Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೆಎಸ್‍ಡಿಎಲ್ ಪ್ರಚಾರ ರಾಯಭಾರಿಯಾಗಿ...

ಕೆಎಸ್‍ಡಿಎಲ್ ಪ್ರಚಾರ ರಾಯಭಾರಿಯಾಗಿ ತಮನ್ನಾ ನೇಮಕ | ವ್ಯಾಪಾರದಲ್ಲಿ ಸ್ಪರ್ಧಾತ್ಮಕತೆಯ ಪರಿಗಣನೆ ಮುಖ್ಯ : ಸಚಿವ ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ23 May 2025 10:40 PM IST
share
ಕೆಎಸ್‍ಡಿಎಲ್ ಪ್ರಚಾರ ರಾಯಭಾರಿಯಾಗಿ ತಮನ್ನಾ ನೇಮಕ | ವ್ಯಾಪಾರದಲ್ಲಿ ಸ್ಪರ್ಧಾತ್ಮಕತೆಯ ಪರಿಗಣನೆ ಮುಖ್ಯ : ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು : ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್‍ಡಿಎಲ್) ರಾಜ್ಯದ ಅಸ್ಮಿತೆ ಮತ್ತು ಹೆಮ್ಮೆಯ ಸಂಕೇತವಾಗಿದೆ. ವಚನ ಪರಂಪರೆಯಿಂದ ಬಂದಿರುವ ನನಗೆ ಕನ್ನಡ-ಕನ್ನಡಿಗ-ಕರ್ನಾಟಕದ ಮೇಲೆ ಅಪಾರ ಗೌರವವಿದೆ. ಇಲ್ಲಿಯ ಕಲಾವಿದರ ಬಗ್ಗೆ ಅಭಿಮಾನವೂ ಇದೆ. ಆದರೆ, ವ್ಯಾಪಾರದ ಪ್ರಶ್ನೆ ಬಂದಾಗ ಇಲ್ಲಿಯ ಸ್ಪರ್ಧಾತ್ಮಕತೆಯನ್ನು ನೋಡಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಕೆಎಸ್‍ಡಿಎಲ್ ಪ್ರಚಾರ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ಅವರನ್ನು ನೇಮಕ ಮಾಡಿರುವ ಕ್ರಮಕ್ಕೆ ಕನ್ನಡಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗುತ್ತಿರುವ ಕುರಿತು ಶುಕ್ರವಾರ ನಗರದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಈ ಮೇಲಿನಂತೆ ಪ್ರತಿಕ್ರಿಯಿಸಿದರು.

ಪರಿಣಿತರ ತಂಡದ ತೀರ್ಮಾನದಂತೆ ನಟಿ ತಮನ್ನಾ ಭಾಟಿಯಾ ಅವರನ್ನು ಕೆಎಸ್‍ಡಿಎಲ್ ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಳ್ಳಲಾಗಿದೆ. ಇದನ್ನು ನಕಾರಾತ್ಮಕವಾಗಿ ನೋಡಬಾರದು. ನಾನು ಈ ಖಾತೆಯನ್ನು ವಹಿಸಿಕೊಂಡ ಮೇಲೆ ಕೆಎಸ್‍ಡಿಎಲ್‍ನಲ್ಲಿ ಉತ್ಪಾದನೆ ಶೇ.40ರಷ್ಟು ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ನಾವೇನೂ ಹೊಸ ಯಂತ್ರೋಪಕರಣಗಳನ್ನು ಖರೀದಿಸಿಲ್ಲ ಎಂದು ಎಂ.ಬಿ.ಪಾಟೀಲ್ ಹೇಳಿದರು.

