Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Mandya | ಕೈಗಾರಿಕೆಗೆ ಭೂಮಿ ನೀಡಲು ರೈತರ...

Mandya | ಕೈಗಾರಿಕೆಗೆ ಭೂಮಿ ನೀಡಲು ರೈತರ ವಿರೋಧ: ಸಭೆ ಬಹಿಷ್ಕರಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ24 April 2026 12:14 AM IST
share
Mandya | ಕೈಗಾರಿಕೆಗೆ ಭೂಮಿ ನೀಡಲು ರೈತರ ವಿರೋಧ: ಸಭೆ ಬಹಿಷ್ಕರಿಸಿ ಪ್ರತಿಭಟನೆ

ಮಂಡ್ಯ : ಕೈಗಾರಿಕಾ ಪ್ರದೇಶಾಭಿವೃದ್ಧಿಗಾಗಿ ತಮ್ಮ ಭೂಮಿಯನ್ನು ಕೊಡುವುದಿಲ್ಲವೆಂದು ಮದ್ದೂರು ತಾಲೂಕಿನ ಗೆಜ್ಜಲಗೆರೆ, ಕುದುರಗುಂಡಿ ಹಾಗೂ ಮಂಡ್ಯ ತಾಲೂಕಿನ ನೊದೆಕೊಪ್ಪಲು ಗ್ರಾಮಗಳ ರೈತರು ಸಭೆಯನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ ಘಟನೆ ಗುರುವಾರ ನಡೆಯಿತು.

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ಸದರಿ ಗ್ರಾಮಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಗೊಂಡಿದ್ದು, ಈ ಬಗ್ಗೆ ರೈತರಿಂದ ಅಹವಾಲು ಹಾಗೂ ಅಭಿಪ್ರಾಯ ಕೇಳಲು ಜಿಲ್ಲಾಧಿಕಾರಿ ಡಾ.ಕುಮಾರ ಅವರ ಅಧ್ಯಕ್ಷತೆಯಲ್ಲಿ ಜಿಪಂ ಸಭಾಂಗಣದಲ್ಲಿ ಸಭೆ ಕರೆಯಲಾಗಿತ್ತು.

ಭೂಮಿಗೆ ನೀಡಲಾಗುವ ಪರಿಹಾರದ ಮೊತ್ತದ ಬಗ್ಗೆ ರೈತರಲ್ಲಿ ಅಸಮಾಧಾನವಿದ್ದರೆ ಹೆಚ್ಚು ಪರಿಹಾರ ನೀಡುವಂತೆ ಮನವಿ ಸಲ್ಲಿಸಬಹುದು. ಈ ಮನವಿಯನ್ನು ಸರಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸಭೆಗೆ ತಿಳಿಸಿದರು. ಆದರೆ, ಇದಕ್ಕೆ ಬಹುತೇಕ ರೈತರು ವಿರೋಧ ವ್ಯಕ್ತಪಡಿಸಿದರು.

ಪ್ರಾಂತ ರೈತಸಂಘದ ಜಿಲ್ಲಾ ಸಂಚಾಲಕ ಎನ್.ಎಲ್.ಭರತ್‌ರಾಜ್ ಮಾತನಾಡಿ, ಕುದುರಗುಂಡಿ ಕಾಲನಿಯಲ್ಲಿ ವಲಸೆ ಕೂಲಿಕಾರರು, ದಲಿತರು ವಾಸಿಸುತ್ತಿದ್ದು, ಸರಕಾರ ನೀಡಿದ ಭೂಮಿಯಲ್ಲಿ ಜೀವನ ಸಾಗಿಸುತ್ತಿದ್ದಾರೆ. ಈ ಜಮೀನು ನಿವಾಸಿಗಳಿಗೆ ಜೀವನಾಧಾರ. ರೈತರ ಗಮನಕ್ಕೂ ತಾರದೆ 2001ರಲ್ಲಿ ಮತ್ತು 2021ರಲ್ಲಿ ಭೂ ಸ್ವಾಧೀನಕ್ಕೆ ಏಕಾಏಕಿ ಅಧಿಸೂಚನೆ ಹೊರಡಿಸಲಾಗಿದೆ. ಈಗ 25 ವರ್ಷಗಳ ನಂತರ ನೊಟೀಸ್ ನೀಡಲಾಗಿದೆ. ಇದರಲ್ಲಿ ಕೆಲವು ಪ್ರಭಾವಿಗಳ ಕೈವಾಡ ಅಡಗಿದ್ದು ಭೂಕಬಳಿಕೆಯ ಹುನ್ನಾರವಾಗಿದೆ ಎಂದು ಆರೋಪಿಸಿದರು. ಸಭೆಯಲ್ಲಿ ಬೆಂಗಳೂರಿನ ವಿಶೇಷ ಭೂ ಸ್ವಾಧೀನ ಅಧಿಕಾರಿ ಎ.ಎನ್.ರಘುನಂದನ್, ಜಿಲ್ಲಾ ಕೈಗಾರಿಕೆ ಇಲಾಖೆಯ ಉಪ ನಿರ್ದೇಶಕ ದಿನೇಶ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಕೆಐಎಡಿಬಿಯವರು ಕುದುರಗುಂಡಿ ಕಾಲನಿಯ ಬಡ ದಲಿತರ ಭೂಮಿ ಕಸಿದುಕೊಳ್ಳಲು ಹೊರಟಿರುವುದು ಖಂಡನೀಯ. ನ್ಯಾಯಾಲಯದಲ್ಲಿ ಈ ವಿಷಯಕ್ಕೆ ಸಂಬಂಧಿಸಿ ತಡೆಯಾಜ್ಞೆ ಇದೆ. ಇಂತಹ ಸಂದರ್ಭಗಳಲ್ಲಿ ಭೂಮಿ ಕಿತ್ತುಕೊಳ್ಳುವ ಪ್ರಯತ್ನ ಮಾಡುತ್ತಿರುವುದು ಕಾನೂನು ಉಲ್ಲಂಘನೆ.

-ಎನ್.ಎಲ್.ಭರತ್‌ರಾಜ್, ಪ್ರಾಂತ ರೈತಸಂಘದ ಜಿಲ್ಲಾ ಸಂಚಾಲಕ

Tags

Mandya
share
ವಾರ್ತಾಭಾರತಿ
ವಾರ್ತಾಭಾರತಿ
Next Story
X