Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ | ಒಂದು...

ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ | ಒಂದು ವಾರದಲ್ಲಿ ಅಂತಿಮ ಸ್ಥಳ ತೀರ್ಮಾನ : ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ18 Oct 2024 9:22 PM IST
share
ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ | ಒಂದು ವಾರದಲ್ಲಿ ಅಂತಿಮ ಸ್ಥಳ ತೀರ್ಮಾನ : ಎಂ.ಬಿ.ಪಾಟೀಲ್

ಬೆಂಗಳೂರು : ಜಾಗತಿಕ ಮಟ್ಟದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ಮಹಾನಗರದ ಸಾರ್ವಜನಿಕರು ಮತ್ತು ಉದ್ಯಮಗಳಿಗೆ ಇನ್ನೊಂದು ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣ ಅತ್ಯಗತ್ಯವಾಗಿದೆ. ಇದಕ್ಕಾಗಿ ಸರಕಾರವು ಐದು ಸ್ಥಳಗಳನ್ನು ಗುರುತಿಸಿದೆ. ಆದರೆ ಇವುಗಳ ಪೈಕಿ ಯಾವುದನ್ನೂ ಆಖೈರು ಮಾಡಿಲ್ಲ. ಈ ಸಂಬಂಧ ಇನ್ನೊಂದು ವಾರದಲ್ಲಿ ಸಭೆ ಸೇರಿ, ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಎರಡನೆಯ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳವನ್ನು ಈಗಾಗಲೇ ತೀರ್ಮಾನಿಸಲಾಗಿದೆ ಎನ್ನುವ ವರದಿಗಳಿಗೆ ಆಧಾರವಿಲ್ಲ. ಡಾಬಸ್‍ಪೇಟೆ, ನೆಲಮಂಗಲ, ಬಿಡದಿ, ಹಾರೋಹಳ್ಳಿ ಸೇರಿದಂತೆ ಒಟ್ಟು ಐದು ಸ್ಥಳಗಳನ್ನು ನಾವು ಮುಕ್ತವಾಗಿ ಇಟ್ಟುಕೊಂಡಿದ್ದೇವೆ. ಇವತ್ತು ಇನ್ನೂ ಒಂದು ಸ್ಥಳದ ಬಗ್ಗೆಯೂ ಚರ್ಚೆ ಆಗಿದೆ. ಇವುಗಳ ಬಗ್ಗೆ ವಸ್ತುಸ್ಥಿತಿ ಆಧರಿಸಿ ಮತ್ತು ಸಾಧಕ-ಬಾಧಕಗಳನ್ನು ಗಮನಿಸಿ, ವರದಿ ಕೊಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇನ್ನೊಂದು ವಾರದಲ್ಲಿ ಮತ್ತೊಂದು ಸುತ್ತು ಸಭೆ ಸೇರಿ, ಸ್ಥಳವನ್ನು ಆಖೈರುಗೊಳಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ವಿಮಾನ ನಿಲ್ದಾಣಕ್ಕೆ ಸ್ಥಳ ಆಯ್ಕೆ ಮಾಡುವಲ್ಲಿ ಯಾರಿಗೂ ರಾಜಕೀಯ ಹಿತಾಸಕ್ತಿಗಳೇನಿಲ್ಲ. ಬೆಂಗಳೂರಿನ ಜನತೆಗೆ ಮತ್ತು ಉದ್ಯಮಿಗಳ ಅನುಕೂಲವಷ್ಟೇ ಇಲ್ಲಿ ಮುಖ್ಯ. ಇದರಿಂದ ನಮ್ಮ ಆರ್ಥಿಕ ಬೆಳವಣಿಗೆಗೆ ಒಳ್ಳೆಯ ಕೊಡುಗೆ ಬರಬೇಕು. ಇದರ ಜೊತೆ ನಾವು ರಾಜಿ ಮಾಡಿಕೊಳ್ಳುವುದಿಲ್ಲ. ಅಂತಿಮವಾಗಿ ಬೆಂಗಳೂರು ನಗರವು ಇನ್ನೊಂದು ಸ್ತರಕ್ಕೆ ಏರಬೇಕು ಎನ್ನುವುದಷ್ಟೇ ಸರಕಾರದ ಗುರಿಯಾಗಿದೆ ಎಂದು ಎಂ.ಬಿ.ಪಾಟೀಲ್ ಹೇಳಿದರು.

ಎರಡನೆಯ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಮಗೆ ಸ್ಥಳಾವಕಾಶಕ್ಕೇನೂ ಕೊರತೆ ಇಲ್ಲ. ಬೆಂಗಳೂರಿನ ಸುತ್ತಮುತ್ತಲೂ ಜಾಗವಿದ್ದು, ಇದರಲ್ಲಿ ಸೂಕ್ತವಾದುದನ್ನು ಆಯ್ಕೆ ಮಾಡಲಾಗುವುದು ಎಂದು ಅವರು ವಿವರಿಸಿದರು.

ಸಭೆಯಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಸಿಎಂ ಹೆಚ್ಚುವರಿ ಕಾರ್ಯದರ್ಶಿ ಎಲ್.ಕೆ.ಅತೀಕ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ನಮ್ಮ ಮೆಟ್ರೊ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಎನ್.ಮಂಜುಳಾ, ಕೆಐಎಡಿಬಿ ಸಿಇಒ ಡಾ.ಮಹೇಶ್ ಸೇರಿದಂತೆ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X