Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಆ.23ಕ್ಕೆ ದೇಶದ ಮೊದಲ ಕೆಎಚ್‍ಐಆರ್ ಸಿಟಿ...

ಆ.23ಕ್ಕೆ ದೇಶದ ಮೊದಲ ಕೆಎಚ್‍ಐಆರ್ ಸಿಟಿ ಯೋಜನೆಗೆ ಚಾಲನೆ : ಸಚಿವ ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ3 Aug 2024 7:29 PM IST
share
ಆ.23ಕ್ಕೆ ದೇಶದ ಮೊದಲ ಕೆಎಚ್‍ಐಆರ್ ಸಿಟಿ ಯೋಜನೆಗೆ ಚಾಲನೆ : ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು : ದೇಶದಲ್ಲೇ ಪ್ರಪ್ರಥಮ ಎನ್ನಲಾದ, ಬಹು ಮಹತ್ವ್ವಾಕಾಂಕ್ಷೆಯ `ನಾಲೆಡ್ಜ್, ಹೆಲ್ತ್ ಇನ್ನೋವೇಶನ್ ಮತ್ತು ರೀಸರ್ಚ್ ಸಿಟಿ’ (ಕೆಎಚ್‍ಐಆರ್ ಸಿಟಿ) ಯೋಜನೆಯ ಮೊದಲನೇ ಹಂತಕ್ಕೆ ಆ.23ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನಲ್ಲಿ ಚಾಲನೆ ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನಗರದಿಂದ 60 ಕಿ.ಮೀ. ದೂರದಲ್ಲಿ, ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಒಟ್ಟು 2 ಸಾವಿರ ಎಕರೆಯಲ್ಲಿ ಕೆಎಚ್‍ಐಆರ್ ಸಿಟಿ ಅಭಿವೃದ್ಧಿಪಡಿಸಲಾಗುವುದು. ಮೊದಲ ಹಂತದಲ್ಲಿ ಒಂದು ಸಾವಿರ ಎಕರೆ ಜಾಗದಲ್ಲಿ ಯೋಜನೆ ತಲೆ ಎತ್ತಲಿದೆ. ಒಟ್ಟು ಎರಡೂ ಹಂತಗಳಲ್ಲಿ 40 ಸಾವಿರ ಕೋಟಿ ರೂ.ಗಳಿಗಿಂತಲೂ ಹೆಚ್ಚು ಹೂಡಿಕೆ ಆಗಲಿದ್ದು, 50 ಸಾವಿರ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಮಾಹಿತಿ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ. ಉದ್ಯಮ ವಲಯದ ಪ್ರಮುಖರು ಭಾಗವಹಿಸಲಿದ್ದಾರೆ. ಪ್ರಪಂಚದ ಬೇರೆಬೇರೆ ಭಾಗಗಳಲ್ಲಿಯೂ ವಿಶೇಷ ನಗರಗಳ ಪರಿಕಲ್ಪನೆ ಇದೆ. ಕೇಂದ್ರ ಸರಕಾರವು ಇದೇ ಮಾದರಿಯನ್ನು ಅನುಸರಿಸುತ್ತದೆ ಎಂದು ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಕೆಎಚ್‍ಐಆರ್ ಸಿಟಿಯಲ್ಲಿ ನಾಲ್ಕೂ ವಲಯಗಳಲ್ಲಿನ ಜಾಗತಿಕ ಮಟ್ಟದ ಅತ್ಯುನ್ನತ ಕಂಪೆನಿಗಳು ನೆಲೆಯೂರಲಿವೆ. ಇದಕ್ಕೆ ಬೇಕಾದ ಜಮೀನು, ವಿದ್ಯುತ್, ನೀರು, ರಸ್ತೆ ಮತ್ತಿತರ ಸೌಲಭ್ಯಗಳನ್ನು ರಾಜ್ಯ ಸರಕಾರ ಒದಗಿಸಲಿದೆ. ಇದರಿಂದ ಆರ್ಥಿಕ ವರಮಾನ ಹೆಚ್ಚಳದ ಜೊತೆಗೆ ರಫ್ತು ವಹಿವಾಟು ಕೂಡ ವೃದ್ಧಿಸಲಿದೆ. ಇದರಿಂದಾಗಿ ಬೆಂಗಳೂರು ನಗರವು ಇನ್ನೊಂದು ಸ್ತರ ಮೇಲೇರಲಿದೆ ಎಂದು ಅವರು ಹೇಳಿದ್ದಾರೆ.

