Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಟ್ರಿಲಿಯನ್ ಡಾಲರ್ ಆರ್ಥಿಕತೆಗೆ...

ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಎಂಎಸ್‍ಎಂಇ ಬೆನ್ನೆಲುಬು : ಸಚಿವ ಎಂ.ಬಿ.ಪಾಟೀಲ್

ʼಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಮಾವೇಶ-2025’

ವಾರ್ತಾಭಾರತಿವಾರ್ತಾಭಾರತಿ30 May 2025 8:06 PM IST
share
ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಎಂಎಸ್‍ಎಂಇ ಬೆನ್ನೆಲುಬು : ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು : 2032ರ ವೇಳೆಗೆ ರಾಜ್ಯವು 1 ಟ್ರಿಲಿಯನ್ ಡಾಲರ್ ಮೌಲ್ಯದ ಆರ್ಥಿಕತೆಯಾಗಿ ಬೆಳೆಯಬೇಕು. ಇದು ಸಾಧ್ಯವಾಗಬೇಕೆಂದರೆ, ಎಂಎಸ್‍ಎಂಇ ವಲಯ ಶಕ್ತವಾಗಿರಬೇಕು. ಇದಕ್ಕಾಗಿ ಸಾಲ ಸೌಲಭ್ಯ, ಕೌಶಲ್ಯಪೂರ್ಣ ಉದ್ಯೋಗಿಗಳು ಮತ್ತು ಟೆಸ್ಟಿಂಗ್ ಸೌಲಭ್ಯಗಳಿಗೆ ಆದ್ಯತೆ ಕೊಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು.

ಶುಕ್ರವಾರ ನಗರದ ಅರಮನೆ ಮೈದಾನದಲ್ಲಿ ಕಾಸಿಯಾ, ಎಫ್.ಕೆ.ಸಿ.ಸಿ.ಐ ಮತ್ತು ಪೀಣ್ಯ ಕೈಗಾರಿಕೆಗಳ ಒಕ್ಕೂಟ ಸಂಯುಕ್ತವಾಗಿ ಏರ್ಪಡಿಸಿದ್ದ ʼಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಮಾವೇಶ-2025’ರಲ್ಲಿ ಅವರು ಮಾತನಾಡಿದರು.

ರಾಜ್ಯ ಸರಕಾರವು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಉತ್ತೇಜನ ನೀಡಲು `ಎಂಎಸ್‍ಎಂಇ ಕನೆಕ್ಟ್’ ಮತ್ತು `ವೆಂಚುರೈಸ್’ ತರಹದ ರಚನಾತ್ಮಕ ಉಪಕ್ರಮಗಳನ್ನು ಕೈಗೊಂಡಿದೆ. ತಯಾರಿಕೆ ವಲಯದಲ್ಲಿ ಶೇ.12ರಷ್ಟು ಬೆಳವಣಿಗೆ ಸಾಧಿಸುವ ಮೂಲಕ 2029ರ ಹೊತ್ತಿಗೆ 20 ಲಕ್ಷ ಉದ್ಯೋಗ ಸೃಷ್ಟಿಸಲಾಗುವುದು. ಜತೆಗೆ 2 ಮತ್ತು 3ನೆ ಹಂತದ ನಗರಗಳಲ್ಲಿ ಉದ್ಯಮಗಳು ನೆಲೆಯೂರುವಂತೆ ಮಾಡಲು ಮೂಲಸೌಕರ್ಯ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಎಂ.ಬಿ.ಪಾಟೀಲ್ ಹೇಳಿದರು.

