Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪಾನೀಯ ತಯಾರಿಕೆ ಮತ್ತು ಆಹಾರ ಸಂಸ್ಕರಣಾ...

ಪಾನೀಯ ತಯಾರಿಕೆ ಮತ್ತು ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ವಿಜಯಪುರ ಜಿಲ್ಲೆ ಹೆಚ್ಚು ಸೂಕ್ತ : ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ20 Jan 2026 11:45 PM IST
share
ಪಾನೀಯ ತಯಾರಿಕೆ ಮತ್ತು ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ವಿಜಯಪುರ ಜಿಲ್ಲೆ ಹೆಚ್ಚು ಸೂಕ್ತ : ಎಂ.ಬಿ.ಪಾಟೀಲ್
‘ಕೋಕ-ಕೋಲಾದ 25,760 ಕೋಟಿ ರೂ.ಹೂಡಿಕೆಯ ಬಹುಪಾಲು ರಾಜ್ಯಕ್ಕೆ ಸೆಳೆಯಲು ಪ್ರಯತ್ನ

ಬೆಂಗಳೂರು : ದೇಶದ ಆಹಾರ ಸಂಸ್ಕರಣಾ ವಲಯದಲ್ಲಿ ಕೋಕಾ ಕೋಲಾ ಹೂಡಿಕೆ ಮಾಡಲಿರುವ 25,760 ಕೋಟಿ ರೂ. ಬಂಡವಾಳದಲ್ಲಿ ಗಮನಾರ್ಹ ಮೊತ್ತವನ್ನು ರಾಜ್ಯಕ್ಕೆ ಆಕರ್ಷಿಸಲು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಕಂಪೆನಿಯ ಮನವೊಲಿಸಲು ಪ್ರಯತ್ನ ಮಾಡಿದ್ದಾರೆ.

ದಾವೋಸ್‍ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಸಮಾವೇಶದ ಮೊದಲ ದಿನ ಕೋಕ ಕೋಲಾ ಕಂಪನಿಯ ಜಾಗತಿಕ ನೀತಿ ಹಾಗೂ ಸುಸ್ಥಿರತೆಯ ಹಿರಿಯ ಉಪಾಧ್ಯಕ್ಷ ಮೈಕಲ್ ಗೋಲ್ಟ್ಜಮನ್ ಅವರ ಜೊತೆಗಿನ ಸಭೆಯಲ್ಲಿ ಎಂ.ಬಿ.ಪಾಟೀಲ್ ಅವರು, ಈ ಸಂಗತಿಯನ್ನು ಪ್ರಮುಖವಾಗಿ ಚರ್ಚಿಸಿದರು. ಕಂಪನಿಯು ಭಾರತದಲ್ಲಿ ಹೂಡಿಕೆ ಮಾಡಲಿರುವ ಬಂಡವಾಳದಲ್ಲಿ ಗಮನಾರ್ಹ ಮೊತ್ತವು ಕರ್ನಾಟಕಕ್ಕೆ ಹರಿದು ಬರಲು ಅಗತ್ಯವಾದ ಎಲ್ಲ ಸೌಲಭ್ಯ ಹಾಗೂ ಬೆಂಬಲ ನೀಡಲು ರಾಜ್ಯ ಸರಕಾರ ಉತ್ಸುಕವಾಗಿರುವುದಾಗಿ ಭರವಸೆ ನೀಡಿದರು.