ಜಾಗತಿಕವಾಗಿ ಉತ್ಕೃಷ್ಟ ಮಟ್ಟದ ಉದ್ದಿಮೆಗಳು, ವಿಶ್ವವಿದ್ಯಾಲಯಗಳು, ಮೆಡಿಕಲ್ ಟೂರಿಸಂ, ಸಂಶೋಧನೆ, ಚಿಕಿತ್ಸೆ, ನಾವೀನ್ಯತೆ ಇವುಗಳಿಗೆ ಉದ್ದೇಶಿತ ಸಿಟಿಯಲ್ಲಿ ಆದ್ಯತೆ ನೀಡಲಾಗುವುದು. ಜೊತೆಗೆ ಭವಿಷ್ಯದ ಸಂಚಾರ ವ್ಯವಸ್ಥೆ, ಸೆಮಿಕಂಡಕ್ಟರ್, ಅಡ್ವಾನ್ಸ್ಡ್ ಮೆಟೀರಿಯಲ್ಸ್, ನವೋದ್ಯಮಗಳು, ವೈಮಾಂತರಿಕ್ಷ, ರಕ್ಷಣೆ ಮತ್ತು ಬಾಹ್ಯಾಕಾಶ ತಂತ್ರಜ್ಞಾನ, ಜೀವವಿಜ್ಞಾನಗಳು ಮತ್ತು ಆಧುನಿಕ ತಂತ್ರಜ್ಞಾನ ವಲಯಗಳ ಕಂಪೆನಿಗಳು ಕೂಡ ಇಲ್ಲಿ ಬರಲಿವೆ ಎಂದು ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಮುಖ್ಯವಾಗಿ ಒಟ್ಟಾರೆ ಯೋಜನೆಯಿಂದ ಅಪಾರ ಸಂಖ್ಯೆಯ ಪರೋಕ್ಷ ಉದ್ಯೋಗಗಳು ಕೂಡ ಸೃಷ್ಟಿಯಾಗಲಿವೆ. ಇದರಿಂದ ಸ್ಥಳೀಯವಾಗಿ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ. ಇದಕ್ಕಾಗಿ ಸರಕಾರವು ಸ್ಪಷ್ಟ ರೂಪುರೇಷೆಯನ್ನು ಈಗಾಗಲೇ ಆಖೈರುಗೊಳಿಸಿದೆ ಎಂದು ಅವರು ವಿವರಿಸಿದ್ದಾರೆ.

ಕೆಎಚ್‍ಐಆರ್ ಸಿಟಿಯಲ್ಲಿ ಆರಂಭವಾಗಲಿರುವ ಉದ್ದಿಮೆಗಳಿಗೆ ಸಕಲ ರೀತಿಯ ಸೌಲಭ್ಯಗಳನ್ನೂ ಒದಗಿಸಲಾಗುವುದು. ರಾಜ್ಯದಲ್ಲೇ ನೆಲೆ ಹೊಂದಿರುವ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಉದ್ದಿಮೆಗಳು ಮತ್ತು ಸಂಶೋಧನಾ ಸಂಸ್ಥೆಗಳಿಗೂ ಇಲ್ಲಿ ಅವಕಾಶವಿರಲಿದೆ. ಈ ಮೂಲಕ ನಮ್ಮಲ್ಲಿನ ಸಂಸ್ಥೆಗಳು ಕೂಡ ಜಾಗತಿಕ ಗುಣಮಟ್ಟದ ಎತ್ತರಕ್ಕೆ ಬೆಳೆಯಲು ಅವಕಾಶ ಒದಗಿಸಲಾಗುವುದು. ಒಟ್ಟಿನಲ್ಲಿ ನಾವು ಜಾಗತಿಕ ಮಟ್ಟದಲ್ಲಿ ಪ್ರಮುಖ ಹೂಡಿಕೆ ತಾಣವಾಗಿ ಹೊರಹೊಮ್ಮಬೇಕು ಎನ್ನುವುದು ಇದರ ಹಿಂದಿನ ಆಶಯಗಳಲ್ಲಿ ಒಂದಾಗಿದೆ ಎಂದು ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X