Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಿಜೆಪಿ-ಸಂಘ ಪರಿವಾರದವರೂ ಭೂಮಿ...

ಬಿಜೆಪಿ-ಸಂಘ ಪರಿವಾರದವರೂ ಭೂಮಿ ಹಿಂದಿರುಗಿಸುವರೇ? : ಮಂಜುನಾಥ್ ಭಂಡಾರಿ

ವಾರ್ತಾಭಾರತಿವಾರ್ತಾಭಾರತಿ14 Oct 2024 10:35 PM IST
share
ಬಿಜೆಪಿ-ಸಂಘ ಪರಿವಾರದವರೂ ಭೂಮಿ ಹಿಂದಿರುಗಿಸುವರೇ? : ಮಂಜುನಾಥ್ ಭಂಡಾರಿ

ಬೆಂಗಳೂರು : ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ನಿಯಮಾನುಸಾರ ಹಂಚಿಕೆಯಾಗಿದ್ದ 5 ಎಕರೆ ಜಮೀನನ್ನು ಸರಕಾರಕ್ಕೆ ಹಿಂದಿರುಗಿಸುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ರ ರಾಹುಲ್ ಖರ್ಗೆ ಇತರರಿಗೆ ಆದರ್ಶರಾಗಿದ್ದಾರೆ. ಈಗ ಬಿಜೆಪಿ ಮತ್ತು ಆರೆಸ್ಸೆಸ್‍ನವರು ತಮಗೆ ಹಂಚಿಕೆಯಾಗಿದ್ದ ಜಮೀನು ಮತ್ತು ನಿವೇಶನಗಳನ್ನು ಹಿಂದುರುಗಿಸುವ ಮೂಲಕ ಆದರ್ಶರಾಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ತಿಳಿಸಿದ್ದಾರೆ.

ಸೋಮವಾರ ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, 5 ದಶಕಗಳಿಗೂ ಅಧಿಕ ಕಾಲ ಪರಿಶುದ್ಧ ರಾಜಕೀಯ ಜೀವನ ನಡೆಸಿಕೊಂಡು ಬಂದಿರುವ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ವಿರುದ್ಧ ಇಲ್ಲಸಲ್ಲದ ಆರೋಪ ಕೇಳಿಬರುತ್ತಿದ್ದಂತೆ ರಾಹುಲ್ ಖರ್ಗೆ, ನ್ಯಾಯಬದ್ಧವಾಗಿ ಲಭ್ಯವಾಗಿರುವ ಜಮೀನನ್ನು ಹಿಂದಿರುಗಿಸಿ ಮೇಲ್ಪಂಕ್ತಿ ಹಾಕಿದ್ದಾರೆ ಎಂದು ಹೇಳಿದ್ದಾರೆ.

ಹೀಗಾಗಿ ಪ್ರತಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಕೆಲಸವನ್ನು ಮಾಡಬಾರದು. ಅಲ್ಲದೆ ಉದ್ದೇಶ ಪೂರ್ವಕವಾಗಿ ವಿವಾದಕ್ಕೆ ಸಿಲುಕಿಸುವ ಪ್ರಯತ್ನವನ್ನು ಮಾಡುತ್ತಿರುವ ಪ್ರತಿಪಕ್ಷಗಳು ಇನ್ನು ಮುಂದಾದರೂ ಇಂಥ ಕೃತ್ಯದಿಂದ ಹಿಂದೆ ಸರಿಯಬೇಕು ಎಂದು ಮಂಜುನಾಥ ಭಂಡಾರಿ ಆಗ್ರಹಿಸಿದ್ದಾರೆ.

ವಿಧಾನಪರಿಷತ್ ನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಶಿಕ್ಷಣ ಸಂಸ್ಥೆ ಸ್ಥಾಪಿಸುವುದಾಗಿ ಗೃಹ ಮಂಡಳಿಯಿಂದ ಸಿಎ ನಿವೇಶನ ಪಡೆದು ಈಗ ಆ ಜಾಗದಲ್ಲಿ ಬಿರಿಯಾನಿ ಹೋಟೆಲ್ ನಡೆಸುತ್ತಿದ್ದಾರೆ. ಈಗ ನಾರಾಯಣಸ್ವಾಮಿ ಆ ಜಮೀನನನ್ನು ವಾಪಸ್ ಮಾಡಿ ರಾಹುಲ್ ಖರ್ಗೆ ಅವರಂತೆ ಆದರ್ಶರಾಗುತ್ತಾರಾ? ಎಂದು ಅವರು ಪ್ರಶ್ನಿಸಿದ್ದಾರೆ.