ಕಂಪನಿಯ ಪಾನೀಯ ತಯಾರಿಕೆ ಮತ್ತು ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ವಿಜಯಪುರ ಜಿಲ್ಲೆಯು ಸೂಕ್ತ ಸ್ಥಳವಾಗಿರುವುದನ್ನು ಮನವರಿಕೆ ಮಾಡಿಕೊಡಲಾಗಿದೆ. ಈ ಪ್ರದೇಶದಲ್ಲಿ ಪಾನೀಯ ತಯಾರಿಸುವ ಕೈಗಾರಿಕೆಗಳ ಬಳಕೆಗೆ ಅಗತ್ಯವಾಗಿರುವ ನೀರು ಅಪಾರ ಪ್ರಮಾಣದಲ್ಲಿ ಸುಸ್ಥಿರ ರೀತಿಯಲ್ಲಿ ಲಭ್ಯ ಇರುವುದನ್ನು ಕಂಪನಿಯ ಮುಖ್ಯಸ್ಥರ ಗಮನಕ್ಕೆ ತರಲಾಗಿದೆ. ಬಂಡವಾಳ ಹೂಡಿಕೆ ಮಾಡುವಾಗ ಈ ಜಿಲ್ಲೆಗೆ ಆದ್ಯತೆ ನೀಡಲು ಒತ್ತಾಯಿಸಲಾಗಿದೆ ಎಂದು ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಸಚಿವರ ನೇತೃತ್ವದಲ್ಲಿನ ರಾಜ್ಯದ ಉನ್ನತ ಮಟ್ಟದ ನಿಯೋಗವು ದೇಶ- ವಿದೇಶಗಳ ಬಹುರಾಷ್ಟ್ರೀಯ ಕಂಪನಿಗಳ ದಿಗ್ಗಜರನ್ನು ಭೇಟಿಯಾಗಿ ರಾಜ್ಯದಲ್ಲಿ ಉದ್ಯಮ ಸ್ಥಾಪನೆ, ವಿಸ್ತರಣೆ ಹಾಗೂ ಬಂಡವಾಳ ಹೂಡಿಕೆ ಆಕರ್ಷಿಸಲು ರಾಜ್ಯ ಸರಕಾರ ಕೊಡಮಾಡಲಿರುವ ಸಬ್ಸಿಡಿ, ಉತ್ತೇಜನಾ ಕ್ರಮಗಳನ್ನು ವಿವರಿಸಿತು.

ಮೆಂಜಿಸ್ ಏವಿಯೇಷನ್ನಿನ ಕಾರ್ಯನಿರ್ವಾಹಕ ಅಧ್ಯಕ್ಷ ಹ್ಯಾಸನ್ ಎಲ್.ಹೌರಿ, ಯುಪಿಎಲ್‍ನ ಅಧ್ಯಕ್ಷ ಜೈ ಶ್ರಾಫ್, ಎಬಿ ಇನ್‍ಬೆವ್‍ನ ಕಾರ್ಪೊ ರೇಟ್ ವ್ಯವಹಾರಗಳ ಅಧಿಕಾರಿ ಜಾನ್ ಬ್ಲಡ್, ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರನ್, ನ್ಯಾಚುರಲ್ ಫೈಬರ್ ವೆಲ್ಡಿಂಗ್ (ಎನ್‍ಎಫ್‍ಡಬ್ಲ್ಯು ಅರ್ಥ್)ನ ಸುಹಾಸ್ ಉಪ್ಪಲಪತಿ ಅವರ ಜೊತೆ ಫಲಪ್ರದ ಮಾತುಕತೆ ನಡೆಸಿತು.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗ್ರೌಂಡ್ ಹ್ಯಾಂಡ್ಲಿಂಗ್ ಉದ್ದೇಶದ ಟೆಂಡರ್ ದೊರೆತರೆ 85 ಕೋಟಿ ರೂ. ಹೂಡಿಕೆ ಮಾಡಲಿರುವುದನ್ನು ಮೆಂಜಿಸ್ ಏವಿಯೇಷನ್ ರಾಜ್ಯದ ನಿಯೋಗದ ಗಮನಕ್ಕೆ ತಂದಿತು. ತನ್ನ ಜಾಗತಿಕ ಕಾರ್ಯಾಚರಣೆಗಳಿಗೆ ಪೂರಕವಾಗಿ ರಾಜ್ಯದಲ್ಲಿ ಶ್ರೇಷ್ಠತಾ ಕೇಂದ್ರ ಹಾಗೂ ಜಾಗತಿಕ ಸಾಮಥ್ರ್ಯ ಕೇಂದ್ರಗಳನ್ನು ಸ್ಥಾಪಿಸುವ ಸಾಧ್ಯತೆಗಳನ್ನು ಪರಿಶೀಲಿಸುವುದಾಗಿ ನಿಯೋಗಕ್ಕೆ ತಿಳಿಸಿದೆ.

