Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಜನವರಿಗೆ ಏಕಗವಾಕ್ಷಿ ವ್ಯವಸ್ಥೆ ಸಿದ್ಧ :...

ಜನವರಿಗೆ ಏಕಗವಾಕ್ಷಿ ವ್ಯವಸ್ಥೆ ಸಿದ್ಧ : ಸಚಿವ ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ26 Nov 2024 10:54 PM IST
share
ಜನವರಿಗೆ ಏಕಗವಾಕ್ಷಿ ವ್ಯವಸ್ಥೆ ಸಿದ್ಧ : ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು : ರಾಜ್ಯ ಸರಕಾರವು ಸರಳ, ಸುಗಮ ಮತ್ತು ಉದ್ಯಮಸ್ನೇಹಿ ಉಪಕ್ರಮಗಳಿಗೆ ಬದ್ಧವಾಗಿದ್ದು, ಜನವರಿ ವೇಳೆಗೆ ಏಕಗವಾಕ್ಷಿ ಮಂಜೂರಾತಿ ವ್ಯವಸ್ಥೆಗೆ ಅಗತ್ಯವಿರುವ ತಂತ್ರಾಂಶವನ್ನು ಸಿದ್ಧಪಡಿಸಲಾಗುವುದು. ಈ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳಿಗೆಲ್ಲ ಡಿಸೆಂಬರ್ ಹೊತ್ತಿಗೆ ಈ ತಂತ್ರಾಂಶದ ಭಾಗವಾಗುವಂತೆ ಗಡುವು ಕೊಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಮಂಗಳವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಮಂಜುಳಾ, ಇ-ಆಡಳಿತ ಇಲಾಖೆಯ ಮುಖ್ಯಸ್ಥ ಉಜ್ವಲ್ ಘೋಷ್, ಕೆಐಎಡಿಬಿ ಸಿಇಒ ಡಾ.ಮಹೇಶ್ ಸೇರಿದಂತೆ ಎಲ್ಲ ಇಲಾಖೆಗಳ ಕಾರ್ಯದರ್ಶಿಗಳೊಂದಿಗೆ ಅವರು ಸಭೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ.ಪಾಟೀಲ್, ಹೂಡಿಕೆ ಯೋಜನೆಗಳಿಗೆ ಮಂಜೂರಾತಿ, ಕೈಗಾರಿಕಾ ನಿವೇಶನ, ಕೈಗಾರಿಕಾ ಪ್ರದೇಶಗಳಲ್ಲಿ ಇರುವ ಸಿಎ ನಿವೇಶನ ಇತ್ಯಾದಿಗಳ ಹಂಚಿಕೆ ಈಗಿರುವ ಸಂಕೀರ್ಣ ಮತ್ತು ಬಹುಹಂತಗಳ ಅನುಮತಿ ವಿಧಾನದಿಂದ ವಿಳಂಬವಾಗುತ್ತಿದೆ. ಇದಕ್ಕೆ ಏಕಗವಾಕ್ಷಿ ವ್ಯವಸ್ಥೆ ಮೂಲಕ ಇತಿಶ್ರೀ ಹಾಡಲಾಗುವುದು ಎಂದು ತಿಳಿಸಿದರು.

ಇದಕ್ಕಾಗಿ ಮೈಕ್ರೋಸಾಫ್ಟ್ ಕಂಪೆನಿಯು ಸಾಫ್ಟ್‌ ವೇರ್ ಸಿದ್ಧಪಡಿಸಿದೆ. ಇದರೊಂದಿಗೆ ಎಲ್ಲ ಇಲಾಖೆಗಳ ಜೋಡಣೆ ಬಾಕಿಯಿದ್ದು, ಅದನ್ನು ತ್ವರಿತವಾಗಿ ಮಾಡಬೇಕು. ಈ ಉಪಕ್ರಮದ ಪರಿಣಾಮಕಾರಿ ಅನುಷ್ಠಾನದ ಸಂಬಂಧ ಸರಕಾರದ ಮುಖ್ಯ ಕಾರ್ಯದರ್ಶಿ ಸದ್ಯದಲ್ಲೇ ಇನ್ನೊಂದು ಸಭೆ ನಡೆಸಲಿದ್ದಾರೆ ಎಂದು ಅವರು ಹೇಳಿದರು.

ಕೈಗಾರಿಕಾ ಅನುಮತಿಗೆ ಏಕಗವಾಕ್ಷಿ ವ್ಯವಸ್ಥೆಯನ್ನು ತರಲಾಗುವುದು ಎಂದು ನಾವು ಮಾತು ಕೊಟ್ಟಿದ್ದೆವು. ಹೊಸ ತಂತ್ರಾಂಶವನ್ನು ಬಳಸುವುದು ಹೇಗೆಂಬ ಬಗ್ಗೆ ಸಂಬಂಧಿಸಿದ ಇಲಾಖೆಗಳ ಸಿಬ್ಬಂದಿಗೆ ಸಮರ್ಪಕ ತರಬೇತಿ ಕೊಡಲಾಗುವುದು. ಉದ್ಯಮಿಗಳು ಇನ್ನು ಮುಂದೆ ಹತ್ತಾರು ಇಲಾಖೆಗಳಿಗೆ ಎಡತಾಕುವ ಪ್ರಮೇಯವೇ ಇರುವುದಿಲ್ಲ ಎಂದು ಎಂ.ಬಿ.ಪಾಟೀಲ್ ವಿವರಿಸಿದರು.

ನೂತನ ಏಕಗವಾಕ್ಷಿ ವ್ಯವಸ್ಥೆ ಸಂಪೂರ್ಣ ಆನ್‍ಲೈನ್ ಆಗಿರಲಿದೆ. ಉದ್ಯಮಿಗಳು ತಮ್ಮ ಪ್ಯಾನ್ ಮತ್ತು ಆಧಾರ್ ಸಂಖ್ಯೆಗಳನ್ನು ನಮೂದಿಸಿದರೆ ಮಿಕ್ಕೆಲ್ಲ ವಿವರಗಳು ತಾವಾಗಿಯೇ ದೊರೆಯುತ್ತವೆ. ಇದು ಸುಲಲಿತ ಕೈಗಾರಿಕಾ ಸಂಸ್ಕೃತಿಯ ಭಾಗವಾಗಿದೆ. ಒಟ್ಟಿನಲ್ಲಿ ಇದಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳು ಡಿಸೆಂಬರ್‍ನಲ್ಲೆ ಮುಗಿಯಲಿದ್ದು, ಜನವರಿಯಲ್ಲಿ ಏಕಗವಾಕ್ಷಿ ವ್ಯವಸ್ಥೆ ಉದ್ಘಾಟನೆಗೆ ಸಿದ್ಧವಾಗಲಿದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಉದ್ಯಮಿಗಳು ಸಾವಿರಾರು ಕೋಟಿ ರೂಪಾಯಿ ಹೂಡುತ್ತಿದ್ದಾರೆ. ನಾವು ಅವರಿಗೆ ಏಕಗವಾಕ್ಷಿ ಅನುಮತಿಯಂತಹ ಸೌಲಭ್ಯಗಳನ್ನು ಒದಗಿಸಬೇಕು. ಇದರಿಂದ ರಾಜ್ಯವು ಮತ್ತಷ್ಟು ಉದ್ಯಮಸ್ನೇಹಿ ಮತ್ತು ತಂತ್ರಜ್ಞಾನದ ಸಮರ್ಥ ಬಳಕೆಯ ತಾಣವಾಗಲಿದೆ ಎಂದು ಎಂ.ಬಿ.ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X