Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅಚ್ಚುಕಟ್ಟು ಪ್ರದೇಶಗಳ ಸಮಗ್ರ...

ಅಚ್ಚುಕಟ್ಟು ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ CADAಗಳ ಕಾರ್ಯಚಟುವಟಿಕೆ ಮತ್ತಷ್ಟು ಪರಿಣಾಮಕಾರಿಯಾಗಲಿ: ಸಚಿವ ಎನ್. ಚೆಲುವರಾಯಸ್ವಾಮಿ

"ನೀರಿನ ಸಮರ್ಪಕ ಬಳಕೆ,ರೈತರ ಪಾಲ್ಗೊಳ್ಳುವಿಕೆ ಹಾಗೂ ಕೃಷಿ ಉತ್ಪಾದನೆ ಹೆಚ್ಚಳಕ್ಕೆ ಆದ್ಯತೆ"

ವಾರ್ತಾಭಾರತಿವಾರ್ತಾಭಾರತಿ28 Sept 2026 3:08 PM IST
share
ಅಚ್ಚುಕಟ್ಟು ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ CADAಗಳ ಕಾರ್ಯಚಟುವಟಿಕೆ ಮತ್ತಷ್ಟು ಪರಿಣಾಮಕಾರಿಯಾಗಲಿ: ಸಚಿವ ಎನ್. ಚೆಲುವರಾಯಸ್ವಾಮಿ

ಬೆಂಗಳೂರು: ಸೆ.28: ರಾಜ್ಯದ ನೀರಾವರಿ ಯೋಜನೆಗಳ ಅಚ್ಚುಕಟ್ಟು ಪ್ರದೇಶಗಳಲ್ಲಿ ನೀರಿನ ಸಮರ್ಪಕ ಬಳಕೆ, ಕೃಷಿ ಉತ್ಪಾದಕತೆ ಹೆಚ್ಚಳ ಹಾಗೂ ರೈತರ ಆರ್ಥಿಕ ಅಭಿವೃದ್ಧಿಗೆ ಪೂರಕವಾಗುವಂತೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರಗಳ (CADA) ಕಾರ್ಯಚಟುವಟಿಕೆಗಳನ್ನ ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಲಸಂಪನ್ಮೂಲ ಸಚಿವ ಎನ್. ಚೆಲುವರಾಯಸ್ವಾಮಿ ಅಧಿಕಾರಿಗಳಿಗೆ ತಿಳಿಸಿದರು.

ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರಗಳ ನಿರ್ದೇಶನಾಲಯದ ಸಭೆಯು ಸಚಿವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ CADA ಪ್ರಾಧಿಕಾರಗಳ ಕಾರ್ಯನಿರ್ವಹಣೆ, ಅಚ್ಚುಕಟ್ಟು ಪ್ರದೇಶಗಳ ಅಭಿವೃದ್ಧಿ, ನೀರಾವರಿ ವ್ಯವಸ್ಥೆಯ ಸಮರ್ಪಕ ನಿರ್ವಹಣೆ, ನೀರಾವರಿ ಬಳಕೆದಾರರ ಸಂಘಗಳ ಬಲವರ್ಧನೆ ಹಾಗೂ ರೈತರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಕುರಿತು ವಿವರವಾಗಿ ಚರ್ಚಿಸಿದರು ಹಾಗೂ ಈಗಾಗಲೇ ಕಾಮಗಾರಿ ನಡೆದಿರುವ ಸ್ಥಳಗಳಿಗೆ ಖುದ್ದಾಗಿ ಭೇಟಿ ನೀಡಿ ಕಾಮಗಾರಿ ಪರಿಶೀಲಿಸುತ್ತೇನೆ ಎಂದು ತಿಳಿಸಿದರು.

ಅಚ್ಚುಕಟ್ಟು ಪ್ರದೇಶಗಳ ಅಭಿವೃದ್ಧಿ ಕಾಮಗಾರಿಗಳು ಕೇವಲ ಮೂಲಸೌಕರ್ಯ ನಿರ್ಮಾಣಕ್ಕೆ ಸೀಮಿತವಾಗದೆ, ರೈತರಿಗೆ ನೇರವಾಗಿ ಪ್ರಯೋಜನವಾಗುವ ರೀತಿಯಲ್ಲಿ ಹಾಗೂ ಕೃಷಿ ಉತ್ಪಾದನೆ ಹೆಚ್ಚಳಕ್ಕೆ ಪೂರಕವಾಗುವಂತೆ ಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

WUCSಗಳ ಬಲವರ್ಧನೆಗೆ ಒತ್ತು

ನೀರಾವರಿ ಬಳಕೆದಾರರ ಸಂಘಗಳು ಅಚ್ಚುಕಟ್ಟು ಪ್ರದೇಶಗಳ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಅವುಗಳ ಕಾರ್ಯಚಟುವಟಿಕೆಗಳನ್ನ ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದು ಸಚಿವರು ತಿಳಿಸಿದರು.

