Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. 12 ವಿಶೇಷ ಹೂಡಿಕೆ ವಲಯ ಸ್ಥಾಪನೆ : ಬೃಹತ್...

12 ವಿಶೇಷ ಹೂಡಿಕೆ ವಲಯ ಸ್ಥಾಪನೆ : ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ11 Feb 2025 10:58 PM IST
share
12 ವಿಶೇಷ ಹೂಡಿಕೆ ವಲಯ ಸ್ಥಾಪನೆ : ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು : ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆ ಸಾಧಿಸಲು ಈಗ ಇರುವ 200ಕ್ಕೂ ಹೆಚ್ಚು ಕೈಗಾರಿಕಾ ಪ್ರದೇಶಗಳ ಜತೆಗೆ 30 ಸಾವಿರ ಎಕರೆ ವಿಸ್ತೀರ್ಣದಲ್ಲಿ 12 ವಿಶೇಷ ಹೂಡಿಕೆ ವಲಯಗಳನ್ನು ಸ್ಥಾಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು.

ಮಂಗಳವಾರ ನಗರದ ಅರಮನೆ ಆವರಣದಲ್ಲಿ ರಾಜ್ಯ ಸರಕಾರ ಆಯೋಜಿಸಿದ್ದ ‘ಇನ್ವೆಸ್ಟ್ ಕರ್ನಾಟಕ’ ಜಾಗತಿಕ ಹೂಡಿಕೆದಾರರ ಸಮಾವೇಶ-2025 ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಇದಕ್ಕಾಗಿ ಇತ್ತೀಚೆಗೆ ಅಧಿಸೂಚನೆ ಹೊರಡಿಸಿದ್ದು, ಇಲ್ಲೆಲ್ಲ ವಿಶ್ವ ದರ್ಜೆಯ ಮೂಲಸೌಕರ್ಯ ಒದಗಿಸಲಾಗುವುದು. ರಾಜ್ಯದಲ್ಲಿ ಕೆಐಎಡಿಬಿ ಈಗಾಗಲೇ 85 ಸಾವಿರ ಎಕರೆಗೂ ಹೆಚ್ಚು ವಿಸ್ತೀರ್ಣದ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿ ಪಡಿಸಿದ್ದು, ಇಲ್ಲಿ 25 ಸಾವಿರ ಕೈಗಾರಿಕೆಗಳು ನೆಲೆಯೂರಿವೆ ಎಂದರು.

ಉತ್ಪಾದನಾ ವೆಚ್ಚ ಕಡಿಮೆಯಾಗಿ, ದಕ್ಷತೆ ಹೆಚ್ಚಾಗಬೇಕು ಎನ್ನುವುದು ಸರಕಾರದ ನೀತಿಯಾಗಿದೆ. ಇದನ್ನು ಸಾಧಿಸಲು `ಕ್ಲಸ್ಟರ್ ಆಧಾರಿತ ನೀತಿ’ ಅಳವಡಿಸಿಕೊಳ್ಳಲಾಗಿದೆ. ಹೀಗಾಗಿ ಬೇರೆಬೇರೆ ಭಾಗಗಳಲ್ಲಿ ಏರೋಸ್ಪೇಸ್ ಮತ್ತು ಡಿಫೆನ್ಸ್, ಇ.ವಿ.ತಯಾರಿಕೆ ಕ್ಲಸ್ಟರ್, ಫಾರ್ಮಾ, ಡೀಪ್-ಟೆಕ್ ಮತ್ತು ಡ್ರೋನ್ ಪಾರ್ಕ್ ಗಳನ್ನು ಸ್ಥಾಪಿಸಲಾಗುತ್ತಿದೆ. ಕೈಗಾರಿಕಾ ಪ್ರದೇಶಗಳಿಗೆ ಹತ್ತಿರದ ನದಿ ಮೂಲಗಳಿಂದ ಶುದ್ಧ ಕುಡಿಯುವ ನೀರು ಪೂರೈಸಲು 3,800 ಕೋಟಿ ರೂ. ಮೊತ್ತದ ಬೃಹತ್ ಯೋಜನೆ ರೂಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಜಾಗತಿಕ ಮಟ್ಟದಲ್ಲಿ ಚೀನಾದಿಂದ ತೀವ್ರ ಸವಾಲು ಎದುರಾಗಿದ್ದು, ತಯಾರಿಕೆ ವಲಯದ ಚಿತ್ರಣವೇ ಬದಲಾಗಬೇಕಾದ ಅನಿವಾರ್ಯತೆ ಇದೆ. ಜೊತೆಗೆ ಜಾಗತಿಕ ಅಸ್ಥಿರತೆಯ ಸಮಸ್ಯೆಯೂ ಇದೆ. ಸರಕಾರವು ಪ್ರಗತಿಗೆ ಹೊಸ ಭಾಷ್ಯ ಬರೆಯಲು ಮುಂದಾಗಿದ್ದು, ಕರ್ನಾಟಕವನ್ನು ಜಾಗತಿಕ ಮಟ್ಟದಲ್ಲಿ ತಯಾರಿಕೆ ಮತ್ತು ನಾವೀನ್ಯತೆಯ ತೊಟ್ಟಿಲನ್ನಾಗಿ ಪ್ರತಿಷ್ಠಾಪಿಸಲಿದೆ ಎಂದು ಅವರು ಹೇಳಿದರು.

ತಂತ್ರಜ್ಞಾನದ ಬಳಕೆ, ಹೂಡಿಕೆ ಆಕರ್ಷಣೆ ಮತ್ತು ಸ್ಪರ್ಧಾತ್ಮಕ ಉದ್ಯಮಗಳ ಸ್ಥಾಪನೆಯೆ ಭವಿಷ್ಯದ ಆರ್ಥಿಕ ಬೆಳವಣಿಗೆಯ ನಿರ್ಣಾಯಕ ಶಕ್ತಿಗಳಾಗಿವೆ. ಇದಕ್ಕಾಗಿ ಕೈಗಾರಿಕಾ ರಂಗದಲ್ಲಿ ಡಿಜಿಟಲ್ ಪರಿವರ್ತನೆಯನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಜತೆಗೆ ಇಂಗಾಲವನ್ನು ಕಡಿಮೆ ಹೊರಸೂಸುವ ಹಾಗೂ ಪರಿಸರಸ್ನೇಹಿ ಉಪಕ್ರಮಗಳಿಗೂ ಗಮನ ಹರಿಸಲಾಗಿದೆ. 55 ಲಕ್ಷ ಜನರಿಗೆ ಉದ್ಯೋಗ ನೀಡಿರುವ 8 ಲಕ್ಷ ಮಧ್ಯಮ, ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳಿಗೆ ವಿಶೇಷ ಒತ್ತು ಕೊಡಲಾಗಿದೆ ಎಂದು ಅವರು ವಿವರಿಸಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X