ಬೆಂಗಳೂರು| ಗಣಪತಿ ವಿಸರ್ಜನಾ ವೇಳೆ ಜಗಳ: ಓರ್ವನ ಹತ್ಯೆ

ಸಾಂದರ್ಭಿಕ ಚಿತ್ರ
ಬೆಂಗಳೂರು: ಗಣಪತಿ ವಿಸರ್ಜನಾ ವೇಳೆಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಜಗಳದಲ್ಲಿ ಓರ್ವ ಹತ್ಯೆಗೈದಿರುವ ಘಟನೆ ಇಲ್ಲಿನ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಆಡುಗೋಡಿಯ ಶ್ರೀನಿವಾಸ್ ಕೊಲೆಯಾದವರು. ಗಣಪತಿ ವಿಸರ್ಜಿಸುವಾಗ ನೃತ್ಯ ಮಾಡುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾತಿಗೆ ಮಾತು ಬೆಳೆದು ಜಗಳ ಉಂಟಾಗಿ ವಿಕೋಪಕ್ಕೆ ತಿರುಗಿ ಮಾರಕಾಸ್ತ್ರಗಳಿಂದ ಹೊಡೆದಾಟ ನಡೆದಿದೆ ಎನ್ನಲಾಗಿದೆ.
ಗಲಾಟೆಯಲ್ಲಿ ರಂಜಿತ್ ಎಂಬವನಿಗೂ ಗಂಭೀರ ಗಾಯಗಳಾಗಿದ್ದು, ಆತನನ್ನು ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಗಲಾಟೆ ಬಿಡಿಸಲು ಬಂದ ಶ್ರೀನಿವಾಸ್ ತಾಯಿಗೂ ಚಾಕುವಿನಿಂದ ಇರಿಯಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಸಂದರ್ಭದಲ್ಲಿ ಓರ್ವ ರೌಡಿಶೀಟರ್ ಇರುವ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಸಂಬಂಧ ಅಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗೆ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Next Story





