Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಕ್ವಿನ್ ಸಿಟಿ ಯೋಜನೆ ಪರಾಮರ್ಶನಾ ಸಭೆ’...

‘ಕ್ವಿನ್ ಸಿಟಿ ಯೋಜನೆ ಪರಾಮರ್ಶನಾ ಸಭೆ’ ಮಾರ್ಚ್ ಒಳಗೆ ನಿವೇಶನ ಹಂಚಿಕೆ ಗುರಿ : ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ16 Oct 2026 7:55 PM IST
share
‘ಕ್ವಿನ್ ಸಿಟಿ ಯೋಜನೆ ಪರಾಮರ್ಶನಾ ಸಭೆ’ ಮಾರ್ಚ್ ಒಳಗೆ ನಿವೇಶನ ಹಂಚಿಕೆ ಗುರಿ : ಎಂ.ಬಿ.ಪಾಟೀಲ್

ಬೆಂಗಳೂರು : ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಕ್ವಿನ್‍ಸಿಟಿ ಅಭಿವೃದ್ಧಿಯ ವಿಚಾರದಲ್ಲಿ ಮುಂಬರುವ ಫೆಬ್ರವರಿ-ಮಾರ್ಚ್ ವೇಳೆಗೆ ನಿರ್ಣಾಯಕ ಪ್ರಗತಿ ಆಗಬೇಕು. ಇದಕ್ಕೆ ಆಗಬೇಕಾಗಿರುವ ಕೆಲಸಗಳನ್ನು ಕೆಐಎಡಿಬಿ ಸಮರೋಪಾದಿಯಲ್ಲಿ 24/7 ಮಾದರಿಯಲ್ಲಿ ಕೂಡಲೇ ಆರಂಭಿಸಬೇಕು ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಶುಕ್ರವಾರ ನಗರದ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಖನಿಜ ಭವನದಲ್ಲಿ ಅಧಿಕಾರಿಗಳೊಂದಿಗೆ ಕ್ವಿನ್ ಸಿಟಿ ಯೋಜನೆಯ ಪರಾಮರ್ಶನಾ ಸಭೆ ನಡೆಸಿದ ಅವರು, ಪ್ರತೀ 15 ದಿನಗಳಿಗೊಮ್ಮೆ ಯೋಜನೆಯ ಪ್ರಗತಿಗೆ ಸಂಬಂಧಿಸಿದ ವರದಿಯನ್ನು ತಮಗೆ ಕೊಡಬೇಕು ಸೂಚನೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಎಂ.ಬಿ.ಪಾಟೀಲ್, ಕ್ವಿನ್ ಸಿಟಿ ಯೋಜನೆ ನಮ್ಮ ಸರಕಾರದ ಕನಸಿನ ಕೂಸಾಗಿದೆ. ಇದರ ಸಾಕಾರಕ್ಕಾಗಿ ಕೈಗಾರಿಕಾ ಇಲಾಖೆಯು ಪ್ರತ್ಯೇಕ ತಂಡವನ್ನೇ ರಚಿಸಿ, ಇಡೀ ತಂಡದ ಸಿಬ್ಬಂದಿ ಯೋಜನಾ ಪ್ರದೇಶದಲ್ಲೇ ಕಾರ್ಯನಿರತವಾಗಬೇಕು. ಅಂದರೆ ಭೂಸ್ವಾಧೀನ, ಸಂಪರ್ಕ ರಸ್ತೆ, ಚರಂಡಿ ಇತ್ಯಾದಿಗಳಿಗೆ ಸಂಬಂಧಿಸಿದಂತೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಎಂ.ಬಿ.ಪಾಟೀಲ್ ಸೂಚಿಸಿದ್ದಾರೆ.

ಕ್ವಿನ್ ಸಿಟಿ ಪ್ರದೇಶಕ್ಕೆ ಜಾಗತಿಕ ಮಟ್ಟದ ಉದ್ದಿಮೆಗಳು, ವಿಶ್ವವಿದ್ಯಾಲಯಗಳು, ಕಾನೂನು ಶಾಲೆಗಳು, ಐಐಎಸ್ಸಿ ತರಹದ ಸಂಸ್ಥೆಗಳು, ಸಂಶೋಧನಾ ಸಂಸ್ಥೆಗಳು, ಆಸ್ಪತ್ರೆಗಳು, ನಾವೀನ್ಯತಾ ಸಂಸ್ಥೆಗಳು, ನವೋದ್ಯಮಗಳು ಬಂದು ಹೂಡಿಕೆ ಮಾಡಲಿವೆ. ಅಂದ ಮೇಲೆ ನಾವು ಇಲ್ಲಿ ಒದಗಿಸುವ ಸೌಕರ್ಯಗಳು ಕೂಡ ವಿಶ್ವದರ್ಜೆಯದೇ ಆಗಿರಬೇಕು. ಆದುದರಿಂದ, ಯೋಜನೆಯ ವಿನ್ಯಾಸ ಸಂಸ್ಥೆಯ ಜತೆ ಸಮನ್ವಯ ಸಾಧಿಸಬೇಕು ಎಂದು ಅವರು ಸೂಚಿಸಿದ್ದಾರೆ.

