Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನಿರಾಶಾದಾಯಕ ಬಜೆಟ್, ರಾಜ್ಯಕ್ಕೆ ಈ...

ನಿರಾಶಾದಾಯಕ ಬಜೆಟ್, ರಾಜ್ಯಕ್ಕೆ ಈ ಬಾರಿಯೂ ಸಿಗಲಿಲ್ಲ ಏಮ್ಸ್ : ಎಂ‌.ಬಿ.ಪಾಟೀಲ್‌

ವಾರ್ತಾಭಾರತಿವಾರ್ತಾಭಾರತಿ1 Feb 2025 6:29 PM IST
share
ನಿರಾಶಾದಾಯಕ ಬಜೆಟ್, ರಾಜ್ಯಕ್ಕೆ ಈ ಬಾರಿಯೂ ಸಿಗಲಿಲ್ಲ ಏಮ್ಸ್ : ಎಂ‌.ಬಿ.ಪಾಟೀಲ್‌

ಬೆಂಗಳೂರು : ಕೇಂದ್ರ ಸರಕಾರದ ಬಜೆಟ್ ತೀರಾ ನಿರಾಶಾದಾಯಕವಾಗಿದೆ. ಮಧ್ಯಮ ವರ್ಗದ ಆದಾಯ ತೆರಿಗೆದಾರರಿಗೆ ಭಾರೀ ಲಾಭ ತಂದುಕೊಡುವಂತೆ ಕಣ್ಣೊರೆಸುವ ತಂತ್ರಗಳನ್ನು ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ಜಿಡಿಪಿ ಬೆಳವಣಿಗೆ ಹೆಚ್ಚಿಸುವಂತಹ ಯಾವ ಅಂಶವೂ ಬಜೆಟ್ಟಿನಲ್ಲಿ ಇಲ್ಲದಿರುವುದು ಕಳವಳಕಾರಿ ಅಂಶವಾಗಿದೆ. ಬಂಡವಾಳ ವೆಚ್ಚದಲ್ಲಿ ಗಣನೀಯ ಏರಿಕೆ ಮಾಡದೆ ಇರುವುದು ಚಿಂತಿಸುವಂತಹ ವಿಷಯವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ಕೇಂದ್ರ ಸರಕಾರವು ಶನಿವಾರ ಮಂಡಿಸಿದ ಬಜೆಟ್ ಬಗ್ಗೆ ಮಾತನಾಡಿರುವ ಅವರು, ʼಮುಖ್ಯವಾಗಿ ಮಧ್ಯಮ ವರ್ಗದ ಆದಾಯ ತೆರಿಗೆದಾರರಿಗೆ ನಿರಾಳತೆ ತಂದುಕೊಡುತ್ತಿರುವಂತೆ ಈ ಬಜೆಟ್ ಭಾಸವಾಗುತ್ತಿದೆ. ಆದರೆ, ವಾಸ್ತವದಲ್ಲಿ ಹಾಗಿಲ್ಲ. 12 ಲಕ್ಷ ರೂಪಾಯಿ ವರೆಗೆ ತೆರಿಗೆ ವಿನಾಯಿತಿ ಅಂದಿದ್ದಾರೆ. ಆದರೆ ಅದಕ್ಕಿಂತ ಒಂದು ರೂಪಾಯಿ ಹೆಚ್ಚಿನ ಆದಾಯ ಬಂದರೂ ಈ ವಿನಾಯಿತಿ ಸಿಗುವುದಿಲ್ಲ. ಬದಲಿಗೆ ಶೇ.20ಕ್ಕೂ ಹೆಚ್ಚು ತೆರಿಗೆ ವಿಧಿಸುತ್ತಾರೆ. ಇದರ ಬದಲು ತೆರಿಗೆದಾರರಿಗೆ ನೇರವಾಗಿ ಮತ್ತು ಸುಲಭವಾಗಿ ಪ್ರಯೋಜನ ಸಿಗುವಂತೆ ನೋಡಿಕೊಳ್ಳಬೇಕಾಗಿತ್ತು. ಸಮಾಜದ ಈ ನಿರೀಕ್ಷೆಗೆ ಸ್ಪಂದಿಸಲು ನರೇಂದ್ರ ಮೋದಿ ಸರಕಾರ ವಿಫಲವಾಗಿದೆ. ಇದರ ಬಿಸಿ ಮುಂದಿನ ದಿನಗಳಲ್ಲಿ ಜನರಿಗೆ ಗೊತ್ತಾಗಲಿದೆ’ ಎಂದಿದ್ದಾರೆ.

