Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎಚ್ಚರಿಕೆ ನಡುವೆಯೂ ಹೇಳಿಕೆ ನೀಡುತ್ತಿರುವ...

ಎಚ್ಚರಿಕೆ ನಡುವೆಯೂ ಹೇಳಿಕೆ ನೀಡುತ್ತಿರುವ ಸಚಿವರ ವರದಿ ಕೇಳಿದ ಹೈಕಮಾಂಡ್ : ಮಂಜುನಾಥ ಭಂಡಾರಿ

ವಾರ್ತಾಭಾರತಿವಾರ್ತಾಭಾರತಿ16 Jan 2025 1:37 PM IST
share
ಎಚ್ಚರಿಕೆ ನಡುವೆಯೂ ಹೇಳಿಕೆ ನೀಡುತ್ತಿರುವ ಸಚಿವರ ವರದಿ ಕೇಳಿದ ಹೈಕಮಾಂಡ್ : ಮಂಜುನಾಥ ಭಂಡಾರಿ

ಬೆಂಗಳೂರು: ಪಕ್ಷದ ಶಿಸ್ತು ಉಲ್ಲಂಘಿಸಿ ಹೈಕಮಾಂಡ್ ಎಚ್ಚರಿಕೆ ಮಧ್ಯೆಯೂ ಬಹಿರಂಗ ಹೇಳಿಕೆ ನೀಡುತ್ತಿರುವ ಸಚಿವರ ವರದಿ ಕೇಳಿದ್ದಾರೆ" ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ತಿಳಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ʼಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರ ನಾಯಕತ್ವವು ನಮ್ಮ ಪಕ್ಷದಲ್ಲಿ ಬಲಿಷ್ಠವಾಗಿದೆ. ಕೆಪಿಸಿಸಿ ಅಧ್ಯಕ್ಷರು, ಹಾಗೂ ಮುಖ್ಯಮಂತ್ರಿಗಳನ್ನು, ಸಚಿವರನ್ನು ಯಾವಾಗ ಬದಲಾವಣೆ ಮಾಡಬೇಕು? ಮುಂದುವರಿಸಬೇಕು ಅಥವಾ ಯಾರಾಗಬೇಕು? ಎಂಬಿತ್ಯಾದಿ ಎಲ್ಲ ವಿಷಯಗಳನ್ನು ಪಕ್ಷದ ಹೈಕಮಾಂಡ್ ನಾಯಕರು ನಿರ್ಧಾರ ಮಾಡಲಿದ್ದಾರೆ. ಆದರೆ, ಈ ಸಂಬಂಧ ಯಾವುದೇ ಸಚಿವರು ಹೇಳಿಕೆಯನ್ನು ಕೊಡಬಾರದು. ನಾಯಕತ್ವ ಬದಲಾವಣೆಯ ತೀರ್ಮಾನವನ್ನು ತೆಗೆದುಕೊಳ್ಳುವುದು ಮಾಧ್ಯಮಗಳಲ್ಲ. ನಮ್ಮ ಪಕ್ಷದ ಹೈಕಮಾಂಡ್ ಆಗಿದೆ. ಹೀಗಾಗಿ ಪಕ್ಷದ ನಾಯಕರು ಯಾವುದೇ ವಿಷಯಗಳು ಇದ್ದರೂ ಮೊದಲಿಗೆ ಹೈಕಮಾಂಡ್ ನಾಯಕರ ಗಮನಕ್ಕೆ ತರಬೇಕೇ ವಿನಃ ಮಾಧ್ಯಮಗಳ ಮುಂದಲ್ಲ. ಇಂಥ ಹೇಳಿಕೆ ನೀಡಿರುವವರ ವರದಿಯನ್ನು ಹೈಕಮಾಂಡ್‌ ನಾಯಕರು ಕೇಳಿದ್ದಾರೆʼ ಎಂದು ಅವರು ತಿಳಿಸಿದ್ದಾರೆ.

ಕಳೆದ ಒಂದೂವರೆ ವರ್ಷದಿಂದ ಸಚಿವರು ತಮ್ಮ ಇಲಾಖೆಯಲ್ಲಿ ಯಾವ ರೀತಿ ಕಾರ್ಯನಿರ್ವಹಣೆ ಮಾಡಿದ್ದಾರೆ? ಎಂಬುದು ಪ್ರಶ್ನೆಯಾಗಿದೆ. ಹಾಗೂ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಯಾವುದೇ ತೀರ್ಮಾನವನ್ನು ಪಕ್ಷದ ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಹೇಳಿದ್ದರು ಅನೇಕ ಸಚಿವರು ಅನಗತ್ಯ ಗೊಂದಲ ಉಂಟು ಮಾಡುವ ಹೇಳಿಕೆ ನೀಡುವವರ ಸಂಪೂರ್ಣ ವರದಿ ಕೇಳಿದೆ ಎಂದಿದ್ದಾರೆ.