ಇಲ್ಲಿಗೆ ಬರುವ ಹೂಡಿಕೆದಾರರಿಗೆ ಉತತ್ಕೃ ಷ್ಟ ವಸತಿ ಸೌಕರ್ಯ, ಕಾಮನ್ ಫೆಸಿಲಿಟಿ ಸೆಂಟರ್, ಕ್ರೀಡಾ ಸಂಕೀರ್ಣ, ಸಂಪರ್ಕ ರಸ್ತೆಗಳು, ಉದ್ಯಾನ, ವಿದ್ಯುತ್ ಸಂಪರ್ಕ ಮುಂತಾದ ಮೂಲಸೌಕರ್ಯಗಳನ್ನು ಕೊಡಬೇಕಾಗಿದೆ. ಇವುಗಳನ್ನು ಸಮರೋಪಾದಿಯಲ್ಲಿ ಮುಗಿಸಲು ಅಗತ್ಯವೆನಿಸಿದರೆ ಮತ್ತೊಂದು ಮುಖ್ಯ ಇಂಜಿನಿಯರ್ ಹುದ್ದೆಯನ್ನು ಸೃಷ್ಟಿಸಲಾಗುವುದು ಎಂದು ಎಂ.ಬಿ.ಪಾಟೀಲ್ ವಿವರಿಸಿದ್ದಾರೆ.

ಒಟ್ಟಾರೆ ಯೋಜನೆಯು 5 ಸಾವಿರ ಎಕರೆ ಪ್ರದೇಶದಲ್ಲಿ ಜಾರಿಗೆ ಬರಲಿದೆ. ಇಲ್ಲಿಗೆ ಬರುವವರಲ್ಲಿ ಕೆಲವರು ಅವರೇ ತಮ್ಮ ಕಟ್ಟಡಗಳನ್ನು ನಿರ್ಮಿಸಿಕೊಳ್ಳಬಹುದು. ಇನ್ನು ಕೆಲವರು ಬಿಲ್ಡ್-ಟು-ಸೂಟ್ ಮಾದರಿಯ ವ್ಯವಸ್ಥೆಯನ್ನು ಬಯಸಬಹುದು. ಮತ್ತೆ ಕೆಲವರು ನಿರ್ಮಾಣ ಸಂಸ್ಥೆಗಳ ಜತೆ ಒಡಂಬಡಿಕೆ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು. ಕೆಐಎಡಿಬಿ ಇವೆಲ್ಲಕ್ಕೂ ಸಿದ್ಧವಾಗಿರಬೇಕು. ಒಟ್ಟಿನಲ್ಲಿ ಐದು ತಿಂಗಳಲ್ಲಿ ಗರಿಷ್ಠ ಮಟ್ಟದ ಪ್ರಗತಿಯನ್ನು ಸಾಧಿಸಲೇಬೇಕು ಎಂದು ಅವರು ಗುರಿ ನಿಗದಿಪಡಿಸಿದ್ದಾರೆ.

ಹೂಡಿಕೆದಾರರಿಗೆ ಯೋಜನೆಯ ವೈಶಿಷ್ಟ್ಯವನ್ನು ಮನದಟ್ಟು ಮಾಡಿಕೊಟ್ಟು, ತ್ವರಿತವಾಗಿ ಅವರಿಗೆ ನಿವೇಶನ ಒದಗಿಸಬೇಕು. ನಿಧಾನ ಮಾಡಿದರೆ ಬಂಡವಾಳ ಹೂಡುವವರು ಬೇರೆ ಕಡೆಗೆ ಹೋಗುತ್ತಾರೆ. ಎರಡನೆಯ ಹಂತದ ಕೆಲಸಗಳನ್ನು ಕೂಡ ಬೇಗನೆ ಕೈಗೆತ್ತಿಕೊಳ್ಳಬೇಕು. ಒಟ್ಟಾರೆಯಾಗಿ ಇಲ್ಲಿ 50 ಸಾವಿರ ಕೋಟಿ ರೂಪಾಯಿ ಬಂಡವಾಳ ಹರಿದು ಬರುವಂತೆ ಎಲ್ಲರೂ ಶ್ರಮಿಸಬೇಕು ಎಂದು ಎಂ.ಬಿ.ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಭೆಯಲ್ಲಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಖುಷ್ಬೂ ಗೋಯೆಲ್, ಕೈಗಾರಿಕಾ ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ, ಕೆಐಎಡಿಬಿ ಸಿಇಒ ಗೋವಿಂದ ರೆಡ್ಡಿ, ವಿಶೇಷ ಜಿಲ್ಲಾಧಿಕಾರಿ ರಘುನಂದನ್, ಮುಖ್ಯ ಇಂಜಿನಿಯರ್ ವೀರಭದ್ರಯ್ಯ ಉಪಸ್ಥಿತರಿದ್ದರು.

Tags

M. B. Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X