ಬಂಡವಾಳ ವೆಚ್ಚವನ್ನು ಬಹುಮಟ್ಟಿಗೆ ಯಥಾಸ್ಥಿತಿಯಲ್ಲೇ ಉಳಿಸಿಕೊಂಡಿರುವುದು ಆರ್ಥಿಕ ಬೆಳವಣಿಗೆಯ ದೃಷ್ಟಿಯಿಂದ ಒಳ್ಳೆಯದಲ್ಲ. ಇದರಿಂದ ಅಭಿವೃದ್ಧಿಯ ವೇಗ ಕುಂಠಿತವಾಗುತ್ತದೆ. ನೆರೆಯ ಚೀನಾ ಒಡ್ಡುತ್ತಿರುವ ಸ್ಪರ್ಧೆಯನ್ನು ಎದುರಿಸಬೇಕೆಂದರೆ ನಮ್ಮಲ್ಲಿ ಬಂಡವಾಳ ವೆಚ್ಚವನ್ನು ಹೆಚ್ಚಿಸುವ ಕ್ರಮ ಬೇಕಾಗಿತ್ತು. ಆದರೆ ಬಜೆಟ್ಟಿನಲ್ಲಿ ಆ ಪ್ರಸ್ತಾಪವೇ ಇಲ್ಲದಿರುವುದು ದುರದೃಷ್ಟಕರ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಕೈಗಾರಿಕಾ ಬೆಳವಣಿಗೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡುವ ಅವಶ್ಯಕತೆ ಇತ್ತು. ಅದರಲ್ಲೂ ದೇಶದ ಐಟಿ, ಬಿಟಿ, ಸ್ಟಾರ್ಟಪ್ ರಾಜಧಾನಿಯಾಗಿರುವ ಕರ್ನಾಟಕಕ್ಕೆ ಮೋದಿ ಸರಕಾರ ನಿರ್ದಿಷ್ಟವಾಗಿ ಯಾವ ಉಪಯುಕ್ತ ಉಪಕ್ರಮವನ್ನೂ ಘೋಷಿಸಿಲ್ಲ. ದೇಶದ ಒಟ್ಟಾರೆ ರಫ್ತು ವಹಿವಾಟಿನಲ್ಲಿ ರಾಜ್ಯದ ಪಾಲು ಅಧಿಕವಾಗಿದೆ. ಆದ್ದರಿಂದ ನಮಗೆ ಏನನ್ನಾದರೂ ಹೆಚ್ಚಿನದನ್ನು ಕೊಡಬೇಕಿತ್ತು. ಬಿಹಾರದಂತಹ ರಾಜ್ಯಕ್ಕೆ ಚುನಾವಣೆ ಮೇಲೆ ಕಣ್ಣಿಟ್ಟುಕೊಂಡು ಯೋಜನೆ ಘೋಷಿಸುವುದರಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇಶವನ್ನು 5 ಟ್ರಿಲಿಯನ್ ಡಾಲರ್ ಮೌಲ್ಯದ ಆರ್ಥಿಕತೆಯನ್ನಾಗಿ ಮಾಡಲು ಚಾರಿತ್ರಿಕ ಕ್ರಮಗಳ ಅನಿವಾರ್ಯತೆ ಇದೆ. ಅದಕ್ಕೆ ಬೇಕಾದ ಧೈರ್ಯವನ್ನು ಪ್ರದರ್ಶಿಸುವಲ್ಲಿ ಈ ಬಜೆಟ್ ಸೋತಿದೆ ಎಂದು ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.

ಉತ್ತರ ಕರ್ನಾಟಕದ ಅಭಿವೃದ್ಧಿಗೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿಲ್ಲ. ಈ ಬಾರಿಯಾದರೂ ಉತ್ತರ ಕರ್ನಾಟಕಕ್ಕೆ ಅಖಿಲ ಭಾರತ ವೈದ್ಯಕೀಯ ಸಂಸ್ಥೆ (ಏಮ್ಸ್) ಮಂಜೂರು ಮಾಡುತ್ತಾರೆ ಎನ್ನುವ ನಿರೀಕ್ಷೆ ಕೂಡ ಹುಸಿಯಾಗಿದೆ. ಒಟ್ಟಿನಲ್ಲಿ ಇದು ಜನವಿರೋಧಿ ಬಜೆಟ್ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಟೀಕಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X