ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಬೆಂಗಳೂರು: ಕೋಲಾರ, ಯಾದಗಿರಿ, ದಾವಣಗೆರೆ ಮತ್ತು ಬೆಂಗಳೂರಿನ ವಿವಿಧೆಡೆ ಹಲವು ಸರಕಾರಿ ಅಧಿಕಾರಿಗಳ ಕಚೇರಿ ನಿವಾಸಗಳ ಮೇಲೆ ಇಂದು (ಗುರುವಾರ) ಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ.
ಕೋಲಾರ ತಾಲೂಕಿನ ಭೂಮಾಪನಾ ಇಲಾಖೆ ಸರ್ವೇ ಅಧಿಕಾರಿ ಸುರೇಶ್ ಬಾಬು ಜಿ., ಸುರಪುರ ತಾಲೂಕು ಆರೋಗ್ಯಾಧಿಕಾರಿ ರಾಜಾ ವೆಂಕಟಪ್ಪ ನಾಯಕ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (ದಾವಣಗೆರೆ) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಂ.ಬಿ ರವಿ ಹಾಗೂ ಜಲ ಸಂಪನ್ಮೂಲ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಜಿ. ಶ್ರೀನಿವಾಸ ಮೂರ್ತಿ ಎಂಬವರ ಮನೆ ಮತ್ತು ಕಚೇರಿಗಳಿಗೆ ಇಂದು ಬೆಳಗ್ಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆಪತ್ರಗಳ ಪರಿಶೀಲನೆ ನಡೆಸಿದ್ದಾರೆ.
ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಲೋಕಾಯುಕ್ತ ಪ್ರಕಟನೆ ತಿಳಿಸಿದೆ.
Next Story