ಬಿಜೆಪಿ ಸರಕಾರದ ಆಡಳಿತಾವಧಿಯಲ್ಲಿ ಚಾಣಕ್ಯ ವಿವಿಗೆ ದೇವನಹಳ್ಳಿ ಸಮೀಪದ ಕೈಗಾರಿಕಾ ಪ್ರದೇಶದಲ್ಲಿ 116 ಎಕರೆ ಭೂಮಿಯನ್ನು ಕೇವಲ 50 ಕೋಟಿ ರೂ.ಗೆ ಹಂಚಿಕೆ ಮಾಡಲಾಗಿತ್ತು. ಇದರಿಂದ ಸರಕಾರದ ಬೊಕ್ಕಸಕ್ಕೆ ಸುಮಾರು 137 ಕೋಟಿ ರೂ. ನಷ್ಟವಾಗಿದೆ. ಈಗ ಆ ಜಮೀನನ್ನು ಆರೆಸ್ಸೆಸ್ ನವರು ವಾಪಸ್ ಮಾಡುವ ಮೂಲಕ ಆದರ್ಶ ತೋರಿಸಲಿ ಎಂದು ಮಂಜುನಾಥ ಭಂಡಾರಿ ಆಗ್ರಹಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಬಳ್ಳಾರಿಯ ಕುವೆಂಪು ನಗರದ ಬಡಾವಣೆಯಲ್ಲಿ ನಾಗರಿಕ ಸೌಲಭ್ಯಕ್ಕೆ (ಸಿಎ) ಮೀಸಲಿಟ್ಟಿರುವ ಕೋಟ್ಯಾಂತರ ರೂ. ಬೆಲೆಬಾಳುವ ನಿವೇಶನವನ್ನು ರಾಷ್ಟ್ರೋತ್ಥಾನ ಪರಿಷತ್‍ಗೆ ಶೇ.25ರ ದರದಲ್ಲಿ 30 ವರ್ಷಗಳಿಗೆ ಗುತ್ತಿಗೆ ನೀಡಲಾಗಿತ್ತು. ಇದರಿಂದ ಸರಕಾರಕ್ಕೆ 7.50 ಕೋಟಿ ರೂ. ನಷ್ಟವಾಗಿದೆ. ಈಗ ರಾಷ್ಟ್ರೋತ್ಥಾನ ಪರಿಷತ್ ನವರು ಸಹ ಭೂಮಿಯನ್ನು ಹಿಂದಿರುಗಿಸುವರೇ? ಎಂದು ಅವರು ಪ್ರಶ್ನಿಸಿದ್ದಾರೆ.

ಬಿಜೆಪಿ ಮತ್ತು ಸಂಘ ಪರಿವಾರದವರು ರಾಜ್ಯದ ವಿವಿಧೆಡೆಯಲ್ಲಿನ ಗೋಮಾಳ ಜಾಗವನ್ನು ಮಾರುಕಟ್ಟೆ ದರಕ್ಕಿಂತ ಚಿಲ್ಲರೆ ದರಕ್ಕೆ ಮಂಜೂರು ಮಾಡಿಸಿಕೊಂಡಿದ್ದಾರೆ. ಈಗ ಆ ಎಲ್ಲ ಜಾಗವನ್ನು ಸರಕಾರಕ್ಕೆ ಹಿಂದಿರುಗಿಸುವ ಮೂಲಕ ಬಿಜೆಪಿ ನಾಯಕರು ಮತ್ತು ಆರೆಸ್ಸೆಸ್ ನವರು ತಮ್ಮ ಆದರ್ಶತೆಯನ್ನು ತೋರಿಸುತ್ತಾರಾ? ಎಂದು ಮಂಜುನಾಥ ಭಂಡಾರಿ ಕೇಳಿದ್ದಾರೆ.

ನಿರುದ್ಯೋಗಿಗಳಿಗೆ ತರಬೇತಿ ಮತ್ತು ಸಂಶೋಧನಾ ಕೇಂದ್ರಕ್ಕಾಗಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪಿಸಲು ನೀವೇಶನ ಪಡೆಯಲಾಗಿತ್ತು. ಸಿದ್ಧಾರ್ಥ ವಿಹಾರ ಟ್ರಸ್ಟ್ ಜಮೀನನ್ನು ಕಾನೂನು ಬದ್ಧವಾಗಿ ಪೂರ್ತಿ ಹಣ ನೀಡಿ ಪಡೆಯಲಾಗಿದ್ದರೂ ಸುಳ್ಳು ಅಪಪ್ರಚಾರಕ್ಕೆ ಸಿಲುಕಬಾರದು ಎಂಬ ಕಾರಣಕ್ಕೆ ವಾಪಸ್ ನೀಡಿದ್ದಾರೆ. ವಾಪಸ್ ಕೊಡುವ ಮೂಲಕ ರಾಹುಲ್ ಖರ್ಗೆ ಬೇರೆಯವರಿಗೆ ಆದರ್ಶವಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X