Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಜ್ಯದ ವಿವಿಧೆಡೆ 11 ಅಧಿಕಾರಿಗಳಿಗೆ...

ರಾಜ್ಯದ ವಿವಿಧೆಡೆ 11 ಅಧಿಕಾರಿಗಳಿಗೆ ಸೇರಿದ 56 ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ

ವಾರ್ತಾಭಾರತಿವಾರ್ತಾಭಾರತಿ11 July 2024 9:19 AM IST
share
ರಾಜ್ಯದ ವಿವಿಧೆಡೆ 11 ಅಧಿಕಾರಿಗಳಿಗೆ ಸೇರಿದ 56 ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ/ಬೆಳಗಾವಿ : ಕಲಬುರಗಿ, ಮೈಸೂರು, ದಾವಣಗೆರೆ, ಚಿತ್ರದುರ್ಗ, ಧಾರವಾಡ, ಬೆಳಗಾವಿ ಸೇರಿ 9 ಜಿಲ್ಲೆಗಳಲ್ಲಿ 11 ಅಧಿಕಾರಿಗಳಿಗೆ ಸಂಬಂಧಿಸಿದ 56 ಸ್ಥಳಗಳಲ್ಲಿ ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ನೇತೃತ್ವದಲ್ಲಿ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದೆ.

ಬೆಳಗಾವಿ ನಿರ್ಮಿತಿ ಕೇಂದ್ರದ ಯೋಜನಾಧಿಕಾರಿ ಶೇಖರಗೌಡ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಇವರು ಧಾರವಾಡದಲ್ಲಿ ಎರಡು ಕಡೆ ಪಿಜಿಗಳನ್ನು ಹೊಂದಿದ್ದಾರೆ. ಕೆಸಿಡಿ ರಸ್ತೆಯ ಸಪ್ತಾಪುರ ಹಾಗೂ ರಾಧಾಕೃಷ್ಣ ನಗರದಲ್ಲಿ ಈ ಪಿಜಿಗಳಿದ್ದು, ಎರಡೂ ಸ್ಥಳಗಳಲ್ಲೂ ಏಕಕಾಲಕ್ಕೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿರುವುದಾಗಿ ತಿಳಿಸಿದ್ದಾರೆ.

ರಾಮನಗರ ಜಿಲ್ಲೆಯ ಆರೋಹಳ್ಳಿ ತಹಶೀಲ್ದಾರ್ ವಿಜಯಣ್ಣ ಅವರಿಗೆ ಸಂಬಂಧಿಸಿದ ಆರು ಸ್ಥಳಗಳಲ್ಲಿ ದಾಳಿ ನಡೆದಿದೆ. ಚಿಕ್ಕಬಳ್ಳಾಪುರ, ಚಿಂತಾಮಣಿ ಹಾಗು ತುಮಕೂರಿನ ತಲಾ ಎರಡು ಸ್ಥಳಗಳು, ರಾಮನಗರದ ಆರೋಹಳ್ಳಿ ಹಾಗೂ ಮಂಡ್ಯದ ಒಂದೆಡೆ ದಾಳಿ ನಡೆಸಲಾಗಿದೆ. ವಿಜಯಣ್ಣ ಈ ಮೊದಲು ಕೋಲಾರ ತಹಶೀಲ್ದಾರ್ ಆಗಿದ್ದರು. ಕೋಲಾರ ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬಿಬಿಎಂಪಿ ಕೆಂಗೇರಿ ವಿಭಾಗದ ಕಂದಾಯ ಅಧಿಕಾರಿ ಬಸವರಾಜ್ ಮಾಗಿ ಅವರ ಬೆಂಗಳೂರು ಹಾಗು ಕಲಬುರಗಿಯ ಎಂ.ಬಿ.ನಗರದಲ್ಲಿರುವ ನಿವಾಸದ ಮೇಲೂ ದಾಳಿ ನಡೆಸಲಾಗಿದೆ.

ಬೆಳಗಾವಿಯ ಜಿಲ್ಲಾ ಪಂಚಾಯತ್ ಎಇಇ ದುರದುಂಡೇಶ್ವರ ಬನ್ನೂರ ಅವರಿಗೆ ಸೇರಿದ ಸೇರಿದ ನಾಲ್ಕು ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಗೋಕಾಕ, ಹೊನಗಾ, ಹಿಂಡಲಗಾ ಹಾಗೂ ಯಳ್ಳೂರ ಸೇರಿ 4 ಕಡೆ ದಾಳಿ ನಡೆದಿದೆ. ಗೋಕಾಕದ ನಿವಾಸ, ಹೊನಗಾ ಫಾರ್ಮ್ ಹೌಸ್, ಯಳ್ಳೂರು ಮನೆ ಹಿಂಡಲಗಾ ಅಪಾರ್ಟ್‍ಮೆಂಟ್‍ಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ ಎಂದು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ

ಮಂಡ್ಯ ನಗರದ ನಿವೃತ್ತ ಎಕ್ಸಿಕ್ಯೂಟಿವ್ ಇಂಜಿನಿಯರ್ ಶಿವರಾಜು ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಎಸ್‍ಪಿ ಸುರೇಶ್ ಬಾಬು ನೇತೃತ್ವದ ತಂಡ ನಗರ ಸೇರಿದಂತೆ ಜಿಲ್ಲೆಯ ನಾಗಮಂಗಲ ತಾಲೂಕಿನ ಇಜ್ಜಲಘಟ್ಟ ಗ್ರಾಮದ ಮನೆ, ಫಾರ್ಮ್‍ಹೌಸ್, ಕ್ರಷರ್ ಹಾಗೂ ಮೈಸೂರಿನ ಶಿವರಾಜು ಅಳಿಯನ ಮನೆ ಸೇರಿದಂತೆ ವಿವಿಧೆಡೆ ಪರಿಶೀಲನೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೈಸೂರು ನಗರದ ನಜರ್ ಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಸಿ.ಬಡಾವಣೆಯಲ್ಲಿ ನೀರಾವರಿ ಇಲಾಖೆಯ ಇಂಜಿನಿಯರ್ ಕೆ.ಮಹೇಶ್ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಕೆ.ಮಹೇಶ್ ಕಾರ್ಯ ನಿರ್ವಹಿಸುವ ಗೋಕುಲಂನಲ್ಲಿರುವ ಕಾವೇರಿ ನೀರಾವರಿ ನಿಗಮದ ಕಚೇರಿ ಮೇಲೆ ದಾಳಿ ಮಾಡಿ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲನೆ ನಡೆಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ದಾವಣಗೆರೆ ನಗರದಲ್ಲಿ ಕೆಪಿಟಿಸಿಎಲ್ ಕಾರ್ಯನಿರ್ವಾಹಕ ಇಂಜಿನಿಯರ್ ಡಿ.ಎಚ್.ಉಮೇಶ್ ಹಾಗೂ ಎಇಇ ಬೆಸ್ಕಾಂ ಜಾಗೃತದಳ ಇಂಜಿನಿಯರ್ ಎಂ.ಎಸ್.ಪ್ರಭಾಕರ್ ಮನೆ ಹಾಗೂ ಕಚೇರಿಗಳು ಸೇರಿ ಒಟ್ಟು 6 ಕಡೆಗಳಲ್ಲಿ ಲೋಕಾ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಡಿ.ಎಚ್.ಉಮೇಶ್ ಅವರ ದಾವಣಗೆರೆ ನಗರದ ಶಿವಕುಮಾರ ಸ್ವಾಮಿ ಬಡಾವಣೆಯ ಎರಡನೇ ಹಂತದಲ್ಲಿರುವ ಮನೆ ಹಾಗೂ ಹಾಲಿ ಸೇವೆಯಲ್ಲಿ ಇರುವ ಚಿಕ್ಕಮಗಳೂರಿನಲ್ಲೂ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಾವಣಗೆರೆ ಬೆಸ್ಕಾಂ ವಿಜಿಲೆನ್ಸ್ ಅಧಿಕಾರಿ ಎಇಇ ಪ್ರಭಾಕರ್ ಅವರ ದಾವಣಗೆರೆ ನಗರದ ಎಂಸಿಸಿ ಬಿ ಬ್ಲಾಕ್ 13ನೇ ಮೇನ್‍ನಲ್ಲಿರುವ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್.ಕೌಲಾಪೂರೆ ನೇತೃತ್ವದಲ್ಲಿ ಚಿತ್ರದುರ್ಗ, ಹಾವೇರಿ, ಬಳ್ಳಾರಿ ವಿಭಾಗದ ಲೋಕಾಯುಕ್ತ ಅಧಿಕಾರಿಗಳ ಒಟ್ಟು ಆರು ತಂಡಗಳಿಂದ ಏಕಕಾಲಕ್ಕೆ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದಾಳಿಗೊಳಗಾದ ಅಧಿಕಾರಿಗಳ ವಿವರ:

ಬಸವರಾಜ್ ಮಾಗಿ - ಕೆಂಗೇರಿ ಬಿಬಿಎಂಪಿ ರೆವಿನ್ಯೂ ಆಫೀಸರ್, ನಿವೃತ್ತ ಕಾರ್ಯಪಾಲಕ ಅಭಿಯಂತರ.

ಶಿವರಾಜ್ ಎಸ್ - ಕುಡಿಯುವ ನೀರು ಹಾಗೂ ನೈರ್ಮಲ್ಯ ವಿಭಾಗ, ಮಂಡ್ಯ.

ಶೇಖರ್ ಗೌಡ - ಪ್ರಾಜೆಕ್ಟ್ ಮ್ಯಾನೇಜರ್, ಧಾರವಾಡ.

ದುರದುಂಡೇಶ್ವರ ಬನ್ನೂರ - ಅಸಿಸ್ಟೆಂಟ್ ಇಂಜಿನಿಯರ್, ಬೆಳಗಾವಿ.

ಡಿ.ಎಚ್.ಉಮೇಶ್ - ಎಕ್ಸಿಕ್ಯೂಟಿವ್ ಇಂಜಿನಿಯರ್, ದಾವಣಗೆರೆ.

ಎಂ.ಎಸ್.ಪ್ರಭಾಕರ್ - ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್, ದಾವಣಗೆರೆ

ವಿಜಯಣ್ಣ - ಆರೋಹಳ್ಳಿ ತಹಶೀಲ್ದಾರ್.

ಮಹೇಶ್ ಕೆ - ಸೂಪರಿಂಟೆಂಡೆಂಟ್ ಇಂಜಿನಿಯರ್.

ಎಂ.ಎನ್.ಜಗದೀಶ್ - ಗ್ರೇಡ್-1 ಸೆಕ್ರೆಟರಿ, ಹಾಸನ.

ಕೆ.ಜಿ.ಜಗದೀಶ್ - ಸೂಪರಿಂಟೆಂಡೆಂಟ್ ಇಂಜಿನಿಯರ್.

ಎಂ.ರವೀಂದ್ರ- ಚೀಫ್ ಇಂಜಿನಿಯರ್(ನಿವೃತ್ತ) ಲೋಕೋಪಯೋಗಿ ಇಲಾಖೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X