ಜಿಲ್ಲಾ ಪ್ರವಾಸ ಹೋದಂತಹ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ಭೇಟಿ ನೀಡಿದ್ದಾರಾ? ಇಲ್ಲವಾ?.ಪಕ್ಷದ ಸಂಘಟನೆಗೆ ಒತ್ತು ಕೊಡಲಾಗುತ್ತದೆಯೋ ಇಲ್ಲವೋ? ಪ್ರಣಾಳಿಕೆಯಲ್ಲಿ ಕೊಟ್ಟಿರುವ ಯೋಜನೆಗಳನ್ನು ಜಾರಿ ಮಾಡಲು ಇವರು ಪಕ್ಷ ಮತ್ತು ಸರಕಾರಕ್ಕೆ ಸಹಕಾರ ಕೊಡುತ್ತಿದ್ದಾರೋ ಇಲ್ಲವೋ? ಇದಲ್ಲದೆ ತಮ್ಮ ಇಲಾಖೆಯಲ್ಲಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡಿದ್ದಾರಾ ಇಲ್ಲವಾ? ಎಂಬಿತ್ಯಾದಿ ಸಂಪೂರ್ಣ ಮಾಹಿತಿಯನ್ನು ಹೈಕಮಾಂಡ್‌ ಈ ಸಂದರ್ಭದಲ್ಲಿ ಕೇಳಿದೆ. ಅಲ್ಲದೆ, ಪಕ್ಷದ ಶಿಸ್ತನ್ನು ಉಲ್ಲಂಘಿಸಿ ಪದೇ ಪದೆ ಮಾಧ್ಯಮಗಳಿಗೆ ಹೇಳಿಕೆ ಕೊಡುವ ಸಚಿವರ ಸಂಪೂರ್ಣ ವಿವರಗಳನ್ನು ಕೊಡುವಂತೆ ಹೈ ಕಮಾಂಡ್‌ ಸೂಚಿಸಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಎಐಸಿಸಿ ಕರ್ನಾಟಕ ಉಸ್ತುವಾರಿ ಆಗಿರುವ ರಣದೀಪ್ ಸುರ್ಜೇವಾಲ ಅವರು ಪಕ್ಷದ ತಾಯಿ ಇದ್ದಂತೆ, ಸರಕಾರ ಮಗು ಇದ್ದಂತೆ. ಯಾರೂ ಸಹ ಪಕ್ಷದ ಘನತೆಗೆ ಚ್ಯುತಿ ತರಬಾರದು ಎಂಬ ಸಂದೇಶವನ್ನು ನೀಡಿದ್ದಾರೆ. ಇದರ ಮಧ್ಯೆಯೂ ಕೆಲವು ನಾಯಕರು ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಕೆಲವು ಸಚಿವರು ಪದೇ ಪದೇ ಮಾತನಾಡುತ್ತಿದ್ದಾರೆ. ಇದು ಸರಿ ಅಲ್ಲವೇ ಅಲ್ಲ. ಆದರೆ, ಸಚಿವರಾದ ತಿಮ್ಮಾಪುರ, ಸತೀಶ್ ಜಾರಕಿಹೊಳಿ ಹಾಗೂ ಎಚ್‌.ಸಿ.ಮಹದೇವಪ್ಪ ಅವರು ಪದೇ ಪದೆ ಮಾತನಾಡುತ್ತಿದ್ದು, ಹೈಕಮಾಂಡ್ ಗಂಭೀರವಾಗಿ ಎಲ್ಲವನ್ನೂ ಗಮನಿಸುತ್ತಿದೆ. ಎಲ್ಲ ಸಚಿವರ ರಿಪೋರ್ಟ್ ಕಾರ್ಡ್‌ಗಳನ್ನು ಸಹ ಹೈಕಮಾಂಡ್ ಸೂಕ್ಷ್ಮವಾಗಿ ಗಮನಿಸುತ್ತಿದೆ. ಪಕ್ಷದ ನಾಯಕತ್ವದ ಬಗ್ಗೆ ಮಾತನಾಡಬಾರದು ಎಂದು ಹೈಕಮಾಂಡ್ ಸೂಚನೆ ನೀಡಿದ ಮೇಲೆಯೂ ಪದೇ ಪದೇ ಪಕ್ಷದ ಆದೇಶವನ್ನು ಉಲ್ಲಂಘನೆ ಮಾಡುವವರಿಗೆ ಮುಂದಿನ ದಿನಗಳಲ್ಲಿ ಅವರಿಗೆ ಪರಿಣಾಮ ಬೀರಲಿದೆ ಪಕ್ಷದ ವರಿಷ್ಠರು ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X