Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಜ್ಯದಲ್ಲಿ 1.53 ಲಕ್ಷ ಕೋಟಿ ರೂ.ಹೊಸ...

ರಾಜ್ಯದಲ್ಲಿ 1.53 ಲಕ್ಷ ಕೋಟಿ ರೂ.ಹೊಸ ಹೂಡಿಕೆ ಆಕರ್ಷಣೆ : ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ17 Jan 2026 10:08 PM IST
share
ರಾಜ್ಯದಲ್ಲಿ 1.53 ಲಕ್ಷ ಕೋಟಿ ರೂ.ಹೊಸ ಹೂಡಿಕೆ ಆಕರ್ಷಣೆ : ಎಂ.ಬಿ.ಪಾಟೀಲ್

ಬೆಂಗಳೂರು : ಹಿಂದಿನ ವಾರ್ಷಿಕ ಸಾಲಿನ ಫೆಬ್ರವರಿಯಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಿದ ನಂತರದ 11 ತಿಂಗಳ ಅವಧಿಯಲ್ಲಿ ರಾಜ್ಯವು 1.53 ಲಕ್ಷ ಕೋಟಿ ರೂ.ಗಳಷ್ಟು ಹೊಸ ಹೂಡಿಕೆಯ ಹಲವು ಕೈಗಾರಿಕಾ ಯೋಜನೆಗಳನ್ನು ಆಕರ್ಷಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ರಾಜ್ಯ ಸರಕಾರದ ಉನ್ನತ ಮಟ್ಟದ ನಿಯೋಗದೊಂದಿಗೆ ದಾವೋಸ್ ಆರ್ಥಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ತೆರಳುವ ಮುನ್ನ ಈ ಬಗ್ಗೆ ವಿವರ ನೀಡಿರುವ ಅವರು, ರಾಜ್ಯಕ್ಕೆ ಹೂಡಿಕೆಯನ್ನು ಆಕರ್ಷಿಸುವ ಪ್ರಯತ್ನಗಳು ನಿರಂತರವಾಗಿ ಸಾಗಿದ್ದು, ಅದು ಕೇವಲ ಹೂಡಿಕೆದಾರರ ಸಮಾವೇಶಕ್ಕೆ ಮಾತ್ರ ಸೀಮಿತವಾಗಿಲ್ಲ. ತಯಾರಿಕೆ, ಮರುಬಳಕೆ ಇಂಧನ, ಡೇಟಾ ಕೇಂದ್ರಗಳು ಮತ್ತು ಜಾಗತಿಕ ಸಾಮರ್ಥ್ಯ ಕೇಂದ್ರಗಳ (ಜಿಸಿಸಿ) ಸ್ಥಾಪನೆಯ ಈ ವಲಯಗಳಲ್ಲಿ ಹಲವು ಅಗ್ರಗಣ್ಯ ಉದ್ಯಮ ಸಂಸ್ಥೆಗಳು ಈ ಹೂಡಿಕೆ ಮಾಡಲು ಆಸಕ್ತಿ ತೋರಿಸಿವೆ ಎಂದು ಹೇಳಿದ್ದಾರೆ.

