Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಫ್ರಾನ್ಸ್‌ ನಲ್ಲಿ ಕೈಗಾರಿಕಾ ಸಚಿವ...

ಫ್ರಾನ್ಸ್‌ ನಲ್ಲಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್; ‘ಲಿಸಿ ಏರೋಸ್ಪೇಸ್, ಆರ್ಕೆಮಾ ಕಂಪೆನಿಗಳ ಜತೆ ವಿಚಾರ ವಿನಿಮಯ’

ವಾರ್ತಾಭಾರತಿವಾರ್ತಾಭಾರತಿ9 Sept 2026 9:46 PM IST
share
ಫ್ರಾನ್ಸ್‌ ನಲ್ಲಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್; ‘ಲಿಸಿ ಏರೋಸ್ಪೇಸ್, ಆರ್ಕೆಮಾ ಕಂಪೆನಿಗಳ ಜತೆ ವಿಚಾರ ವಿನಿಮಯ’

ಬೆಂಗಳೂರು : ರಾಜ್ಯದ ಕೈಗಾರಿಕಾ ಕ್ಷೇತ್ರಕ್ಕೆ ಹೆಚ್ಚಿನ ಬಂಡಾವಳ ಹೂಡಿಕೆ ಸೆಳೆಯುವ ಉದ್ದೇಶದೊಂದಿಗೆ ಫ್ರಾನ್ಸ್ ಪ್ರವಾಸದಲ್ಲಿರುವ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮೂರನೆಯ ದಿನವಾದ ಬುಧವಾರ ಲಿಸಿ ಏರೋಸ್ಪೇಸ್, ಆಬರ್ಟ್ ಆಂಡ್ ಡುವಲ್ ಮತ್ತು ಆರ್ಕೆಮಾ ಕಂಪೆನಿಗಳ ಜತೆ ಮಾತುಕತೆ ನಡೆಸಿದ್ದಾರೆ.

ಈ ಬಗ್ಗೆ ಪ್ಯಾರಿಸ್‍ನಿಂದ ಮಾಹಿತಿ ನೀಡಿರುವ ಅವರು, ಸಂಕೀರ್ಣ ಮೆಟಾಲಿಕ್ ಮೆಟೀರಿಯಲ್ ಕ್ಷೇತ್ರದಲ್ಲಿ ಅಗ್ರ ಕಂಪೆನಿಯಾಗಿರುವ ಆಬರ್ಟ್ ಆಂಡ್ ಡುವಲ್ ಕಂಪೆನಿಗೆ ಬೆಳಗಾವಿಯಲ್ಲಿ ಈಗಾಗಲೇ ಇರುವ ತನ್ನ ಉತ್ಪಾದನಾ ಘಟಕದ ಸಾಮಥ್ರ್ಯವನ್ನು ಹೆಚ್ಚಿಸುವಂತೆ ಕೋರಲಾಗಿದೆ ಎಂದಿದ್ದಾರೆ.

ಕಂಪೆನಿಯು ಬೆಳಗಾವಿಯಲ್ಲಿನ ಏಕಸ್ ಏರೋಸ್ಪೇಸ್ ವಿಶೇಷ ಆರ್ಥಿಕ ವಲಯದಲ್ಲಿ ನೆಲೆಯೂರಿದೆ. ಕಂಪೆನಿಯು ಮತ್ತಷ್ಟು ಬಂಡವಾಳ ಹೂಡಿಕೆ ಮಾಡುವ ಕುರಿತು ಏಕಸ್ ಜತೆ ಚರ್ಚಿಸಬೇಕಾದ ಅಗತ್ಯವನ್ನು ರಾಜ್ಯ ಸರಕಾರ ಮತ್ತು ಕಂಪೆನಿಯ ಪ್ರತಿನಿಧಿಗಳು ಒಪ್ಪಿಕೊಂಡಿದ್ದಾರೆ. ಕಂಪೆನಿಯು ರಾಜ್ಯದಲ್ಲಿ ಸ್ಕ್ವಾಡ್ ಫೋರ್ಜಿಂಗ್‌ ಇಂಡಿಯಾ ಜತೆಯಲ್ಲೂ ಸಹಭಾಗಿತ್ವ ಹೊಂದಿದೆಎಂದು ಅವರು ತಿಳಿಸಿದ್ದಾರೆ.

