ರಾಜ್ಯದೆಲ್ಲೆಡೆ ಎಂಟು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿದ ಕಡೆಗಳಲ್ಲಿ ಮಂಗಳವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
8 ಅಧಿಕಾರಿಗಳಿಗೆ ಸೇರಿದ ಮನೆ, ಕಚೇರಿಗಳಿಗೆ ಇಂದು ಮುಂಜಾನೆ ಏಕಕಾಲಕ್ಕೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಬೆಂಗಳೂರಿನ ಗೋವಿಂದರಾಜನಗರದಲ್ಲಿರುವ ಬಿಬಿಎಂಪಿ ಸಹಾಯಕ ಇಂಜಿನಿಯರ್ ಪ್ರಕಾಶ್, ಶಿವಮೊಗ್ಗದ ಸಾವಯುವ ಕೃಷಿ ಸಹ ಸಂಶೋಧನಾ ನಿರ್ದೇಶಕ ಡಾ.ಎಸ್.ಪ್ರದೀಪ್, ಕಲಬುರಗಿಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇಂಜಿನಿಯರಿಂಗ್ ವಿಭಾಗದ ಇಇ ಮಲ್ಲಿಕಾರ್ಜುನ ಅಲಿಪುರ, ಸಣ್ಣೂರು ಗ್ರಾಮದ ಪಿಡಿಒ ರಾಮಚಂದ್ರ, ಚಿಕ್ಕಮಗಳೂರು ನಗರಸಭೆಯ ಲೆಕ್ಕಾಧಿಕಾರಿ ಲತಾಮಣಿ, ಆನೇಕಲ್ ಪುರಸಭೆಯ ಮುಖ್ಯಾಧಿಕಾರಿ ಕೆ.ಜಿ. ಅಮರನಾಥ್, ಗದಗದ ನಗರ ಪೊಲೀಸ್ ನಿರೀಕ್ಷಕ ಧ್ರುವರಾಜ್, ಧಾರವಾಡದ ಮಲಪ್ರಭಾ ಪ್ರಾಜೆಕ್ಟ್ ಇಂಜಿನಿಯರ್ ಅಶೋಕ್ ವಲ್ಸಂದ್ ಎಂಬವರ ಮನೆ, ಕಚೇರಿಗಳಿಗೆ ಲೋಕಾಯುಕ್ತ ದಾಳಿ ನಡೆದಿದೆ.
Next Story





