Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ದಲಿತ ಮತ್ತೊಮ್ಮೆ ಮಂತ್ರಿಯಾಗಿದ್ದಾನೆ ಎಂಬ...

ದಲಿತ ಮತ್ತೊಮ್ಮೆ ಮಂತ್ರಿಯಾಗಿದ್ದಾನೆ ಎಂಬ ಕಾರಣಕ್ಕೆ ನನ್ನ ವಿರುದ್ಧ ಮನುವಾದಿಗಳಿಂದ ಹುನ್ನಾರ: ಸಚಿವ ನಾಗೇಂದ್ರ

ವಾರ್ತಾಭಾರತಿವಾರ್ತಾಭಾರತಿ19 Aug 2026 1:17 PM IST
share
ದಲಿತ ಮತ್ತೊಮ್ಮೆ ಮಂತ್ರಿಯಾಗಿದ್ದಾನೆ ಎಂಬ ಕಾರಣಕ್ಕೆ ನನ್ನ ವಿರುದ್ಧ ಮನುವಾದಿಗಳಿಂದ ಹುನ್ನಾರ: ಸಚಿವ ನಾಗೇಂದ್ರ

ಬೆಂಗಳೂರು: ದಲಿತ, ಆದಿವಾಸಿ ಜನಾಂಗದ ಮತ್ತೊಮ್ಮೆ ಮಂತ್ರಿಯಾಗಿರುವ ನನ್ನನ್ನು ಆ ಸ್ಥಾನದಿಂದ ಕೆಳಗಿಳಿಸಬೇಕೆಂದು ಮನುವಾದಿಗಳು ಹುನ್ನಾರ ಮಾಡುತ್ತಿದ್ದಾರೆ ಎಂದು ಸಚಿವ ಬಿ.ನಾಗೇಂದ್ರ ಆರೋಪಿಸಿದ್ದಾರೆ.

ವಾಲ್ಮೀಕಿ ನಿಗಮದ ಹಗರಣದ ವಿಚಾರವಾಗಿ ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳು ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತರನ್ನು ಈ ದೇಶದಲ್ಲಿರುವ ಸರಕಾರ, ಮನುವಾದಿಗಳು ಯಾವ ರೀತಿ ನಡೆಸಿಕೊಳ್ಳುತ್ತಿದ್ದಾರೆ ಎಂಬುದನ್ನು ಜನರು ಗಮನಿಸುತ್ತಿದ್ದಾರೆ ಎಂದರು.

ನನ್ನ ಮೇಲಿನ ಆರೋಪದ ಬಗ್ಗೆ ಸಮುದಾಯದ ಜನತೆಗೆ ನಾನು ಬೆಳಕು ಚೆಲ್ಲಬೇಕಿದೆ. ಹಗರಣದ ವಿಚಾರಕ್ಕೆ ಬಂದಾಗ ಘೋಷಣೆ ಕೂಗಿದಾಗ ನೋವಾಗುತ್ತದೆ. ಒಂದು ಸುಳ್ಳನ್ನು ನೂರು ಬಾರಿ ಹೇಳಿ ಸತ್ಯ ಮಾಡುವುದಕ್ಕೆ ಹೊರಟಿದ್ದಾರೆ. ಚರ್ಚೆಗೆ ಬನ್ನಿ ಅಂತಾ ಹೇಳಿದರೂ ಪ್ರತಿಪಕ್ಷಗಳು ಬರುತ್ತಿಲ್ಲ. ಸರಕಾರ ಚರ್ಚೆಗೆ ಸಿದ್ಧವಿದೆ. ಆದರೂ ಅವರು ಚರ್ಚೆಗೆ ಬರಲು ಸಿದ್ಧರಿಲ್ಲ ಎಂದವರು ಹೇಳಿದರು.

ಈ ಹಿಂದೆ ವಾಲ್ಮೀಕಿ ನಿಗಮದಿಂದ 187 ಕೋಟಿ ರೂ. ಬೋರ್ಡ್ ಮೀಟಿಂಗ್ ಗಮನಕ್ಕೂ ಬಾರದೆ ಒಂದು ಬ್ಯಾಂಕ್ ಗೆ ವರ್ಗಾವಣೆ ಆಗಿದೆ. ಈ ಮಧ್ಯೆ ಚಂದ್ರಶೇಖರ್ ಎಂಬಾತ ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ. ಅದು ತನಿಖೆಯಾಗಲಾರಂಭಿಸಿತು. 187 ಕೋಟಿ ರೂ. ವರ್ಗಾವಣೆ ತನ್ನ ಗಮನಕ್ಕೆ ಬರುತ್ತಲೇ ಅದರಲ್ಲಿ 100 ಕೋಟಿ ರೂ.ವನ್ನು ಕೂಡಲೇ ಫ್ರೀಝ್ ಮಾಡಿಸಿದ್ದೇನೆ. ಉಳಿದೆ 87 ಕೋಟಿ ರೂ. ಆಗಾಗಲೇ ವರ್ಗಾವಣೆ ಆಗಿತ್ತು ಎಂದವರು ವಿವರಿಸಿದರು.

ಈ ಮಧ್ಯೆ ಮೇ 31ರಂದು ಹಗರಣದ ತನಿಖೆಗೆ ಎಸ್ಐಟಿ ರಚನೆಯಾಯಿತು. ಈ ಕಾರಣಕ್ಕೆ ಅದೇ ಇಲಾಖೆಯ ಮಂತ್ರಿಯಾಗಿದ್ದರೆ ಪ್ರಭಾವ ಬೀರಬಹುದು ಎಂಬ ಕಾರಣಕ್ಕೆ ನಾನು ಸ್ವಇಚ್ಛೆಯಿಂದ ರಾಜೀನಾಮೆ ನೀಡಿದೆ. ತನಿಖೆ ಮುಂದುವರಿಸಿದ ಎಸ್ಐಟಿ ಕೆಲವೇ ದಿನಗಳಲ್ಲಿ 800 ಅಕೌಂಟ್ ಗಳಿಗೆ ಹೋಗಿದ್ದ ಹಣವನ್ನು ರಿಕವರಿ ಮಾಡಿದೆ. ತನಿಖೆಯಲ್ಲಿ ಎಲ್ಲೂ ಕೂಡ ನನ್ನ ಅಕೌಂಟ್ ಗೆ ಹಣ ವರ್ಗಾವಣೆ ಆಗಿಲ್ಲ ಅನ್ನುವುದು ತಿಳಿದುಬಂತು. ಈ ವಿಚಾರವನ್ನ ಸದನದಲ್ಲಿ ಚರ್ಚಿಸಲು ರೆಡಿಯಾಗಿದ್ದೇನೆ ಎಂದು ಸಚಿವ ನಾಗೇಂದ್ರ ಹೇಳಿದರು.

Tags

Manu activistsDalitMinister Nagendra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X