Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎಐ ಕೌಶಲ ಕುರಿತು ರಾಜ್ಯ ಸರಕಾರದ ಜತೆ...

ಎಐ ಕೌಶಲ ಕುರಿತು ರಾಜ್ಯ ಸರಕಾರದ ಜತೆ ಒಡಂಬಡಿಕೆಗೆ ಮೈಕ್ರೋಸಾಫ್ಟ್ ಒಲವು : ಎಂ.ಬಿ. ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ3 Sept 2024 9:54 PM IST
share
ಎಐ ಕೌಶಲ ಕುರಿತು ರಾಜ್ಯ ಸರಕಾರದ ಜತೆ ಒಡಂಬಡಿಕೆಗೆ ಮೈಕ್ರೋಸಾಫ್ಟ್ ಒಲವು : ಎಂ.ಬಿ. ಪಾಟೀಲ್

ಬೆಂಗಳೂರು : ಜನರೇಟೀವ್ ಎಐ ಮತ್ತು ಮುಂಚೂಣಿಗೆ ಬರುತ್ತಿರುವ ಆಧುನಿಕ ತಂತ್ರಜ್ಞಾನಗಳಿಗೆ ಸಂಬಂಧಿಸಿದ ಕೌಶಲಗಳನ್ನು ಕಲಿಸಲು ರಾಜ್ಯ ಸರಕಾರದೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲು ಮೈಕ್ರೋಸಾಫ್ಟ್ ಕಂಪನಿಯು ಉತ್ಸುಕವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಮಂಗಳವಾರ ನಗರದಲ್ಲಿ ತಮ್ಮನ್ನು ಭೇಟಿಯಾದ ಮೈಕ್ರೋಸಾಫ್ಟ್ ಕಂಪನಿಯ ಭಾರತ ಮತ್ತು ದಕ್ಷಿಣ ಏಷ್ಯಾದ ಅಧ್ಯಕ್ಷ ಪುನೀತ್ ಚಾಂದೋಕ್ ನೇತೃತ್ವದ ಉನ್ನತ ಮಟ್ಟದ ನಿಯೋಗದ ಜತೆ ಅವರು ವಿಚಾರ ವಿನಿಮಯ ನಡೆಸಿದರು.

ಕರ್ನಾಟಕವನ್ನು ಭಾರತದ ಎಐ ತಂತ್ರಜ್ಞಾನದ ಪ್ರಮುಖ ತಾಣವನ್ನಾಗಿ ಮಾಡಲು ಮೈಕ್ರೋಸಾಫ್ಟ್ ಬಯಸಿದೆ. ಹೂಡಿಕೆದಾರರಿಗೆ ನೆರವು ನೀಡುವಂತಹ ಪ್ರಕ್ರಿಯೆಗಳಿಗೆ ಎಐ ತಂತ್ರಜ್ಞಾನವನ್ನು ಹೇಗೆ ಅನ್ವಯಿಸಬಹುದು ಮತ್ತು ಇದಕ್ಕೆ ಪರಿಣತರನ್ನು ಹೇಗೆ ತೊಡಗಿಸಬಹುದು ಎಂದು ಕಂಪನಿಯು ಚಿಂತಿಸುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ರಾಜ್ಯ ಸರಕಾರವು ತಂತ್ರಜ್ಞಾನದ ಬಳಕೆಯ ಪರವಾಗಿದ್ದು, ಮೈಕ್ರೋಸಾಫ್ಟ್ ತರಹದ ದೈತ್ಯ ಕಂಪನಿಗಳು ಇದಕ್ಕೆ ಮುಂದಡಿ ಇಡಬೇಕು. ಮೊದಲಿಗೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಆಡಳಿತದಲ್ಲಿ ಎಐ ತಂತ್ರಜ್ಞಾನ ಅಳವಡಿಕೆ ಬಗ್ಗೆ ನೆರವಾಗಬಹುದು ಎಂದು ಎಂ.ಬಿ.ಪಾಟೀಲ್ ನುಡಿದರು.

ಫೆ.12ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಮೈಕ್ರೋಸಾಫ್ಟ್ ಕಂಪನಿಯು ಸಕ್ರಿಯ ಪಾಲ್ಗೊಳ್ಳುವಿಕೆ ಬಗ್ಗೆ ಈ ಸಂದರ್ಭದಲ್ಲಿ ಚರ್ಚಿಸಲಾಯಿತು.

ಮೈಕ್ರೋಸಾಫ್ಟ್ ಇಂಡಿಯಾದ ನಿಯೋಗದಲ್ಲಿ ಅದರ ವ್ಯವಸ್ಥಾಪಕ ನಿರ್ದೇಶಕಿ ಇರಿನಾ ಘೋಷ್, ಸ್ಟ್ರಾಟೆಜಿ ಹೆಡ್ ಶೀನು ಶೇಖರಿ, ಹಿರಿಯ ನಿರ್ದೇಶಕ ಅನೀಶ್ ಚಾಂಡಿ, ನಿರ್ದೇಶಕ ಸಂದೀಪ್ ಮಹಾಪಾತ್ರ ಮುಂತಾದವರು ಇದ್ದರು. ಸರಕಾರದ ಪ್ರತಿನಿಧಿಗಳಾಗಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X