Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ವರ್ಗಾವಣೆಯಾಗುವ ರಾಜ್ಯ ಸರಕಾರಿ ನೌಕರರಿಗೆ...

ವರ್ಗಾವಣೆಯಾಗುವ ರಾಜ್ಯ ಸರಕಾರಿ ನೌಕರರಿಗೆ ಸ್ಥಳ ನಿಯುಕ್ತಿ ಕಡ್ಡಾಯ: ಆದೇಶ

ವಾರ್ತಾಭಾರತಿವಾರ್ತಾಭಾರತಿ10 July 2026 2:49 PM IST
share
ವರ್ಗಾವಣೆಯಾಗುವ ರಾಜ್ಯ ಸರಕಾರಿ ನೌಕರರಿಗೆ ಸ್ಥಳ ನಿಯುಕ್ತಿ ಕಡ್ಡಾಯ: ಆದೇಶ

ಬೆಂಗಳೂರು: ಯಾವುದೇ ಅಧಿಕಾರಿ ಅಥವಾ ನೌಕರರನ್ನು ವರ್ಗಾವಣೆ ಮಾಡುವಾಗ ಮುಂದಿನ ಹುದ್ದೆ (Next Posting) ಸೂಚಿಸದೆ ವರ್ಗಾವಣೆ ಮಾಡಬಾರದು ಎಂದು ಸರಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸುತ್ತೋಲೆ ಹೊರಡಿಸಿದೆ.

ರಾಜ್ಯ ಸರಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆಯಲ್ಲಿ ಉಂಟಾಗುತ್ತಿದ್ದ ಗೊಂದಲಗಳಿಗೆ ತೆರೆ ಎಳೆಯುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಈ ಹೊಸ ಮಾರ್ಗಸೂಚಿ ಹೊರಡಿಸಿದೆ.

ಅಬಕಾರಿ ಉಪ ಆಯುಕ್ತ ಕೆ. ಅರುಣ್ ಕುಮಾರ್ ಅವರ ಪ್ರಕರಣದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯ ನೀಡಿದ ತೀರ್ಪಿನ ಹಿನ್ನೆಲೆಯಲ್ಲಿ, ಯಾವುದೇ ನೌಕರರನ್ನು ಸ್ಥಳ ನಿಯುಕ್ತಿ ನೀಡದೆ ಕಡ್ಡಾಯ ನಿರೀಕ್ಷಣೆಯಲ್ಲಿಡುವುದು ನ್ಯಾಯಾಲಯದ ನಿರ್ದೇಶನಕ್ಕೆ ವಿರುದ್ಧವೆಂದು ಸರಕಾರ ಸ್ಪಷ್ಟಪಡಿಸಿದೆ.