ಜತೆಗೆ ಎಫ್‍ಎಂಸಿಜಿ ವಲಯದಲ್ಲಿ ಸಂಸ್ಥೆಯ ಬೆಳವಣಿಗೆ ಶೇ.15ರಷ್ಟಿದೆ. ಈ ವಿಚಾರದಲ್ಲಿ ಗೋದ್ರೇಜ್ (ಶೇ.11), ಹಿಂದೂಸ್ತಾನ್ ಲಿವರ್ಸ್ (ಶೇ.9), ಐಟಿಸಿ (ಶೇ.8), ವಿಪ್ರೋ (ಶೇ.7) ಮುಂತಾದ ಉದ್ದಿಮೆಗಳನ್ನೂ ಕೆಎಸ್‍ಡಿಎಲ್ ಹಿಂದಿಕ್ಕಿದೆ. ನಾವು ಕೆಎಸ್‍ಡಿಎಲ್ ವಹಿವಾಟನ್ನು ಮುಂದಿನ ಮೂರು ವರ್ಷಗಳಲ್ಲಿ 5 ಸಾವಿರ ಕೋಟಿ ರೂ.ಗೆ ಕೊಂಡೊಯ್ಯಲು ನಿರ್ಧರಿಸಿದ್ದೇವೆ. ಆಗ ಹಾಲಿವುಡ್ ನಟಿಯೊಬ್ಬರನ್ನೇ ಪ್ರಚಾರ ರಾಯಭಾರಿಯನ್ನಾಗಿ ಮಾಡಿಕೊಳ್ಳಬೇಕಾಗುತ್ತದೆ. ಅಂತಹ ಪರಿಸ್ಥಿತಿ ಬರಲೆಂದು ನಾನು ಆಶಿಸುತ್ತೇನೆ ಎಂದು ಅವರು ವಿವರಿಸಿದರು.

ತಮನ್ನಾ ಅವರನ್ನು ನೇಮಿಸಿಕೊಳ್ಳುವ ಮೊದಲು ನಾವು ಕನ್ನಡದವರೇ ಆದ ದೀಪಿಕಾ ಪಡುಕೋಣೆ ಮತ್ತು ರಶ್ಮಿಕಾ ಮಂದಣ್ಣ ಅವರನ್ನು ಸಂಪರ್ಕಿಸಿದೆವು. ಜೊತೆಗೆ ಶ್ರೀಲೀಲಾ, ಪೂಜಾ ಹೆಗಡೆ, ಕಿಯಾರ ಅಡ್ವಾಣಿ ಅವರನ್ನೂ ಕೇಳಲಾಗಿದೆ. ದೀಪಿಕಾ ಅವರು ಅವರದೇ ಉತ್ಪನ್ನಗಳ ಪ್ರಚಾರದಲ್ಲಿ ಇದ್ದಾರೆ. ಹೀಗಾಗಿ ಬರಲಿಲ್ಲ ಎಂದು ಎಂ.ಬಿ.ಪಾಟೀಲ್ ಹೇಳಿದರು.

ಉಳಿದವರು ಬೇರೆಬೇರೆ ಸೌಂದರ್ಯವರ್ಧಕಗಳು, ಕ್ರೀಮುಗಳು ಮತ್ತು ಸಾಬೂನುಗಳಿಗೆ ರೂಪದರ್ಶಿಗಳಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಮುಂದಿನ ಎರಡು ವರ್ಷ ಅವರಾರೂ ತಮಗೆ ಬಿಡುವಿಲ್ಲ ಎಂದು ತಿಳಿಸಿದರು. ಹೀಗಾಗಿ, ಸೋಶಿಯಲ್ ಮೀಡಿಯಾ ವೇದಿಕೆಗಳಲ್ಲಿ 28 ದಶಲಕ್ಷ ಫಾಲೋಯರ್ಸ್ ಹೊಂದಿರುವ ತಮನ್ನಾ ಅವರನ್ನು ಅವರ ಅಖಿಲ ಭಾರತೀಯ ಮಟ್ಟದ ವರ್ಚಸ್ಸನ್ನು ನೋಡಿ ನೇಮಿಸಿಕೊಳ್ಳಲಾಯಿತು ಎಂದು ಅವರು ಸ್ಪಷ್ಟಪಡಿಸಿದರು.