ಕೃಷಿ ರಾಸಾಯನಿಕ ಮತ್ತು ಬೆಳೆ ಸಂರಕ್ಷಣಾ ಕಂಪನಿ ಯುಪಿಎಲ್ ಲಿಮಿಟೆಡ್, ಕೃಷಿ ಪರಿಹಾರ ಮತ್ತು ನೀರಾವರಿ ತಂತ್ರಜ್ಞಾನಗಳಲ್ಲಿ ಕರ್ನಾಟಕದಲ್ಲಿ ತನ್ನ ವಹಿವಾಟು ವಿಸ್ತರಿಸಲು ಆಸಕ್ತಿ ವ್ಯಕ್ತಪಡಿಸಿದೆ. ರಫ್ತು ಮಾರುಕಟ್ಟೆಗಳಿಗೆ ಮೌಲ್ಯವರ್ಧಿತ ಮೆಕ್ಕೆಜೋಳ ಆಧಾರಿತ ಉತ್ಪನ್ನಗಳನ್ನು ತಯಾರಿಸುವ ಸಾಧ್ಯತೆಗಳನ್ನು ಕಂಪನಿಯು ಪ್ರಸ್ತಾಪಿಸಿದೆ. ಎಥೆನಾಲ್ ರಫ್ತು ಸಾಧ್ಯತೆ ಸೇರಿದಂತೆ ಎಥೆನಾಲ್ ಸ್ಥಾವರ ನಿರ್ಮಾಣದ ಬಗ್ಗೆ ಚರ್ಚಿಸಲಾಗಿದೆ.

ಪ್ರವರ್ಧಮಾನಕ್ಕೆ ಬರುತ್ತಿರುವ ತಂತ್ರಜ್ಞಾನ ಕ್ಷೇತ್ರಗಳಲ್ಲಿನ ವಿಶ್ವ ಆರ್ಥಿಕ ವೇದಿಕೆಯ ಕಾರ್ಯಕ್ರಮಗಳ ಪ್ರಾಯೋಗಿಕ ಪರೀಕ್ಷೆಗೆ ಕರ್ನಾಟಕವು ಸೂಕ್ತ ತಾಣವಾಗಿರುವುದನ್ನು ‘ಡಬ್ಲ್ಯುಇಎಫ್’ ನಿಯೋಗದ ಗಮನಕ್ಕೆ ತರಲಾಗಿದೆ. ರಾಜ್ಯದಲ್ಲಿನ ಟಾಟಾ ಸನ್ಸ್‌ ನ ಭವಿಷ್ಯದ ಯೋಜನೆಗಳ ಬಗ್ಗೆ ಮಾಹಿತಿ ವಿನಿಮಯ ಮಾಡಿಕೊಳ್ಳಲಾಗಿದೆ.

ಎಬಿ ಇನ್‍ಬೆವ್ ರಾಜ್ಯದಲ್ಲಿ ತನ್ನ ಕಾರ್ಯಾಚರಣೆಗಳನ್ನು ಮತ್ತಷ್ಟು ವಿಸ್ತರಿಸುವ ಬಗ್ಗೆ ಸ್ಪಷ್ಟ ಇಂಗಿತ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ತನ್ನ ವಹಿವಾಟಿನ ಬಗ್ಗೆ ರಾಜ್ಯ ಸರ್ಕಾರದ ಜೊತೆ ಯೋಜನಾ ಪ್ರಸ್ತಾವ ಹಂಚಿಕೊಳ್ಳುವುದಾಗಿ ನ್ಯಾಚುರಲ್ ಫೈಬರ್ ವೆಲ್ಡಿಂಗ್‍ನ (ಎನ್‍ಎಫ್‍ಡಬ್ಲ್ಯು ಅರ್ಥ್) ಉನ್ನತಾಧಿಕಾರಿಗಳ ತಂಡವು ರಾಜ್ಯದ ನಿಯೋಗಕ್ಕೆ ಭರವಸೆ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಬಿಡಿಎ ಆಯುಕ್ತ ಮಣಿವಣ್ಣನ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕೈಗಾರಿಕಾ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಅವರು ರಾಜ್ಯದ ನಿಯೋಗದಲ್ಲಿ ಇದ್ದಾರೆ.

Tags

M.B.Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X