ಈ ತೀರ್ಪು ಆಡಳಿತಾತ್ಮಕ ವ್ಯವಸ್ಥೆಯಲ್ಲಿನ ಪ್ರಮುಖ ಬದಲಾವಣೆಗೆ ಕಾರಣವಾಗಿದೆ. ಇದುವರೆಗೆ ಕೆಲ ಸಂದರ್ಭಗಳಲ್ಲಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ನಂತರ ತಕ್ಷಣ ಸ್ಥಳ ನಿಯುಕ್ತಿ ನೀಡದೆ ನಿರೀಕ್ಷಣೆಯಲ್ಲಿಡಲಾಗುತ್ತಿತ್ತು. ಇದರಿಂದ ನೌಕರರ ಹಕ್ಕುಗಳಿಗೆ ಧಕ್ಕೆಯಾಗುತ್ತಿತ್ತು ಮತ್ತು ಆಡಳಿತಾತ್ಮಕ ಕಾರ್ಯಚಟುವಟಿಕೆಗಳಲ್ಲಿ ವಿಳಂಬ ಉಂಟಾಗುತ್ತಿತ್ತು. ಹೊಸ ಮಾರ್ಗಸೂಚಿಯ ಪ್ರಕಾರ, ಸಾಮಾನ್ಯವಾಗಿ ಯಾವುದೇ ಅಧಿಕಾರಿ ಅಥವಾ ನೌಕರರನ್ನು ವರ್ಗಾವಣೆ ಮಾಡುವಾಗ ಮುಂದಿನ ಹುದ್ದೆ (Next Posting) ಸೂಚಿಸದೆ ವರ್ಗಾವಣೆ ಮಾಡಬಾರದು. ಇದು ನೌಕರರ ಹಕ್ಕುಗಳನ್ನು ರಕ್ಷಿಸುವುದರ ಜೊತೆಗೆ ಆಡಳಿತಾತ್ಮಕ ಸ್ಪಷ್ಟತೆಯನ್ನು ಹೆಚ್ಚಿಸುತ್ತದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಕಾನೂನು ಸಂಬಂಧಿತ ಸಮಸ್ಯೆಗಳು, ಅಮಾನತು, ಹಣದ ದುರ್ಬಳಕೆ, ಅಧಿಕಾರ ದುರುಪಯೋಗ, ಗಂಭೀರ ಇಲಾಖಾ ವಿಚಾರಣೆಗಳಂತಹ ಪ್ರಕರಣಗಳಲ್ಲಿ ಮಾತ್ರ ತಕ್ಷಣ ಸ್ಥಳ ನಿಯುಕ್ತಿ ನೀಡಲು ಸಾಧ್ಯವಾಗದಿದ್ದರೆ, ಗರಿಷ್ಠ ಒಂದು ತಿಂಗಳಿಗಿಂತ ಹೆಚ್ಚು ಕಾಲ ಕಡ್ಡಾಯ ನಿರೀಕ್ಷಣೆಯಲ್ಲಿಡಬಾರದು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ಅತ್ಯಂತ ಅನಿವಾರ್ಯ ಪರಿಸ್ಥಿತಿಯಲ್ಲಿ ಮಾತ್ರ, ಸೂಕ್ತ ಕಾರಣಗಳನ್ನು ಲಿಖಿತವಾಗಿ ದಾಖಲಿಸಿ, ಮುಖ್ಯಮಂತ್ರಿಯವರ ಪೂರ್ವಾನುಮೋದನೆ ಪಡೆದು ಗರಿಷ್ಠ ಮೂರು ತಿಂಗಳವರೆಗೆ ಕಡ್ಡಾಯ ನಿರೀಕ್ಷಣೆಯಲ್ಲಿಡಬಹುದು. ಇದು ಆಡಳಿತಾತ್ಮಕ ನಿರ್ಧಾರಗಳಿಗೆ ರಾಜಕೀಯ ಮತ್ತು ಕಾನೂನುಮಟ್ಟದ ಹೊಣೆಗಾರಿಕೆಯನ್ನು ಹೆಚ್ಚಿಸುತ್ತದೆ. ಈ ಆದೇಶವು ನೌಕರರ ಹಕ್ಕುಗಳನ್ನು ಕಾಪಾಡುವ ಜೊತೆಗೆ, ಇಲಾಖೆಗಳ ಕಾರ್ಯನಿರ್ವಹಣೆಯಲ್ಲಿ ಶಿಸ್ತನ್ನು ತರಲು ಸಹಾಯಕವಾಗಲಿದೆ. ವರ್ಗಾವಣೆ ಪ್ರಕ್ರಿಯೆಯಲ್ಲಿ ಉಂಟಾಗುವ ಅಸ್ಪಷ್ಟತೆಗಳನ್ನು ನಿವಾರಿಸಿ, ನೌಕರರಿಗೆ ನ್ಯಾಯ ದೊರಕುವಂತೆ ಮಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

Tags

Mandatory PostingState Government Employees
share
ವಾರ್ತಾಭಾರತಿ
ವಾರ್ತಾಭಾರತಿ
Next Story
X