ರಾಜ್ಯದಲ್ಲಿ 38 ಲಕ್ಷ ಎಂಎಸ್‍ಎಂಇ ಉದ್ಯಮಗಳಿದ್ದು, ಇವು ಲಕ್ಷಾಂತರ ಜನರಿಗೆ ಉದ್ಯೋಗ ನೀಡುವ ಜತೆಗೆ ಸಾವಿರಾರು ಕೋಟಿ ರೂ. ವಹಿವಾಟು ನಡೆಸುತ್ತಿವೆ. ಭಾರತದ ಜಿಡಿಪಿ ಬೆಳವಣಿಗೆಗೆ ಎಂಎಸ್‍ಎಂಇ ವಲಯವು ಶೇ.30ರಷ್ಟು ಕೊಡುಗೆ ನೀಡುತ್ತಿದ್ದು, 15 ಕೋಟಿ ಜನರಿಗೆ ಬದುಕು ನೀಡಿವೆ. ಅದರಲ್ಲೂ ಮಹಿಳೆಯರು ಮತ್ತು ಎಸ್ಸಿ-ಎಸ್ಟಿ ಸಮುದಾಯಗಳಿಂದ ಬಂದ ಉದ್ಯಮಿಗಳು ಇಲ್ಲಿ ಮಹತ್ತರ ಪಾತ್ರ ವಹಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿರುವ ಈ ಉದ್ದಿಮೆಗಳಲ್ಲಿ ಸಾಂಪ್ರದಾಯಿಕ ಉತ್ಪಾದನೆಯಿಂದ ಹಿಡಿದು ಅತ್ಯಾಧುನಿಕ ತಂತ್ರಜ್ಞಾನವನ್ನು ಆಧರಿಸಿದ ಉತ್ಪಾದನೆಯವರೆಗೆ ವ್ಯವಸ್ಥೆ ಇದೆ. ಇಲ್ಲಿ ಗುಂಡುಸೂಜಿಯಿಂದ ಹಿಡಿದು ವಿಮಾನದವರೆಗೆ ಎಲ್ಲವೂ ತಯಾರಾಗುತ್ತಿದೆ. ನಮ್ಮಲ್ಲಿ ಇಂಜಿನಿಯರಿಂಗ್ ಮತ್ತು ಮ್ಯಾನುಫ್ಯಾಕ್ಚರಿಂಗ್ ಎರಡೂ ಆಧಾರಸ್ತಂಭಗಳಾಗಿವೆ. ಇದರಿಂದಾಗಿ ಜಾಗತಿಕ ಗುಣಮಟ್ಟದ ತಯಾರಿಕೆ, ರಫ್ತು ವಹಿವಾಟು ಮತ್ತು ಉದ್ಯೋಗಸೃಷ್ಟಿ ಮೂರೂ ಸ್ಥಿರವಾಗಿ ನಡೆಯುತ್ತಿದೆ ಎಂದು ಎಂ.ಬಿ.ಪಾಟೀಲ್ ನುಡಿದರು.

ರಾಜ್ಯದ ಹೊಸ ಕೈಗಾರಿಕಾ ನೀತಿಯಲ್ಲಿ ಹಿಂದುಳಿದಿರುವ ಪ್ರದೇಶಗಳಲ್ಲಿ ಉದ್ದಿಮೆಗಳನ್ನು ಬೆಳೆಸಲು ಹಲವು ಸೌಕರ್ಯಗಳನ್ನು ಕೊಡಲಾಗುತ್ತಿದೆ. ಎಂಎಸ್‍ಎಂಇ ಕನೆಕ್ಟ್ ಅಡಿಯಲ್ಲಿ 1,800 ಉದ್ದಿಮೆಗಳಿಗೆ ನೆರವು ಒದಗಿಸುತ್ತಿದ್ದು, ಇವುಗಳ ಪೈಕಿ 60 ಉದ್ದಿಮೆಗಳು ಈಗಾಗಲೇ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡಿವೆ. ವೆಂಚುರೈಸ್ ಉಪಕ್ರಮದ ಮೂಲಕ ನವೋದ್ಯಮಗಳು ಮತ್ತು ಸಣ್ಣ ಕೈಗಾರಿಕೆಗಳಿಗೆ ಮಾರ್ಗದರ್ಶನ ಮತ್ತು ಆರ್ಥಿಕ ನಿಧಿಯನ್ನು ಕೊಡಲಾಗುತ್ತಿದೆ ಎಂದು ಅವರು ವಿವರಿಸಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪುರ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಎಫ್‍ಕೆಸಿಸಿಐ ಅಧ್ಯಕ್ಷ ಎಂ.ಜಿ.ಬಾಲಕೃಷ್ಣ, ಕಾಸಿಯಾ ಅಧ್ಯಕ್ಷ ಎಂ.ಜಿ.ರಾಜಗೋಪಾಲ್, ಪಿಐಎ ಅಧ್ಯಕ್ಷ ಶಿವಕುಮಾರ್, ಕೆಎಸ್‍ಎಸ್‍ಐಡಿಸಿ ಅಧ್ಯಕ್ಷ ಟಿ.ರಘುಮೂರ್ತಿ, ಎಂಎಸ್‍ಎಂಇ ಇಲಾಖೆಯ ನಿರ್ದೇಶಕ ನಿತೀಶ್ ಪಾಟೀಲ್ ಮುಂತಾದವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X