11 ತಿಂಗಳಲ್ಲಿ ಆಕರ್ಷಿಸಿರುವ ಹೊಸ ಬಂಡವಾಳದಲ್ಲಿ ತಯಾರಿಕೆ ವಲಯದಲ್ಲಿ 66,293 ಕೋಟಿ ರೂ., ಪವನ ಮತ್ತು ಸೌರ ವಿದ್ಯುತ್ ಉತ್ಪಾದನೆಗೆ 20,913 ಕೋಟಿ ರೂ., ಜಿಸಿಸಿ ಕೇಂದ್ರಗಳ ಸ್ಥಾಪನೆಗೆ 12,500 ಕೋಟಿ ರೂ. ಮತ್ತು ಡೇಟಾ ಸೆಂಟರ್‍ಗಳ ಸ್ಥಾಪನೆಗೆ 6,350 ಕೋಟಿ ರೂಪಾಯಿ ಹೂಡಿಕೆ ಆಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಟೊಯೋಟಾ ಕಂಪನಿ ಜಿಗಣಿಯ ತನ್ನ ಘಟಕದಲ್ಲಿ ಗ್ಯಾಸೊಲಿನ್ ಮತ್ತು ಹೈಬ್ರಿಡ್ ಇಂಜಿನ್‍ಗಳ ತಯಾರಿಕೆಗೆ 1,330 ಕೋಟಿ ರೂ. ಕ್ಯೂಪೈಎಐ ಕಂಪೆನಿಯು ಬೆಂಗಳೂರಿನಲ್ಲಿ ತನ್ನ ಕ್ವಾಂಟಂ ಉತ್ಕೃಷ್ಟತಾ ಕೇಂದ್ರ ಸ್ಥಾಪನೆಗೆ 1,136 ಕೋಟಿ ರೂ. ಎಟಿ&ಎಸ್ ಕಂಪೆನಿಯು ಎಲೆಕ್ಟ್ರಾನಿಕ್ ಬಿಡಿಭಾಗಗಳ ತಯಾರಿಕೆಗೆ ನಂಜನಗೂಡಿನಲ್ಲಿ 2,850 ಕೋಟಿ ರೂ. ವಿಪ್ರೋ ಹೈಡ್ರಾಲಿಕ್ಸ್ ಕಂಪೆನಿಯು ಎಲೆಕ್ಟ್ರಾನಿಕ್ಸ್ ಮತ್ತು ಪಿಸಿಬಿ ವಲಯಕ್ಕೆ ಬೇಕಾದ ತಾಮ್ರದ ಲ್ಯಾಮಿನೇಟ್ ತಯಾರಿಕೆಗೆ 499 ಕೋಟಿ ರೂ. ಝೆನ್-ಫೋಲ್ಡ್ ಬಯೋಸೈನ್ಸಸ್ ಲಿಮಿಟೆಡ್ ಔಷಧ ವಿಜ್ಞಾನ ಕ್ಷೇತ್ರಕ್ಕೆ ಬೇಕಾಗುವ ಕಿಣ್ವಗಳ ತಯಾರಿಕೆಗೆ 490 ಕೋಟಿ ರೂ. ಹೂಡಿಕೆ ಮಾಡುತ್ತಿವೆ ಎಂದು ಅವರು ಅಂಕಿ-ಅಂಶ ಸಹಿತ ವಿವರಿಸಿದ್ದಾರೆ.

ಉಳಿದಂತೆ ಜೆಜೆಜಿ ಏರೋಸ್ಪೇಸ್ ವಿಮಾನಗಳ ಬಿಡಿಭಾಗಗಳ ತಯಾರಿಕೆಗೆ ದೊಡ್ಡಬಳ್ಳಾಪುರದ ಆದಿನಾರಾಯಣ ಹೊಸಹಳ್ಳಿಯಲ್ಲಿ 470 ಕೋಟಿ ರೂ. ಯಸಾಕಾವ ಇದೇ ಕೈಗಾರಿಕಾ ಪ್ರದೇಶದಲ್ಲಿ ವಿದ್ಯುನ್ಮಾನ ಉತ್ಪನ್ನಗಳ ತಯಾರಿಕಾ ಘಟಕ ಸ್ಥಾಪನೆಗೆ 330 ಕೋಟಿ ರೂ. ಐನಾಕ್ಸ್ ವಿಂಡ್ ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ವಿಂಡ್ ಟರ್ಬೈನ್ ತಯಾರಿಕಾ ಘಟಕ ಸ್ಥಾಪನೆಗೆ 305 ಕೋಟಿ ರೂ., 4,000 ಕೋಟಿ ರೂ. ಡೇಟಾ ಸಮುದ್ರ ಕಂಪನಿಗೆ ಮಂಗಳೂರು, ಹುಬ್ಬಳ್ಳಿ-ಧಾರವಾಡ ಮತ್ತು ಮೈಸೂರಿನಲ್ಲಿ 1,350 ಕೋಟಿ ರೂ. ಹಳದಿರಾಮ್ಸ್ ಸಮೂಹವು ತುಮಕೂರಿನ ವಸಂತ ನರಸಾಪುರದಲ್ಲಿ ತನ್ನ ಕುರುಕಲು ತಿಂಡಿ ಘಟಕ ಸ್ಥಾಪನೆಗೆ 444 ಕೋಟಿ ರೂ. ಬಂಡವಾಳ ಹೂಡಿಕೆ ಮಾಡಿವೆ ಎಂದು ಸಚಿವರು ತಿಳಿಸಿದ್ದಾರೆ.

Tags

M.B.Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X