Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕನ್ನಡ ಸಾಹಿತ್ಯ ಪರಿಷತ್ ನಿಬಂಧನೆ...

ಕನ್ನಡ ಸಾಹಿತ್ಯ ಪರಿಷತ್ ನಿಬಂಧನೆ ತಿದ್ದುಪಡಿ | ಉಪಸಮಿತಿಯ ಶಿಫಾರಸಿನಂತೆ ಕ್ರಮ : ಮಹೇಶ್ ಜೋಶಿ

ವಾರ್ತಾಭಾರತಿವಾರ್ತಾಭಾರತಿ15 May 2025 11:43 PM IST
share
ಕನ್ನಡ ಸಾಹಿತ್ಯ ಪರಿಷತ್ ನಿಬಂಧನೆ ತಿದ್ದುಪಡಿ | ಉಪಸಮಿತಿಯ ಶಿಫಾರಸಿನಂತೆ ಕ್ರಮ : ಮಹೇಶ್ ಜೋಶಿ

ಬೆಂಗಳೂರು : ಕಸಾಪ ಸ್ಥಾಪನೆಯಾದಾಗಿನಿಂದಲೂ ನಿಬಂಧನೆ ತಿದ್ದುಪಡಿ ಆಗುತ್ತಿದೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎಸ್.ಪಾಚ್ಚಾಪುರೆ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ‘ನಿಬಂಧನೆ ತಿದ್ದುಪಡಿ ಸಲಹಾ ಉಪಸಮಿತಿ’ಯ ಶಿಫಾರಸಿನ ಅನುಸಾರ ಈಗ ಬೈಲಾ ತಿದ್ದುಪಡಿ ಮಾಡಲಾಗುತ್ತಿದೆ ಎಂದು ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಶಿ ತಿಳಿಸಿದ್ದಾರೆ.

ಗುರುವಾರ ನಗರದ ಚಾಮರಾಜಪೇಟೆಯಲ್ಲಿರುವ ಕಸಾಪದ ಪಂಪ ಸಭಾಂಗಣದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕನ್ನಡ ಸಾಹಿತ್ಯ ಪರಿಷತ್‌ನ ವಿಚಾರದಲ್ಲಿ ರಾಜಕೀಯ ಹಸ್ತಕ್ಷೇಪಕ್ಕೆ ಅವಕಾಶವಿಲ್ಲ. ಕಸಾಪದ ಕಾರ್ಯಚಟುವಟಿಕೆಗಳ ಕುರಿತು ಯಾವುದೇ ಭಿನ್ನಾಭಿಪ್ರಾಯಗಳಿದ್ದರೆ ಚರ್ಚೆಯ ಮೂಲಕ ಬಗೆಹರಿಸಿಕೊಳ್ಳಿ ಎಂದು ಹೇಳಿದರು.

ಪರಿಷತ್‌ನ ಘನತೆ, ಗೌರವಗಳನ್ನು ಎತ್ತಿ ಹಿಡಿಯುವ ಜೊತೆಗೆ ಸಮಕಾಲೀನ ಸವಾಲುಗಳಿಗೆ ಸ್ಪಂದಿಸುವ ಉದ್ದೇಶದೊಂದಿಗೆ ಬೈಲಾ ತಿದ್ದುಪಡಿ ಮಾಡಲಾಗುತ್ತಿದೆ. ಸರ್ವಾಧಿಕಾರಿಯಾಗಲು, ಪರಮಾಧಿಕಾರ ಪಡೆಯಲು ಈ ತಿದ್ದುಪಡಿ ಮಾಡುತ್ತಿಲ್ಲ. ಕೆಲವರು ಅನಗತ್ಯವಾಗಿ ಆರೋಪ ಮಾಡುತ್ತಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.

ಸಮಾನ ಮನಸ್ಕರ ವೇದಿಕೆಯಡಿ ಉದ್ದೇಶಪೂರ್ವಕ ಹಾಗೂ ಪೂರ್ವಗ್ರಹಪೀಡಿತರಾಗಿ ಕಸಾಪ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಾ, ಕಸಾಪದ ವಿರುದ್ಧ ಪ್ರತಿಭಟನಾ ಸಭೆ ನಡೆಸಲಾಗುತ್ತಿದೆ. ಈ ವೇದಿಕೆಯ ಪ್ರತಿಭಟನಾ ಸಭೆಯಲ್ಲಿ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಪಾಲ್ಗೊಂಡಿದ್ದರು. ರಾಜಕಾರಣಿಯಾದ ಅವರು ಈ ರೀತಿ ಪರಿಷತ್‌ನ ವಿಚಾರದಲ್ಲಿ ಹಸ್ತಕ್ಷೇಪ ಮಾಡಿದ್ದು ಸರಿಯಲ್ಲ ಎಂದು ಅವರು ಆಕ್ಷೇಪಿಸಿದರು.

ಕನ್ನಡ ಸಾಹಿತ್ಯ ಪರಿಷತ್ ವಿಚಾರದಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಿದರೆ, ಕಾರ್ಯಕಾರಿ ಸಮಿತಿ ಜತೆಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು. ಕಸಾಪದ ಧ್ಯೇಯೋದ್ದೇಶಗಳ ಅನುಷ್ಠಾನಕ್ಕಾಗಿ, ವಿವಿಧ ಕಾರ್ಯಕಲಾಪಗಳನ್ನು ಸುಸೂತ್ರವಾಗಿ ನಡೆಸಲು ಉಪ ಸಮಿತಿಯೊಂದನ್ನು ರಚನೆ ಮಾಡಲಾಗಿದೆ. ನಾಡಿನ ಚಿಂತಕರು, ಕನ್ನಡಿಗರೊಂದಿಗೆ ಸಮಾಲೋಚನೆ ನಡೆಸಲು, ವಾಸ್ತವಿಕತೆ ಮನವರಿಕೆ ಮಾಡಲು ಈ ಉಪ ಸಮಿತಿ ಸಹಕಾರಿಯಾಗಲಿದೆ. ಅದರಲ್ಲಿ ಕಸಾಪ ವಿವಿಧ ಜಿಲ್ಲಾ ಘಟಕಗಳ ಅಧ್ಯಕ್ಷರು ಇರಲಿದ್ದು, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪರಿಷತ್ ಬಗ್ಗೆ ನಿಖರ ಮಾಹಿತಿಗಳನ್ನು ಪ್ರಚಾರ ಮಾಡಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕಸಾಪದ ಗೌರವ ಕಾರ್ಯದರ್ಶಿ ಡಾ.ಪದ್ಮಿನಿ ನಾಗರಾಜು, ನೇ.ಭ.ರಾಮಲಿಂಗಶೆಟ್ಟಿ, ಗೌರವ ಕೋಶಾಧ್ಯಕ್ಷ ಬಿ.ಎಂ.ಪಟೇಲ್ ಪಾಂಡು, ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಮಲ್ಲೇಶಗೌಡ, ಡಾ.ಎಚ್.ಎಸ್.ಮುದ್ದೇಗೌಡ, ಸುನೀಲ್ ಯಳವಾರ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X