ಕೆಎಸ್‍ಡಿಎಲ್ ಮೂಲಕ ಇತ್ತೀಚೆಗೆ 21 ಹೊಸ ಉತ್ಪನ್ನ ಬಿಡುಗಡೆ ಮಾಡಲಾಗಿದೆ. ಸದ್ಯದಲ್ಲೇ ನಾವು ಪರಿಮಳಗಳ ಕ್ಷೇತ್ರಕ್ಕೂ ಕಾಲಿಡುತ್ತಿದ್ದೇವೆ. ಇದಕ್ಕೆಂದೇ ನಮ್ಮ ಅಧಿಕಾರಿಗಳನ್ನು ಸುಗಂಧ ದ್ರವ್ಯಕ್ಕೆ ಹೆಸರಾಗಿರುವ ಉತ್ತರಪ್ರದೇಶದ ಕನೌಜ್‍ಗೂ ಕಳಿಸಿಕೊಡಲಾಗಿತ್ತು. ವ್ಯಾಪಾರದ ಪ್ರಶ್ನೆ ಬಂದಾಗ ನಾವು ಅದಕ್ಕೆ ತಕ್ಕ ಕಾರ್ಯತಂತ್ರವನ್ನೇ ರೂಪಿಸಬೇಕಾಗುತ್ತದೆ ಎಂದು ಎಂ.ಬಿ.ಪಾಟೀಲ್ ಹೇಳಿದರು.

ಪ್ರಚಾರ ರಾಯಭಾರಿಯ ನೇಮಕವನ್ನು ತಪ್ಪಾಗಿ ಭಾವಿಸಬಾರದು. ನಾವು ಅಧಿಕಾರಕ್ಕೆ ಬಂದಮೇಲೆ, ಕೆಎಸ್‍ಡಿಎಲ್ ವಹಿವಾಟು 1,700 ಕೋಟಿ ರೂ.ಗೂ ಹೆಚ್ಚಾಗಿದೆ. ಇದರ ಪೈಕಿ ರಾಜ್ಯದಲ್ಲಿ ನಡೆದಿರುವ ವಹಿವಾಟಿನ ಮೊತ್ತ 320 ಕೋಟಿ ರೂ. ಆಸುಪಾಸಿನಲ್ಲಿದೆ ಎಂದು ಅವರು ಹೇಳಿದರು.

ಕೆಎಸ್‍ಡಿಎಲ್ ತರಹದಲ್ಲೇ ಎಂಎಸ್‍ಐಎಲ್ ಸಂಸ್ಥೆಗೂ ನಾವು ಹೊಸ ರೂಪ ನೀಡುತ್ತಿದ್ದು, ಸದ್ಯದಲ್ಲೇ ವಾರ್ಷಿಕ 10 ಸಾವಿರ ಕೋಟಿ ರೂ. ವಹಿವಾಟಿನ ಗುರಿಯುಳ್ಳ ಚಿಟ್ ಫಂಡ್ ಆರಂಭಿಸುತ್ತಿದ್ದೇವೆ. ಹುಬ್ಬಳ್ಳಿಯಲ್ಲಿರುವ ಎನ್‍ಜಿಇಎಫ್ ಅನ್ನು ಕೂಡ ಉಳಿಸಿಕೊಳ್ಳಬೇಕಾಗಿದೆ ಎಂದು ಎಂದು ಎಂ.ಬಿ.ಪಾಟೀಲ್ ತಿಳಿಸಿದರು.

ನಾವು ಅಖಿಲ ಭಾರತ ಮಟ್ಟವನ್ನು ಮೀರಿ ಜಾಗತಿಕ ಸ್ತರದಲ್ಲಿ ಯೋಚಿಸಬೇಕಾಗಿದೆ. ಕೆಎಸ್‍ಡಿಎಲ್ ಅನ್ನು ಕೇವಲ ಭಾರತವಲ್ಲ, ಅಂತರ್‍ರಾಷ್ಟ್ರೀಯ ಬ್ರ್ಯಾಂಡ್ ಆಗಿಸಬೇಕೆನ್ನುವುದು ನಮ್ಮ ಹೆಗ್ಗುರಿ ಎಂದು ಎಂ.ಬಿ.ಪಾಟೀಲ್ ಪ್ರತಿಪಾದಿಸಿದರು. ಈ ಸಂದರ್ಭದಲ್ಲಿ ಕೆಎಸ್‍ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ್ ಉಪಸ್ಥಿತರಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X