭಾಷೆ ಬಗ್ಗೆ ನಮಗೆ ಗೌರವ ಇರಬೇಕು ಹಾಗೂ ಹಿಡಿತ ಇರಬೇಕು. ಕನ್ನಡದವರಾಗಿ ಈಗಿನ ಮಕ್ಕಳಿಗೆ ಕನ್ನಡ ಸಹ ಸರಿಯಾಗಿ ಬರದಿರುವುದು ಇಂದಿನ ದುರಂತ ಎಂದು ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಬೇಸರ ವ್ಯಕ್ತಪಡಿಸಿದ್ದಾರೆ.

ಬುಧವಾರ ನಗರದ ಪ್ರೆಸ್‍ಕ್ಲಬ್‍ನಲ್ಲಿ ಕರ್ನಾಟಕ ಮಾದ್ಯಮ ಅಕಾಡಮಿ ಹಾಗೂ ಪ್ರೆಸ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಅಂತರ್‍ರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಹಾಗೂ ದೀಪಾ ಭಾಸ್ತಿ ಅವರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಪ್ರಾಥಮಿಕ ಶಾಲೆಯವರೆಗೆ ಕನ್ನಡ ಮಾದ್ಯಮದಲ್ಲಿಯೇ ಓದಿದ್ದೇನೆ. ಕನ್ನಡದಲ್ಲಿಯೇ ಕಥೆ ಬರೆದಿದ್ದೇನೆ. ಅದಕ್ಕೆ ಇಂಗ್ಲೀಷ್ ಬರಹಗಾರ್ತಿ ದೀಪಾ ಭಾಸ್ತಿ ಅವರು ಇಂಗ್ಲಿಷ್‍ಗೆ ಅನುವಾದ ಮಾಡಿದ್ದಾರೆ. ನನಗೆ ಸರಿಯಾಗಿ ಇಂಗ್ಲೀಷ್ ಬರುವುದಿಲ್ಲ ಎಂಬ ಕೀಳರಿಮೆ ನನ್ನನ್ನು ಇಂದಿಗೂ ಕಾಡುತ್ತಿಲ್ಲ. ನಿಮಗೆ ಬರುವ ಭಾಷೆ ನಿಮ್ಮ ಬಲ. ನಾವು ಮಾಡುವ ಕೆಲಸದಲ್ಲಿ ನಮ್ಮನ್ನು ನಾವು ಗುರುತಿಸಿಕೊಳ್ಳಬೇಕು ಎಂದು ತಿಳಿಸಿದರು.

ಅವರವರ ಭಾಷೆ ಅವರದ್ದು, ನನಗೆ ಬೂಕರ್ ಪ್ರಶಸ್ತಿ ಬಂದಾಗ ಅಂತರರಾಷ್ಟ್ರೀಯ ವೇದಿಕೆಗಳು ಹಾಗೂ ಮಾದ್ಯಮಗಳಲ್ಲಿ ನಾನು ಭಾಷಾಂತರಕಾರರನ್ನು ಬಳಸಿಕೊಂಡು ಸಂವಹನ ನಡೆಸಿದ್ದೇನೆ, ಇದರ ಬಗ್ಗೆ ಹೆಮ್ಮೆ ಇದೆ ಎಂದು ಅವರು ಹೇಳಿದರು.

ನನ್ನ ಬರಹದ ಜೊತೆಗೆ ನನ್ನ ಬದುಕು ನನ್ನೊಳಗೆ ಚರ್ಚೆ ಹುಟ್ಟು ಹಾಕುತ್ತಿದ್ದವು. ಬರವಣಿಗೆಯಲ್ಲಿ ಮರೆಮಾಚುವುದು ಏನೂ ಇಲ್ಲ, ಎಲ್ಲವೂ ತೆರೆಜ ಪುಸ್ತಕ. ಭವಿಷ್ಯದಲ್ಲಿ ಕಾದಂಬರಿ ಸೇರಿದಂತೆ ಆತ್ಮಕಥನವನ್ನು ಸಹ ಬರೆಯುವ ಉದ್ದೇಶವಿದೆ. ಇಲ್ಲಿಯವರೆಗೆ ಯಾವುದೇ ಪ್ರಶಸ್ತಿ ಅಥವಾ ಪುರಸ್ಕಾರಗಳಿಗಾಗಿ ನಾನು ಬರೆದಿಲ್ಲ ಎಂದು ಅವರು ವಿವರಿಸಿದರು.

ನನ್ನ ಬದುಕಿನಲ್ಲಿ ನನ್ನದೇ ಆದ ಅಸ್ತಿತ್ವ ಕಂಡುಕೊಳ್ಳಬೇಕು ಎಂಬ ಉದ್ದೇಶದಿಂದ ಚಿಕ್ಕ ವಯಸ್ಸಿನಲ್ಲಿಯೇ ನಾನು ನನ್ನ ಸಮಾಜದೊಳಗಿನ ಸ್ವಾತಂತ್ರ್ಯಕ್ಕಾಗಿ ಹೋರಾಟ ಆರಂಭಿಸಿದೆ. ಶಿಕ್ಷಣ ಪಡೆದ ನಂತರ ವಕೀಲೆಯಾಗಿ, ಶಿಕ್ಷಕಿಯಾಗಿ, ಹೋರಾಟಗಾರ್ತಿಯಾಗಿ ನನ್ನನ್ನು ನಾನು ಗುರುತಿಸಿಕೊಂಡು ನನ್ನ ಅನುಭವಗಳನ್ನು ಹಾಗೂ ಕಣ್ಣಾರೆ ಕಂಡ ಘಟನೆಗಳಿಗೆ ಸಾಹಿತ್ಯದ ರೂಪ ಕೊಡಲು ಆರಂಭಿಸಿ ಇಂದು ಅಂತರ್‍ರಾಷ್ಟ್ರೀಯ ಮಟ್ಟದ ಬೂಕರ್ ಪಡೆಯುವದರೊಂದಿಗೆ ಜಗತ್ತಿನ ಕಣ್ಣಿಗೆ ಬಿದ್ದಿದ್ದೇನೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆ ಆಯೇಶಾ ಖಾನಂ, ಪ್ರೆಸ್‍ಕ್ಲಬ್‍ನ ಪ್ರಧಾನ ಕಾರ್ಯದರ್ಶಿ ಶಿವಕಮಾರ್ ಬೆಳ್ಳಿತಟ್ಟೆ, ಅನುವಾದಕಿ ದೀಪಾ ಭಾಸ್ತಿ, ಪತ್ರಕರ್ತೆ ಎಸ್.ರಶ್ಮಿ, ಕರ್ನಾಟಕ ಮಾಧ್ಯಮ ಅಕಾಡಮಿಯ ಕಾರ್ಯದರ್ಶಿ ಎಂ.ಸಹನಾ ಮತ್ತಿತರರು ಉಪಸ್ಥಿತರಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X