ನೀರಿನ ಸಮರ್ಪಕ ಹಂಚಿಕೆ ಮತ್ತು ಬಳಕೆಯಲ್ಲಿ ರೈತರ ಪಾಲ್ಗೊಳ್ಳುವಿಕೆಯನ್ನ ಹೆಚ್ಚಿಸುವುದು, ನೀರಿನ ಮಿತವ್ಯಯದ ಬಳಕೆ ಕುರಿತು ಜಾಗೃತಿ ಮೂಡಿಸುವುದು ಹಾಗೂ ಅಚ್ಚುಕಟ್ಟು ಪ್ರದೇಶಗಳ ನಿರ್ವಹಣೆಯಲ್ಲಿ ರೈತರ ಸಹಭಾಗಿತ್ವವನ್ನ ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಖಾಲಿ ಹುದ್ದೆಗಳ ಭರ್ತಿಗೆ ತಕ್ಷಣ ಕ್ರಮ: ಅಧಿಕಾರಿಗಳಿಗೆ ಸೂಚನೆ

CADA ವ್ಯಾಪ್ತಿಯಲ್ಲಿ ಹಲವು ಹುದ್ದೆಗಳು ಖಾಲಿ ಇರುವ ಪರಿಣಾಮ ಅಭಿವೃದ್ಧಿ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದನ್ನ ಗಂಭೀರವಾಗಿ ಪರಿಗಣಿಸಲಾಗಿದೆ.ಯೋಜನೆಗಳನ್ನ ನಿಗದಿತ ಅವಧಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ, ನಿರ್ದೇಶನಾಲಯದ ವ್ಯಾಪ್ತಿಯಲ್ಲಿರುವ ಎಲ್ಲಾ ಖಾಲಿ ಹುದ್ದೆಗಳನ್ನ ಕೂಡಲೇ ಭರ್ತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಕುರಿತು ಮುಖ್ಯಮಂತ್ರಿಗಳ ನಿರ್ದೇಶನವೂ ಇರುವ ಹಿನ್ನೆಲೆಯಲ್ಲಿ, ಯಾವುದೇ ವಿಳಂಬಕ್ಕೆ ಅವಕಾಶ ನೀಡದೆ ನೇಮಕಾತಿ ಪ್ರಕ್ರಿಯೆಯನ್ನ ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಕೃಷಿ ಉತ್ಪಾದಕತೆ ಹೆಚ್ಚಳಕ್ಕೆ ಸಮಗ್ರ ಕ್ರಮ

ಅಚ್ಚುಕಟ್ಟು ಪ್ರದೇಶಗಳಲ್ಲಿ ನೀರಾವರಿ ಸೌಲಭ್ಯ ದೊರೆಯುವುದರ ಜೊತೆಗೆ ಕೃಷಿ ಉತ್ಪಾದಕತೆ ಹೆಚ್ಚಳ, ಸೂಕ್ತ ಬೆಳೆ ಪದ್ಧತಿಗಳ ಉತ್ತೇಜನ ಹಾಗೂ ರೈತರಿಗೆ ಅಗತ್ಯವಿರುವ ಮೂಲಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದರು.

ಭೂಮಿಯ ಉತ್ಪಾದಕತೆ ಕುಂಠಿತವಾಗಿರುವ ಪ್ರದೇಶಗಳನ್ನ ಗುರುತಿಸಿ ಭೂಮಿ ಪುನಶ್ಚೇತನ ಕಾರ್ಯಗಳನ್ನ ಕೈಗೊಳ್ಳಬೇಕು. ಅಚ್ಚುಕಟ್ಟು ಪ್ರದೇಶಗಳಲ್ಲಿನ ಸಮಸ್ಯೆಗಳನ್ನ ಸ್ಥಳೀಯವಾಗಿ ಗುರುತಿಸಿ, ಅಗತ್ಯವಿರುವ ಅಭಿವೃದ್ಧಿ ಕಾರ್ಯಕ್ರಮಗಳನ್ನ ಆದ್ಯತೆಯ ಮೇರೆಗೆ ಕೈಗೊಳ್ಳುವಂತೆ ಸೂಚಿಸಿದರು.

ಯೋಜನೆಗಳ ಅನುಷ್ಠಾನಕ್ಕೆ ನಿರಂತರ ನಿಗಾ

CADA ವ್ಯಾಪ್ತಿಯಲ್ಲಿ ಕೈಗೊಳ್ಳುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ ವಾರ್ಷಿಕ ಕ್ರಿಯಾ ಯೋಜನೆಗಳನ್ನ ಸಮರ್ಪಕವಾಗಿ ರೂಪಿಸಿ, ನಿಗದಿತ ಅವಧಿಯಲ್ಲಿ ಅನುಷ್ಠಾನಗೊಳಿಸಬೇಕು. ಕಾಮಗಾರಿಗಳ ಗುಣಮಟ್ಟ ಹಾಗೂ ಪ್ರಗತಿಯ ಮೇಲೆ ನಿರಂತರ ನಿಗಾ ವಹಿಸುವಂತೆ ಸಚಿವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

CADA ಪ್ರಾಧಿಕಾರಗಳು ಸಂಬಂಧಿಸಿದ ಇಲಾಖೆಗಳು, ನೀರಾವರಿ ಬಳಕೆದಾರರ ಸಂಘಗಳು ಹಾಗೂ ತಾಂತ್ರಿಕ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಬೇಕು. ಅಚ್ಚುಕಟ್ಟು ಪ್ರದೇಶಗಳ ಅಭಿವೃದ್ಧಿಯನ್ನ ನೀರಿನ ಸಮರ್ಪಕ ಬಳಕೆ, ಕೃಷಿ ಉತ್ಪಾದನೆ ಹೆಚ್ಚಳ ಮತ್ತು ರೈತರ ಹಿತಾಸಕ್ತಿಯನ್ನ ಕೇಂದ್ರವಾಗಿಟ್ಟುಕೊಂಡು ಕೈಗೊಳ್ಳಬೇಕು ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ CADA ಪ್ರಾಧಿಕಾರದ ನಿರ್ದೇಶಕರು , ಕಾರ್ಯದರ್ಶಿಗಳು ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X