ಲಿಸಿ ಏರೋಸ್ಪೇಸ್ ಕಂಪೆನಿಯು ಬಿಡಿಭಾಗಗಳ ತಯಾರಿಕೆಯಲ್ಲಿ ಪರಿಣತಿ ಹೊಂದಿದ್ದು, ಬೆಂಗಳೂರಿನಲ್ಲಿ ತಯಾರಿಕಾ ಘಟಕವನ್ನು ಹೊಂದಿದೆ. ಕಂಪೆನಿಯು ತನ್ನ ಭವಿಷ್ಯದ ಹೂಡಿಕೆ ಯೋಜನೆಗಳನ್ನು ಹಂಚಿಕೊಂಡಿದೆ. ನಾವು ರಾಜ್ಯದಲ್ಲೇ ಹೂಡಿಕೆ ಮಾಡುವಂತೆ ಹೇಳಿದ್ದೇವೆ ಎಂದು ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ತನ್ನ ತಯಾರಿಕಾ ಸ್ಥಾವರ ಹೊಂದಿರುವ ಮೆಟೀರಿಯಲ್ಸ್ ಕ್ಷೇತ್ರದ ಆರ್ಕೆಮಾ ಕಂಪೆನಿಯೊಂದಿಗಿನ ಮಾತುಕತೆಯೂ ಸಕಾರಾತ್ಮಕವಾಗಿ ನಡೆಯಿತು. ಮುಖ್ಯವಾಗಿ ಬ್ಯಾಟರಿ ಉತ್ಪಾದನೆಗೆ ಇರುವ ಸದವಕಾಶಗಳ ಬಗ್ಗೆ ಮನದಟ್ಟು ಮಾಡಿಕೊಡಲಾಗಿದೆ ಎಂದು ಪಾಟೀಲ್ ಮಾಹಿತಿ ನೀಡಿದ್ದಾರೆ.

ಮಾತುಕತೆಯಲ್ಲಿ ಲಿಸಿ ಏರೋಸ್ಪೇಸ್ ಕಂಪೆನಿಯ ಉನ್ನತ ಪ್ರತಿನಿಧಿಗಳಾದ ಫ್ರಾಂಕೋಯಿಸ್ ಕ್ಸೇವಿಯರ್, ಭಾರತದ ವಿಭಾಗದ ಮುಖ್ಯಸ್ಥ ಅನಿಲ್ ಚೌಧರಿ, ಆರ್ಕೆಮಾ ಕಂಪನಿಯ ಉಪಾಧ್ಯಕ್ಷ ಅಬ್ದುಲ್ ಖಾದರ್ ಕದ್ರಿ, ಮಾಥ್ಯೂ ಲಾರೆಂಟ್, ವರ್ಜಿನ್ ಗುರಿನ್, ಆಬರ್ಟ್ ಅಂಡ್ ಡುವನ್ ಸಿಎಫ್‍ಒ ಪ್ಯಾಟ್ರಿಕ್ ಭಾಗವಹಿಸಿದ್ದರು.

ಫ್ರಾನ್ಸ್ ಕನ್ನಡ ಬಳಗದ ಭೇಟಿ: ಪ್ಯಾರಿಸ್‍ನಲ್ಲಿ ಸಕ್ರಿಯವಾಗಿರುವ ‘ಫ್ರಾನ್ಸ್ ಕನ್ನಡ ಬಳಗ'ದ ಪದಾಧಿಕಾರಿಗಳು ಸಚಿವ ಎಂ.ಬಿ.ಪಾಟೀಲ್‍ರನ್ನು ಭೇಟಿಯಾಗಿದ್ದರು. ಈ ವೇಳೆ ಬಳಗದ ಸದಸ್ಯರು ಫ್ರಾನ್ಸ್ ಮತ್ತು ಕರ್ನಾಟಕದ ಬಲವರ್ಧನೆಗೆ ಅನೇಕ ಚಿಂತನೆಗಳನ್ನು ಹಂಚಿಕೊಂಡರು. ಜತೆಗೆ ಫ್ರಾನ್ಸ್‌ ನಲ್ಲಿ ಕನ್ನಡ ಸಂಸ್ಕೃತಿ, ಭಾಷೆ, ಸಾಂಸ್ಕೃತಿಕ ವಿನಿಮಯ, ವಿದ್ಯಾರ್ಥಿಗಳಿಗೆ ಒದಗಿಸಬೇಕಾದ ಅವಕಾಶ ಇತ್ಯಾದಿಗಳ ಬಗ್ಗೆ ವಿಚಾರ ವಿನಿಮಯ ನಡೆಸಲಾಯಿತು ಎಂದು ಪಾಟೀಲ್ ತಿಳಿಸಿದ್ದಾರೆ.

Tags

M.B.Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X